AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ರನ್ ಬಾರಿಸಿದ ಶ್ರೇಯಸ್ ಅಯ್ಯರ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ..!

ಮಳೆಬಾಧಿತ ಭಾರತ-ಜಪಾನ್ ಟಿ20 ಪಂದ್ಯದಲ್ಲಿ, ಬಲಿಷ್ಠ ಭಾರತೀಯ ಬ್ಯಾಟಿಂಗ್ ವಿಭಾಗ 5 ಓವರ್‌ಗಳಲ್ಲಿ ಕೇವಲ 32 ರನ್ ಗಳಿಸಿ ನಿರಾಸೆ ಮೂಡಿಸಿತು. ನಾಯಕ ಶ್ರೇಯಸ್ ಅಯ್ಯರ್ 16 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್‌ನೊಂದಿಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ದರು, ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು. ಆದರೂ, ಅಂತಿಮ ಓವರ್‌ನಲ್ಲಿ ಜಪಾನ್‌ನ ಗೆಲುವಿಗೆ ಅಡ್ಡಿಯಾದ ಅಕ್ಷರ್ ಪಟೇಲ್ ಅವರಿಗೆ ಪ್ರಶಸ್ತಿ ಸಿಗಬೇಕಿತ್ತು ಎಂಬ ಚರ್ಚೆ ನಡೆಯುತ್ತಿದೆ.

16 ರನ್ ಬಾರಿಸಿದ ಶ್ರೇಯಸ್ ಅಯ್ಯರ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ..!
ಶ್ರೇಯಸ್ ಅಯ್ಯರ್
ಪೃಥ್ವಿಶಂಕರ
|

Updated on: Sep 22, 2026 | 7:30 PM

Share

ಭಾರತ ಮತ್ತು ಜಪಾನ್ ನಡುವಿನ ಐತಿಹಾಸಿಕ ಟಿ20 ಪಂದ್ಯ ಮಳೆಯ ಅಡೆಚಣೆಯ ನಡುವೆಯೂ ಸುಖಾಂತ್ಯ ಕಂಡಿತು. ಪಂದ್ಯದ ಬಗ್ಗೆ ಘೋಷಣೆಯಾದಾಗಿನಿಂದ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆ ಏನೆಂದರೆ ದುರ್ಬಲ ಜಪಾನ್ ವಿರುದ್ಧ ಭಾರತದ ಬಲಿಷ್ಠ ಬ್ಯಾಟಿಂಗ್‌ ವಿಭಾಗ ಅಬ್ಬರಿಸಿ ಬೊಬ್ಬಿರಿಯುತ್ತದೆ ಎಂಬುದಾಗಿತ್ತು. ಆದರೆ ಮಳೆಯ ಕಾರಣದಿಂದಾಗಿ ಕೇವಲ 5 ಓವರ್​ಗಳ ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಮೊದಲ 6 ಓವರ್​ಗಳಲ್ಲಿ 100 ರನ್ ಬಾರಿಸುವ ಸಾಮರ್ಥ್ಯವಿರುವ ಟೀಂ ಇಂಡಿಯಾ ಜಪಾನ್ ವಿರುದ್ಧ 5 ಓವರ್‌ಗಳಲ್ಲಿ ಕೇವಲ 32 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಅದಕ್ಕಾಗಿ 4 ವಿಕೆಟ್‌ಗಳನ್ನು ಕಳೆದುಕೊಂಡಿತು. ಆದಾಗ್ಯೂ ತಂಡದ ಪರ 14 ರನ್​ಗಳ ಅತ್ಯಧಿಕ ರನ್​ಗಳ ಇನ್ನಿಂಗ್ಸ್ ಆಡಿದ ನಾಯಕ ಶ್ರೇಯಸ್ ಅಯ್ಯರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನ ಇನ್ನಿಂಗ್ಸ್​ಗಾಗಿ ಶ್ರೇಯಸ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.

ಜಪಾನ್‌ನ ಸಾನೋದಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತದ ಬ್ಯಾಟಿಂಗ್ ವಿಭಾಗ ಸಂಪೂರ್ಣ ವಿಫಲವಾಯಿತು. ಸ್ಫೋಟಕ ಬ್ಯಾಟ್ಸ್‌ಮನ್‌ಗಳಿಂದ ತುಂಬಿದ್ದ ಟೀಂ ಇಂಡಿಯಾ ಐದು ಓವರ್‌ಗಳಲ್ಲಿ ಕೇವಲ 32 ರನ್‌ ಮಾತ್ರ ಗಳಿಸಿತು. ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಮೊದಲ ಎಸೆತದಲ್ಲೇ ಔಟಾದರೆ, ಇಶಾನ್ ಕಿಶನ್ ಕೇವಲ ಐದು ಓವರ್‌ಗಳಲ್ಲಿ ಆರು ಎಸೆತಗಳನ್ನು ಎದುರಿಸಿ ಮೂರು ರನ್‌ ಬಾರಿಸಲಷ್ಟೇ ಶಕ್ತರಾದರು. ಆದಾಗ್ಯೂ ನಾಯಕ ಶ್ರೇಯಸ್ ಅಯ್ಯರ್ ಅವರ ನೆರವಿನಿಂದ ಭಾರತ ತಂಡ 32 ರನ್‌ಗಳನ್ನು ತಲುಪುವಲ್ಲಿ ಯಶಸ್ವಿಯಾಯಿತು.

ಅಯ್ಯರ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ

ಟೀಂ ಇಂಡಿಯಾ ಎಂಟು ಎಸೆತಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಕೇವಲ ಒಂಬತ್ತು ರನ್ ಗಳಿಸಿತ್ತು. ಈ ಹಂತದಲ್ಲಿ ಅಯ್ಯರ್ ಕ್ರೀಸ್‌ಗೆ ಬಂದರು. ಇನ್ನು 15 ಎಸೆತಗಳು ಬಾಕಿ ಇರುವಾಗ ಮೂರನೇ ವಿಕೆಟ್ 14 ರನ್​ಗಳಿಗೆ ಪತನವಾಯಿತು. ಹೀಗಾಗಿ ತಂಡವನ್ನು ಒಂದೊಳ್ಳೆ ಮೊತ್ತಕ್ಕೆ ಕೊಂಡೊಯ್ಯುವಲ್ಲಿ ಜವಾಬ್ದಾರಿ ನಾಯಕನ ಮೇಲಿತ್ತು. ಅದರಂತೆ ತಾಳ್ಮೆಯ ಇನ್ನಿಂಗ್ಸ್ ಆಡಿದ ಅಯ್ಯರ್, 12 ಎಸೆತಗಳಲ್ಲಿ 16 ರನ್ ಬಾರಿಸಿದರು. ಅಂತಿಮವಾಗಿ ತಂಡವು ಪಂದ್ಯವನ್ನು 2 ರನ್‌ಗಳಿಂದ ಗೆದ್ದುಕೊಂಡಿತು. ಹೀಗಾಗಿ ಅಯ್ಯರ್​​ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಸಿಕ್ಕಿತು. ಆದಾಗ್ಯೂ, ಸೋಶಿಯಲ್ ಮೀಡಿಯಾದಲ್ಲಿ ಅಯ್ಯರ್ ಅವರಿಗೆ ಈ ಪ್ರಶಸ್ತಿಯನ್ನು ನೀಡುವುದು ಸೂಕ್ತವೇ ಎಂಬ ಪ್ರಶ್ನೆಗಳೂ ಎದ್ದವು.

ನಾಯಕನಾಗಿ ಭಾರತದಲ್ಲಿ ಚೊಚ್ಚಲ ಟಿ20 ಸರಣಿ ಗೆದ್ದ ಶ್ರೇಯಸ್ ಅಯ್ಯರ್

ಅಕ್ಷರ್ ಪಟೇಲ್​ಗೆ ಸಿಗಬೇಕಿತ್ತು

ಈ ಪ್ರಶ್ನೆಗಳು ಹುಟ್ಟಿಕೊಂಡಿದ್ದು ಅಯ್ಯರ್ ಅವರ ಇನ್ನಿಂಗ್ಸ್ ತಂಡವನ್ನು ಆ ಸ್ಕೋರ್ ತಲುಪುವಂತೆ ಮಾಡಿತು, ಆದರೆ ಸ್ಪಿನ್ನರ್ ಅಕ್ಷರ್ ಪಟೇಲ್ ಜಪಾನ್ ಗುರಿ ತಲುಪುವುದನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಂತಿಮ ಓವರ್‌ನಲ್ಲಿ ಜಪಾನ್‌ಗೆ ಏಳು ರನ್‌ಗಳು ಬೇಕಾಗಿದ್ದರಿಂದ ಗುರಿ ತಲುಪುವುದು ಅಷ್ಟು ಕಷ್ಟಕರವಾಗಿರಲಿಲ್ಲ. ಆದರೆ ಅಕ್ಷರ್ ಪಟೇಲ್ ತಮ್ಮ ಎರಡು ಓವರ್‌ಗಳಲ್ಲಿ ಕೇವಲ ಏಳು ರನ್‌ಗಳನ್ನು ಬಿಟ್ಟುಕೊಡುವ ಮೂಲಕ ಜಪಾನ್ ತಂಡದ ಗೆಲುವನ್ನು ಕಸಿದುಕೊಂಡರು. ಹೀಗಾಗಿ ಅಕ್ಷರ್ ಪಟೇಲ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಗಬೇಕಿತ್ತು ಎಂಬುದು ಹಲವರ ಅಭಿಪ್ರಾಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ
ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ
ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ
ಕಾರು ತೆಗೆಸಿದ್ದಕ್ಕೆ ಡಿಸಿಪಿ ಯೋಗೇಶ್ ವಿರುದ್ಧ ಸಿದ್ಧರಾಮಯ್ಯ ಗರಂ
ಕಾರು ತೆಗೆಸಿದ್ದಕ್ಕೆ ಡಿಸಿಪಿ ಯೋಗೇಶ್ ವಿರುದ್ಧ ಸಿದ್ಧರಾಮಯ್ಯ ಗರಂ
ಕೆಪಿಎಸ್​ಸಿಯನ್ನೆ ಮುಚ್ಚಿದರೆ ಹೇಗೆಂದು ಚಿಂತನೆ ಮಾಡುತ್ತಿದ್ದೇವೆ: ಸಿಎಂ
ಕೆಪಿಎಸ್​ಸಿಯನ್ನೆ ಮುಚ್ಚಿದರೆ ಹೇಗೆಂದು ಚಿಂತನೆ ಮಾಡುತ್ತಿದ್ದೇವೆ: ಸಿಎಂ
ಇನ್ಸ್‌ಪೆಕ್ಟರ್ ಧನಂಜಯ್​ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ
ಇನ್ಸ್‌ಪೆಕ್ಟರ್ ಧನಂಜಯ್​ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ