ರೋಹಿತ್ ಪಡೆಗೆ ಬಿಗ್ ಶಾಕ್; ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಸ್ಟಾರ್ ಆಲ್​ರೌಂಡರ್ ಅಲಭ್ಯ..!

Asia Cup 2023: ಏಷ್ಯಾಕಪ್ ಫೈನಲ್‌ಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯುಂಟಾಗಿದ್ದು, ತಂಡದ ಸ್ಟಾರ್ ಆಲ್​ರೌಂಡರ್ ಅಕ್ಷರ್ ಪಟೇಲ್ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿದ್ದು, ಅವರ ಜಾಗದಲ್ಲಿ ವಾಷಿಂಗ್ಟನ್ ಸುಂದರ್ ತಂಡವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ಪಡೆಗೆ ಬಿಗ್ ಶಾಕ್; ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಸ್ಟಾರ್ ಆಲ್​ರೌಂಡರ್ ಅಲಭ್ಯ..!
ಟೀಂ ಇಂಡಿಯಾ
Follow us
|

Updated on:Sep 16, 2023 | 12:40 PM

ಏಷ್ಯಾಕಪ್ (Asia Cup 2023 Final) ಫೈನಲ್‌ಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯುಂಟಾಗಿದೆ. ತಂಡದ ಸ್ಟಾರ್ ಆಲ್​ರೌಂಡರ್ ಅಕ್ಷರ್ ಪಟೇಲ್ (Axar Patel) ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿದ್ದು, ಅವರ ಜಾಗದಲ್ಲಿ ವಾಷಿಂಗ್ಟನ್ ಸುಂದರ್ (Washington Sundar) ತಂಡವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕ್ರಿಕ್‌ಬಜ್ ವರದಿ ಪ್ರಕಾರ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತಂಡವನ್ನು ಸೇರಲು ಕೊಲಂಬೊಗೆ ತೆರಳಿದ್ದು, ಗಾಯಗೊಂಡಿರುವ ಅಕ್ಷರ್ ಪಟೇಲ್ ಬದಲಿಗೆ ಸುಂದರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ವರದಿ ಮಾಡಿದೆ. ವಾಸ್ತವವಾಗಿ ಬಾಂಗ್ಲಾದೇಶ ವಿರುದ್ಧದ ಸೂಪರ್ 4 ಸುತ್ತಿನ ಕೊನೆಯ ಪಂದ್ಯದಲ್ಲಿ ಅಕ್ಷರ್ ಪಟೇಲ್​ಗೆ ಟೀಂ ಇಂಡಿಯಾದಲ್ಲಿ (Team India) ಅವಕಾಶ ನೀಡಲಾಗಿತ್ತು. ಈ ಪಂದ್ಯದಲ್ಲಿ ಒಂದು ವಿಕೆಟ್ ಉರುಳಿಸಿದ ಅಕ್ಷರ್, ಬ್ಯಾಟಿಂಗ್​ನಲ್ಲಿ ತಂಡದ ಗೆಲುವಿಗಾಗಿ 42 ರನ್​ಗಳ ಹೋರಾಟದ ಇನ್ನಿಂಗ್ಸ್ ಕೂಡ ಆಡಿದ್ದರು. ಆದರೆ ಅಂತಿಮ ಹಂತದಲ್ಲಿ ವಿಕೆಟ್ ಕೈಚೆಲ್ಲಿದ ಅಕ್ಷರ್, ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾಗಿದ್ದರು. ಇದೇ ವೇಳೆ ರನ್ ಕದಿಯುವ ಯತ್ನದಲ್ಲಿ ಅಕ್ಷರ್ ತಮ್ಮ ಕೈ ಬೆರಳಿಗೆ ಗಾಯ ಕೂಡ ಮಾಡಿಕೊಂಡಿದ್ದರು.

ಇನ್ನು ಅಕ್ಷರ್ ಬದಲು ಟೀಂ ಇಂಡಿಯಾವನ್ನು ಸೇರಿಕೊಂಡಿರುವ ಸುಂದರ್ ಇತ್ತೀಚೆಗೆ ತಂಡದೊಂದಿಗೆ ಐರ್ಲೆಂಡ್ ಪ್ರವಾಸಕ್ಕೆ ತೆರಳಿದ್ದರು. ಈ ಪ್ರವಾಸದಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳನ್ನು ಆಡಿದ್ದರು. ಆದರೆ, ಎರಡೂ ಪಂದ್ಯಗಳಲ್ಲಿ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಿರುವಾಗ ಫಾರ್ಮ್​ನಲ್ಲಿರದ ಸುಂದರ್​ಗೆ ಮತ್ತೆ ತಂಡದಲ್ಲಿ ಅವಕಾಶ ನೀಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಭಾರತ-ಶ್ರೀಲಂಕಾ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ?: ಇಲ್ಲಿದೆ ಹವಾಮಾನ ವರದಿ

ಗಾಯದ ಬಗ್ಗೆ ನಿಖರ ಮಾಹಿತಿ ಇಲ್ಲ

ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಇಂಜುರಿಗೆ ತುತ್ತಾಗಿದ್ದ ಅಕ್ಷರ್ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದರ ಕುರಿತು ಪರಿಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅವರು ಫೈನಲ್ ಆಡುವ ಬಗ್ಗೆ ಅನುಮಾನವಿರುವುದರಿಂದ ಸುಂದರ್ ಅವರನ್ನು ಅವರ ಬ್ಯಾಕಪ್ ಆಟಗಾರನಾಗಿ ತಂಡಕ್ಕೆ ಕರೆತರಲಾಗಿದೆ. ಸುಂದರ್ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವ ಭಾರತ ತಂಡದಲ್ಲಿ ಆಯ್ಕೆಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಅಕ್ಷರ್ 34 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡ 42 ರನ್ ಬಾರಿಸಿದ್ದರು. ಇನ್ನು ಒಂಬತ್ತು ಓವರ್ ಬೌಲ್ ಮಾಡಿದ ಅವರು 47 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು.

ಪ್ಲೇಯಿಂಗ್-11ರಲ್ಲಿ ಸ್ಥಾನ?

ಈಗ ಸುಂದರ್‌ಗೆ ನೇರವಾಗಿ ಫೈನಲ್‌ ಆಡುವ ಅವಕಾಶ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ. ಏಕೆಂದರೆ ಶ್ರೀಲಂಕಾ ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಹೊಂದಿದೆ. ಆದರೆ ಟೀಂ ಇಂಡಿಯಾದಲ್ಲಿ ಯಾವುದೇ ಬಲಗೈ ಆಫ್ ಸ್ಪಿನ್ನರ್ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ, ಸುಂದರ್​ಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿವೆ. ಆದರೆ, ಟೀಂ ಇಂಡಿಯಾ ಫೈನಲ್‌ನಲ್ಲಿ ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದರೆ ಮಾತ್ರ ಸುಂದರ್​ಗೆ ಅವಕಾಶ ಸಿಗಲಿದೆ. ಒಂದು ವೇಳೆ ಭಾರತ ಮೂರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದರೆ ಸುಂದರ್ ಹೊರಗುಳಿಯಬೇಕಾಗುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Sat, 16 September 23