ICC Awards: ಏಕದಿನ ಕ್ರಿಕೆಟ್​ನ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾಕ್ ತಂಡದ ನಾಯಕ ಬಾಬರ್ ಅಜಮ್ ಆಯ್ಕೆ

Babar Azam: ಪಾಕಿಸ್ತಾನ ಕ್ರಿಕೆಟ್​ ತಂಡದ ನಾಯಕ ಬಾಬರ್ ಅಜಮ್ ಅವರನ್ನು ಐಸಿಸಿ ವರ್ಷದ ಪುರುಷರ ODI ಕ್ರಿಕೆಟಿಗ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

ICC Awards: ಏಕದಿನ ಕ್ರಿಕೆಟ್​ನ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾಕ್ ತಂಡದ ನಾಯಕ ಬಾಬರ್ ಅಜಮ್ ಆಯ್ಕೆ
ಬಾಬರ್ ಅಜಮ್
Follow us
TV9 Web
| Updated By: ಪೃಥ್ವಿಶಂಕರ

Updated on: Jan 24, 2022 | 3:25 PM

ಪಾಕಿಸ್ತಾನ ಕ್ರಿಕೆಟ್​ ತಂಡದ ನಾಯಕ ಬಾಬರ್ ಅಜಮ್ ಅವರನ್ನು ಐಸಿಸಿ ವರ್ಷದ ಪುರುಷರ ODI ಕ್ರಿಕೆಟಿಗ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯ ರೇಸ್​ನಲ್ಲಿ ಅವರು ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಐರ್ಲೆಂಡ್‌ನ ಪಾಲ್ ಸ್ಟಿರ್ಲಿಂಗ್ ಮತ್ತು ದಕ್ಷಿಣ ಆಫ್ರಿಕಾದ ಯೆನೆಮನ್ ಮಲಾನ್ ಅವರನ್ನು ಹಿಂದಿಕ್ಕಿದ್ದಾರೆ. ಬಾಬರ್ ವರ್ಷದ ಏಕದಿನ ಕ್ರಿಕೆಟಿಗ ಎನಿಸಿಕೊಂಡ ಮೊದಲ ಪಾಕಿಸ್ತಾನಿ ಆಟಗಾರ ಆಗಿದ್ದಾರೆ. ವರ್ಷದ ODI ಕ್ರಿಕೆಟಿಗನ ರೇಸ್‌ನಲ್ಲಿ ಸೇರ್ಪಡೆಗೊಂಡ ಶಕೀಬ್ ಅಲ್ ಹಸನ್, ಯೆನೆಮನ್ ಮಲಾನ್ ಮತ್ತು ಪಾಲ್ ಸ್ಟಿರ್ಲಿಂಗ್, 2021 ರಲ್ಲಿ ODI ಕ್ರಿಕೆಟ್‌ನಲ್ಲಿ ಸಹ ಅದ್ಭುತ ಆಟ ಪ್ರದರ್ಶಿಸಿದ್ದಾರೆ.

ಬಾಬರ್ ಅಜಮ್ 2021 ರಲ್ಲಿ ಆರು ಪಂದ್ಯಗಳಲ್ಲಿ ಎರಡು ಶತಕಗಳ ಸಹಾಯದಿಂದ 405 ರನ್ ಗಳಿಸಿದರು. ಈ ಸಮಯದಲ್ಲಿ ಅವರ ಸರಾಸರಿ 67.50 ಆಗಿತ್ತು. ಕೇವಲ ಆರು ಏಕದಿನ ಪಂದ್ಯಗಳನ್ನು ಆಡಿದ್ದರೂ ಎರಡರಲ್ಲೂ ಅವರ ಪಾತ್ರ ದೊಡ್ಡದಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅತಿ ಹೆಚ್ಚು 228 ರನ್ ಗಳಿಸಿದರು. ಈ ವೇಳೆ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದರು. ನಂತರ ಕೊನೆಯ ಏಕದಿನ ಪಂದ್ಯದಲ್ಲಿ 94 ರನ್‌ಗಳ ಇನಿಂಗ್ಸ್‌ ಆಡಿದ್ದರು. ಮತ್ತೊಂದೆಡೆ, ಇಂಗ್ಲೆಂಡ್ ಪ್ರವಾಸದಲ್ಲಿ ಪಾಕಿಸ್ತಾನ 3-0 ಅಂತರದಿಂದ ಸೋಲು ಎದುರಿಸಬೇಕಾಯಿತು. ಆದರೆ ಇದರಲ್ಲಿ ಅವರು 177 ರನ್ ಗಳಿಸಿದರು. ಈ ವೇಳೆ ಅವರು ಕೊನೆಯ ಏಕದಿನ ಪಂದ್ಯದಲ್ಲಿ 158 ರನ್‌ಗಳ ಇನ್ನಿಂಗ್ಸ್‌ ಕೂಡ ಆಡಿದ್ದರು.

ಬಾಬರ್‌ಗೆ 2021 ಸುವರ್ಣ ವರ್ಷ ಬಾಬರ್ ಅಜಮ್ ಕಳೆದ ಒಂದು ವರ್ಷದಲ್ಲಿ ಪಾಕಿಸ್ತಾನ ತಂಡದ ನಾಯಕತ್ವವನ್ನೂ ವಹಿಸಿಕೊಂಡು ಇಲ್ಲಿಯೂ ಯಶಸ್ಸು ಸಾಧಿಸಿದ್ದಾರೆ. ಅವರ ನಾಯಕತ್ವದಲ್ಲಿ ಪಾಕಿಸ್ತಾನವು ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಮೊದಲ ಬಾರಿಗೆ ಸೋಲಿಸಿತು. ಅವರು 2021 ರ ODI ತಂಡದ ನಾಯಕರಾಗಿ ಮತ್ತು ICC ಪ್ರಶಸ್ತಿಗಳಲ್ಲಿ T20 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಪುರುಷರ ಕ್ರಿಕೆಟ್‌ನಲ್ಲಿ 2021 ರ ವರ್ಷದ ಟಿ20 ಕ್ರಿಕೆಟಿಗರಾಗಿ ಆಯ್ಕೆಯಾದರು.

ಬಾಬರ್‌ನ ವೃತ್ತಿಜೀವನ ಹೀಗಿದೆ ಬಾಬರ್ ಇದುವರೆಗೆ 37 ಟೆಸ್ಟ್‌ಗಳಲ್ಲಿ 43.18 ಸರಾಸರಿಯಲ್ಲಿ 2461 ರನ್ ಗಳಿಸಿದ್ದಾರೆ. ಅವರ ಹೆಸರಿನಲ್ಲಿ ಐದು ಶತಕ ಮತ್ತು 19 ಅರ್ಧ ಶತಕಗಳಿವೆ. ಅದೇ ಸಮಯದಲ್ಲಿ, 83 ODIಗಳಲ್ಲಿ 56.93 ಸರಾಸರಿಯಲ್ಲಿ 3985 ರನ್ ಗಳಿಸಿದ್ದಾರೆ. ಈ ಮಾದರಿಯಲ್ಲಿ ಅವರು 14 ಶತಕ ಮತ್ತು 17 ಅರ್ಧ ಶತಕಗಳನ್ನು ಹೊಂದಿದ್ದಾರೆ. ಅದೇ ಸಮಯದಲ್ಲಿ, 73 ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ, ಅವರು 45.17 ರ ಸರಾಸರಿಯಲ್ಲಿ 2620 ರನ್ ಗಳಿಸಿದ್ದಾರೆ. ಇಲ್ಲಿ ಅವರು ಶತಕ ಮತ್ತು 25 ಅರ್ಧಶತಕಗಳನ್ನು ಗಳಿಸಿದ್ದಾರೆ.

ಪ್ರಸ್ತುತ ಐಸಿಸಿ ಶ್ರೇಯಾಂಕದಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಅಗ್ರ-10 ರ ಭಾಗವಾಗಿರುವ ಏಕೈಕ ಆಟಗಾರ ಬಾಬರ್. ಅವರು ಟೆಸ್ಟ್‌ನಲ್ಲಿ ಒಂಬತ್ತನೇ, ODIನಲ್ಲಿ ಮೊದಲ ಮತ್ತು T20 ಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?