ಡ್ರೆಸ್ಸಿಂಗ್ ರೂಮ್​ ಜಗಳದ ಬಗ್ಗೆ ಮೌನ ಮುರಿದ ಬಾಬರ್ ಆಝಂ

ICC ODI World Cup 2023: ಏಕದಿನ ವಿಶ್ವಕಪ್​ನಲ್ಲಿ ಪಾಕ್ ತಂಡವು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಬಾಬರ್, ಅಗ್ರ ನಾಲ್ಕು ಎಂಬುದು ತುಂಬಾ ದೂರ. ನಾವು ನಂಬರ್ 1 ಆಗುತ್ತೇವೆ. ವಿಶ್ವಕಪ್ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಪಾಕಿಸ್ತಾನ್ ತಂಡದ ನಾಯಕ ತಿಳಿಸಿದ್ದಾರೆ.

ಡ್ರೆಸ್ಸಿಂಗ್ ರೂಮ್​ ಜಗಳದ ಬಗ್ಗೆ ಮೌನ ಮುರಿದ ಬಾಬರ್ ಆಝಂ
Babar Azam
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 26, 2023 | 8:15 PM

ಏಕದಿನ ವಿಶ್ವಕಪ್​ಗಾಗಿ ಭಾರತಕ್ಕೆ ಬರಲು ಪಾಕಿಸ್ತಾನ್ ತಂಡ ಸಜ್ಜಾಗಿದೆ. ಮಂಗಳವಾರ ಮಧ್ಯರಾತ್ರಿ ದುಬೈನಿಂದ ಪಾಕ್ ತಂಡ ಹೊರಡಲಿದ್ದು, ಬುಧವಾರ ಹೈದಾರಾಬಾದ್​ಗೆ ತಲುಪಲಿದ್ದಾರೆ. ಇದಕ್ಕೂ ಮುನ್ನ ಪಾಕ್ ತಂಡದ ನಾಯಕ ಬಾಬರ್ ಆಝಂ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಏಷ್ಯಾಕಪ್​ ಬೆನ್ನಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪಾಕಿಸ್ತಾನ್ ತಂಡದ ಡ್ರೆಸ್ಸಿಂಗ್ ರೂಮ್ ಜಗಳದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ್ದಾರೆ.

ಈ ಬಗ್ಗೆ ಮಾತನಾಡಿದ ಬಾಬರ್ ಆಝಂ, ಪಾಕ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಕೇವಲ ವದಂತಿ. ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು ನಿಜ. ಆದರೆ ಇದರ ನಂತರ ಪಾಕಿಸ್ತಾನ್ ತಂಡದಲ್ಲಿ ಒಡಕು ಉಂಟಾಗಿದೆ. ಆಟಗಾರರು ಪರಸ್ಪರ ಜಗಳವಾಡಿದ್ದಾರೆ ಎಂಬುದು ಕೇವಲ ಸುಳ್ಳು ಸುದ್ದಿಗಳು.

ಮಾಧ್ಯಮಗಳು ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತವೆ. ಪಾಕಿಸ್ತಾನಿ ಆಟಗಾರರಲ್ಲಿ ಯಾವುದೇ ವೈಮನಸ್ಸಿಲ್ಲ. ಆಟಗಾರರ ನಡುವೆ ಜಗಳ ಕೂಡ ಆಗಿಲ್ಲ. ಎಲ್ಲಾ ಆಟಗಾರರು ಪರಸ್ಪರ ಪ್ರೀತಿಯಿಂದ ಒಂದೇ ಕುಟುಂಬದಂತಿದ್ದಾರೆ. ಇದಾಗ್ಯೂ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ ಎಂದು ಬಾಬರ್ ಆಝಂ ತಿಳಿಸಿದರು.

ಇದೇ ವೇಳೆ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕ್ ತಂಡವು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಬಾಬರ್, ಅಗ್ರ ನಾಲ್ಕು ಎಂಬುದು ತುಂಬಾ ದೂರ. ನಾವು ನಂಬರ್ 1 ಆಗುತ್ತೇವೆ. ವಿಶ್ವಕಪ್ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಪಾಕಿಸ್ತಾನ್ ತಂಡದ ನಾಯಕ ತಿಳಿಸಿದ್ದಾರೆ.

ಪಾಕ್ ಪಡೆಯ ಮೇಲೆ ವಿಶ್ವಾಸವಿದೆ:

ಪಾಕ್ ತಂಡದ ಎಲ್ಲಾ 15 ಆಟಗಾರರ ಮೇಲೆ ನನಗೆ ವಿಶ್ವಾಸವಿದೆ. ತನಗಿಂತ ಆಟಗಾರರ ಮೇಲೆ ನನಗೆ ಹೆಚ್ಚಿನ ವಿಶ್ವಾಸವಿದೆ ಎಂದು ಬಾಬರ್ ಆಝಂ ಹೇಳಿದ್ದಾರೆ. ಏಕೆಂದರೆ ಆಟಗಾರರು ನಿರಂತರವಾಗಿ ತಂಡವನ್ನು ಪಂದ್ಯಗಳನ್ನು ಗೆಲ್ಲುವಂತೆ ಮಾಡಿದ್ದಾರೆ. ಹೀಗಾಗಿಯೇ ಪಾಕಿಸ್ತಾನ್ ತಂಡ ಎಲ್ಲೆಡೆ ಗೆದ್ದು ನಂಬರ್ 1 ಸ್ಥಾನಕ್ಕೇರಿದೆ. ಹೀಗಾಗಿ ಈ ತಂಡದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಂಬರ್ 1 ಪಟ್ಟಕ್ಕಾಗಿ ಏಕದಿನ ವಿಶ್ವಕಪ್​ನಲ್ಲಿ ಬಾಬರ್-ಶುಭ್​ಮನ್ ನಡುವೆ ಪೈಪೋಟಿ

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಝ್ವಾನ್, ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಸಲ್ಮಾನ್ ಅಲಿ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಮಿರ್, ಶಾಹೀನ್ ಶಾ ಆಫ್ರಿದಿ, ಹಸನ್ ಅಲಿ, ಹಾರಿಸ್ ರೌಫ್, ಮೊಹಮ್ಮದ್ ವಾಸಿಂ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್