Virat Kohli: ಲಯ ತಪ್ಪಿದ ಕೊಹ್ಲಿಯ ಮುಂದೆ ಬಾಬರ್​ನ ಆರ್ಭಟ..!

Babar Azam: ಕಳೆದೊಂದು ವರ್ಷದಿಂದ ವಿರಾಟ್ ಕೊಹ್ಲಿ ಬ್ಯಾಟಿಂಗ್​ನಲ್ಲಿ ಹಳಿ ತಪ್ಪಿದ್ದರೆ, ಇತ್ತ ಬಾಬರ್ ಆಜಂ ಅತ್ಯುತ್ತಮ ಫಾರ್ಮ್​ ಅನ್ನು ಮುಂದುವರೆಸಿದ್ದಾರೆ.

Virat Kohli: ಲಯ ತಪ್ಪಿದ ಕೊಹ್ಲಿಯ ಮುಂದೆ ಬಾಬರ್​ನ ಆರ್ಭಟ..!
Babar Azam vs Virat kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 09, 2022 | 3:33 PM

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ (Babar Azam) ನಡುವೆ ಹೋಲಿಕೆಗಳು ಇಂದು ನಿನ್ನೆ ಶುರುವಾಗಿದ್ದಲ್ಲ. ಮಾಸ್ಟರ್​ ಆಫ್ ಕವರ್​ ಡ್ರೈವ್ ಎಂದು ಗುರುತಿಸಿಕೊಂಡಿರುವ ಇಬ್ಬರು ಸ್ಥಿರ ಪ್ರದರ್ಶನದ ಮೂಲಕ ಇಡೀ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದರು. ಇದಾಗ್ಯೂ ಬಾಬರ್ ವಿರಾಟ್ ಕೊಹ್ಲಿಗೆ ಸರಿಸಾಟಿಯಲ್ಲ ಎಂಬುದಕ್ಕೆ ಕಾರಣವಾಗಿದ್ದು, ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ ಅಲಂಕರಿಸಿದ್ದ ಉನ್ನತ ಸ್ಥಾನ. ಆದರೆ ಇದೀಗ ಬಾಬರ್ ಆಜಂ ಕೂಡ ಮೂರು ಮಾದರಿಯ ರ್ಯಾಂಕಿಂಗ್ ಪಟ್ಟಿಯಲ್ಲೂ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಅಲ್ಲದೆ ಟಿ20 ಹಾಗೂ ಏಕದಿನ ಕ್ರಿಕೆಟ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ. ಮತ್ತೊಂದೆಡೆ ಟೆಸ್ಟ್​ನಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಟಿ20 ಟಾಪ್ 10 ರ್ಯಾಂಕಿಂಗ್​ನಿಂದ ಹೊರಬಿದ್ದಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 2ನೇ ಸ್ಥಾನದಲ್ಲಿದ್ದರೆ, ಟೆಸ್ಟ್​ನಲ್ಲಿ 10ನೇ ಸ್ಥಾನದಲ್ಲಿದ್ದಾರೆ.

ಅಂದರೆ ಕಳೆದೊಂದು ವರ್ಷದಿಂದ ವಿರಾಟ್ ಕೊಹ್ಲಿ ಬ್ಯಾಟಿಂಗ್​ನಲ್ಲಿ ಹಳಿ ತಪ್ಪಿದ್ದರೆ, ಇತ್ತ ಬಾಬರ್ ಆಜಂ ಅತ್ಯುತ್ತಮ ಫಾರ್ಮ್​ ಅನ್ನು ಮುಂದುವರೆಸಿದ್ದಾರೆ. ಇದಕ್ಕೆ ಸಾಕ್ಷಿಯೇ ಬಾಬರ್ ಇದೀಗ ಬ್ಯಾಕ್ ಟು ಬ್ಯಾಕ್ 3 ಶತಕ ಬಾರಿಸಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿದಿರುವುದು. ಇದಾಗ್ಯೂ ಬಾಬರ್​ ಜಿಂಬಾಬ್ವೆ, ಬಾಂಗ್ಲಾದೇಶ, ಅಫ್ಘಾನಿಸ್ತಾನ್​ನಂತಹ ತಂಡಗಳ ವಿರುದ್ದ ಅಬ್ಬರಿಸುವ ಬ್ಯಾಟ್ಸ್​ಮನ್​ ಎಂದು ವ್ಯಂಗ್ಯವಾಡಲಾಗುತ್ತದೆ. ಆದರೆ ಬಾಬರ್​ ಆಜಂ ಈ ಬಾರಿ ಬಾರಿಸಿರುವ ಹ್ಯಾಟ್ರಿಕ್​ ಶತಕ ಮೂಡಿಬಂದಿದ್ದು ಆಸ್ಟ್ರೇಲಿಯಾ (2) ಹಾಗೂ ವೆಸ್ಟ್​ ಇಂಡೀಸ್​ (1) ವಿರುದ್ದ ಎಂಬುದು ವಿಶೇಷ. ಅಲ್ಲದೆ ಕೊನೆಯ ಐದು ಏಕದಿನ ಇನಿಂಗ್ಸ್​ನಲ್ಲಿ ಇಂಗ್ಲೆಂಡ್​ ವಿರುದ್ದ 158 ರನ್​ ಬಾರಿಸಿದ್ದರೆ, ಆಸ್ಟ್ರೇಲಿಯಾ ವಿರುದ್ದ 114, 105 ಮತ್ತು 57 ರನ್​ ಸಿಡಿಸಿದ್ದಾರೆ. ಹಾಗೆಯೇ ವೆಸ್ಟ್ ಇಂಡೀಸ್ ವಿರುದ್ದ 103 ರನ್​ ಬಾರಿಸಿ ಮಿಂಚಿದ್ದಾರೆ.

ಇತ್ತ ವಿರಾಟ್ ಕೊಹ್ಲಿ ಕಳೆದ 2 ವರ್ಷಗಳಿಂದ ಒಂದೇ ಒಂದು ಶತಕ ಬಾರಿಸಿಲ್ಲ ಎಂಬುದೇ ಅಚ್ಚರಿ. ಅಂದರೆ ಇಲ್ಲಿ ವಿರಾಟ್ ಕೊಹ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದ್ದಾರೆ. ಆದರೆ ಅತ್ತ ಭರ್ಜರಿ ಬ್ಯಾಟಿಂಗ್ ಮೂಲಕ ಬಾಬರ್ ಆಜಂ ತಾನೇ ಬೆಸ್ಟ್ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಇದಕ್ಕೆ ಸಾಕ್ಷಿಯೇ ಕಳೆದ 3 ವರ್ಷಗಳ ಅಂಕಿ ಅಂಶಗಳು.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ನವೆಂಬರ್ 2019 ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳ ಅಂಕಿ ಅಂಶಗಳನ್ನು ನೋಡುವುದಾದರೆ, ಬಾಬರ್ ಆಜಮ್ ಒಟ್ಟು 11 ಶತಕಗಳನ್ನು ಬಾರಿಸಿದ್ದಾರೆ. ಆದರೆ ವಿರಾಟ್ ಕೊಹ್ಲಿ ಒಮ್ಮೆಯೂ ಮೂರಂಕಿ ರನ್​ಗಳಿಸಲು ಸಾಧ್ಯವಾಗಿಲ್ಲ. ಇನ್ನು ಈ ಅವಧಿಯಲ್ಲಿ ಸರಾಸರಿ ಸ್ಟ್ರೈಕ್ ರೇಟ್‌ನಲ್ಲಿ ಬಾಬರ್ ತುಂಬಾ ಮುಂದಿದ್ದಾರೆ. ಕೊಹ್ಲಿ 72 ಸ್ಟ್ರೈಕ್ ರೇಟ್ ಹೊಂದಿದ್ದರೆ, ಬಾಬರ್ 81 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದಾರೆ.

ಇನ್ನು ಬಾಬರ್ ಕಳೆದ 3 ವರ್ಷಗಳಲ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್​ನಲ್ಲಿನ 69 ಪಂದ್ಯಗಳಲ್ಲಿ 57 ರ ಸರಾಸರಿಯಲ್ಲಿ 3797 ರನ್ ಗಳಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಈ ಅವಧಿಯಲ್ಲಿ ವಿಶ್ವದ ಯಾವುದೇ ಬ್ಯಾಟ್ಸ್‌ಮನ್ ಇಷ್ಟೊಂದು ರನ್ ಗಳಿಸಲು ಸಾಧ್ಯವಾಗಿಲ್ಲ ಎಂಬುದು. ಈ ವೇಳೆ 11 ಶತಕ ಮತ್ತು 27 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಂದರೆ 38 ಬಾರಿ 50ಕ್ಕೂ ಹೆಚ್ಚು ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಅವಧಿಯಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನವನ್ನು ಗಮನಿಸಿದರೆ, 63 ಪಂದ್ಯಗಳಲ್ಲಿ 38 ರ ಸರಾಸರಿಯಲ್ಲಿ 2478 ರನ್ ಗಳಿಸಿದ್ದಾರೆ. ಈ ವೇಳೆ ಕೊಹ್ಲಿ 24 ಅರ್ಧಶತಕಗಳನ್ನು ಮಾತ್ರ ಬಾರಿಸಿದ್ದಾರೆ.

ಅಂದರೆ ವಿರಾಟ್ ಕೊಹ್ಲಿ ಕಳೆದ ಮೂರು ವರ್ಷಗಳಲ್ಲಿ ಒಂದು ಶತಕವನ್ನು ಎದುರು ನೋಡುತ್ತಿದ್ದರೆ, ಬಾಬರ್ ಆಜಂ 11 ಶತಕ ಹಾಗೂ 27 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಅಷ್ಟೇ ಅಲ್ಲದೆ ಟಿ20 ಹಾಗೂ ಏಕದಿನ ಕ್ರಿಕೆಟ್​ ರ್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ. ಹೀಗಾಗಿಯೇ ಟಿ20, ಟೆಸ್ಟ್​ ಹಾಗೂ ಏಕದಿನ ಕ್ರಿಕೆಟ್​ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸುವ ಮೊದಲ ಆಟಗಾರನಾಗಿ ಬಾಬರ್​ ಆಜಂ ಹೊರಹೊಮ್ಮಲಿದ್ದಾರೆ ಎಂದು ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಭವಿಷ್ಯ ನುಡಿದಿದ್ದರು. ಪ್ರಸ್ತುತ ಬಾಬರ್ ಆಜಂ ಫಾರ್ಮ್​ ಗಮನಿಸಿದರೆ ದಿನೇಶ್ ಕಾರ್ತಿಕ್ ಅವರ ಭವಿಷ್ಯ ನಿಜವಾದರೂ ಅಚ್ಚರಿಪಡಬೇಕಿಲ್ಲ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:32 pm, Thu, 9 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್