Babar Azam: 2 ವರ್ಷಗಳ ಬಳಿಕ ಶತಕ ಬಾರಿಸಿ ವಿಶ್ವ ದಾಖಲೆ ಬರೆದ ಬಾಬರ್

Babar Azam World Record: ಈ ಮೂಲಕ 2 ವರ್ಷಗಳ ಬಳಿಕ ಬಾರಿಸಿದ ಶತಕದೊಂದಿಗೆ ಬಾಬರ್ ಆಜಂ ಎರಡು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Babar Azam: 2 ವರ್ಷಗಳ ಬಳಿಕ ಶತಕ ಬಾರಿಸಿ ವಿಶ್ವ ದಾಖಲೆ ಬರೆದ ಬಾಬರ್
Babar Azam
Follow us
TV9 Web
| Updated By: ಝಾಹಿರ್ ಯೂಸುಫ್

Updated on:Mar 16, 2022 | 5:54 PM

ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ (Babar Azam) ಶತಕ ಸಿಡಿಸಿ ಬರೋಬ್ಬರಿ 2 ವರ್ಷಗಳೇ ಕಳೆದಿದ್ದವು. 2020 ರಲ್ಲಿ ಬಾಂಗ್ಲಾದೇಶ ವಿರುದ್ದ ಕೊನೆಯ ಬಾರಿಗೆ ಶತಕ ಬಾರಿಸಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ದದ ಕರಾಚಿಯಲ್ಲಿ (Australia vs Pakistan) ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ದೀರ್ಘಾವಧಿಯ ಶತಕದ ಬರ ನೀಗಿಸಿದ್ದಾರೆ. ಅಷ್ಟೇ ಅಲ್ಲದೆ ಈ ಶತಕದೊಂದಿಗೆ ವಿಶ್ವ ದಾಖಲೆಯನ್ನೂ ಕೂಡ ಬರೆದಿರುವುದು ವಿಶೇಷ. 4ನೇ ದಿನಾಟದಲ್ಲಿ ಶತಕ ಪೂರೈಸಿದ್ದ ಬಾಬರ್ ಐದನೇ ದಿನದಾಟದಲ್ಲಿ 196 ರನ್​ಗಳಿಸಿ ಔಟಾದರು.

ತಮ್ಮ ವೈಯುಕ್ತಿಕ ಸ್ಕೋರ್ 186 ರನ್​ ಆಗುತ್ತಿದ್ದಂತೆ ಬಾಬರ್ ಆಜಂ ಹೆಸರಿಗೆ ವಿಶ್ವ ದಾಖಲೆಯೊಂದು ಸೇರ್ಪಡೆಯಾಯಿತು. ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ನಾಲ್ಕನೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ಇದೀಗ ಬಾಬರ್ ಪಾಲಾಗಿದೆ. ಈ ಹಿಂದೆ ಈ ವಿಶ್ವ ದಾಖಲೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ಅಥರ್ಟನ್ ಹೆಸರಿನಲ್ಲಿತ್ತು.

ಮೈಕಲ್ ಅಥರ್ಟನ್ 1995 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 185 ರನ್ ಗಳಿಸಿ ದಾಖಲೆ ಬರೆದಿದ್ದರು. ಇದೀಗ ಬಾಬರ್ ಆ ಈ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕನೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಪಾಕಿಸ್ತಾನದ ನಾಯಕ ಎಂಬ ಹೆಗ್ಗಳಿಕೆಗೂ ಬಾಬರ್ ಪಾತ್ರರಾಗಿದ್ದಾರೆ. ಈ ಮೂಲಕ 2 ವರ್ಷಗಳ ಬಳಿಕ ಬಾರಿಸಿದ ಶತಕದೊಂದಿಗೆ ಬಾಬರ್ ಆಜಂ ಎರಡು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪಾಕಿಸ್ತಾನ್-ಆಸ್ಟ್ರೇಲಿಯಾ 2ನೇ ಟೆಸ್ಟ್: ಪಾಕಿಸ್ತಾನ್ – ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಡ್ರಾನತ್ತ ಸಾಗಿದೆ. ಮೊದಲ ಇನಿಂಗ್ಸ್​ನಲ್ಲಿ 556 ರನ್​ ಬಾರಿಸಿ ಆಸ್ಟ್ರೇಲಿಯಾ ತಂಡವು ಡಿಕ್ಲೇರ್ ಮಾಡಿಕೊಂಡಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ಕೇವಲ 148 ರನ್​ಗಳಿಗೆ ಆಲೌಟ್ ಆಗಿತ್ತು. ಇನ್ನು 2ನೇ ಇನಿಂಗ್ಸ್​ನಲ್ಲಿ 2 ವಿಕೆಟ್ ನಷ್ಟಕ್ಕೆ 97 ರನ್​ಗಳಿಸಿ ಆಸ್ಟ್ರೇಲಿಯಾ ಡಿಕ್ಲೇರ್ ಮಾಡಿಕೊಂಡಿತು. ಬೃಹತ್ ಮೊತ್ತದ ಗುರಿ ಪಡೆದ ಪಾಕಿಸ್ತಾನ್​ಗೆ ಅಂತಿಮ ದಿನದಾಟದಲ್ಲಿ ಗೆಲ್ಲಲು 314 ರನ್​ಗಳ ಅವಶ್ಯಕತೆಯಿತ್ತು.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(Babar Azam Create New World Record)

Published On - 4:57 pm, Wed, 16 March 22

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?