ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ (Babar Azam) ಶತಕ ಸಿಡಿಸಿ ಬರೋಬ್ಬರಿ 2 ವರ್ಷಗಳೇ ಕಳೆದಿದ್ದವು. 2020 ರಲ್ಲಿ ಬಾಂಗ್ಲಾದೇಶ ವಿರುದ್ದ ಕೊನೆಯ ಬಾರಿಗೆ ಶತಕ ಬಾರಿಸಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ದದ ಕರಾಚಿಯಲ್ಲಿ (Australia vs Pakistan) ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ದೀರ್ಘಾವಧಿಯ ಶತಕದ ಬರ ನೀಗಿಸಿದ್ದಾರೆ. ಅಷ್ಟೇ ಅಲ್ಲದೆ ಈ ಶತಕದೊಂದಿಗೆ ವಿಶ್ವ ದಾಖಲೆಯನ್ನೂ ಕೂಡ ಬರೆದಿರುವುದು ವಿಶೇಷ. 4ನೇ ದಿನಾಟದಲ್ಲಿ ಶತಕ ಪೂರೈಸಿದ್ದ ಬಾಬರ್ ಐದನೇ ದಿನದಾಟದಲ್ಲಿ 196 ರನ್ಗಳಿಸಿ ಔಟಾದರು.
ತಮ್ಮ ವೈಯುಕ್ತಿಕ ಸ್ಕೋರ್ 186 ರನ್ ಆಗುತ್ತಿದ್ದಂತೆ ಬಾಬರ್ ಆಜಂ ಹೆಸರಿಗೆ ವಿಶ್ವ ದಾಖಲೆಯೊಂದು ಸೇರ್ಪಡೆಯಾಯಿತು. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ನಾಲ್ಕನೇ ಇನಿಂಗ್ಸ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಇದೀಗ ಬಾಬರ್ ಪಾಲಾಗಿದೆ. ಈ ಹಿಂದೆ ಈ ವಿಶ್ವ ದಾಖಲೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ಅಥರ್ಟನ್ ಹೆಸರಿನಲ್ಲಿತ್ತು.
ಮೈಕಲ್ ಅಥರ್ಟನ್ 1995 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 185 ರನ್ ಗಳಿಸಿ ದಾಖಲೆ ಬರೆದಿದ್ದರು. ಇದೀಗ ಬಾಬರ್ ಆ ಈ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕನೇ ಇನಿಂಗ್ಸ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಪಾಕಿಸ್ತಾನದ ನಾಯಕ ಎಂಬ ಹೆಗ್ಗಳಿಕೆಗೂ ಬಾಬರ್ ಪಾತ್ರರಾಗಿದ್ದಾರೆ. ಈ ಮೂಲಕ 2 ವರ್ಷಗಳ ಬಳಿಕ ಬಾರಿಸಿದ ಶತಕದೊಂದಿಗೆ ಬಾಬರ್ ಆಜಂ ಎರಡು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪಾಕಿಸ್ತಾನ್-ಆಸ್ಟ್ರೇಲಿಯಾ 2ನೇ ಟೆಸ್ಟ್:
ಪಾಕಿಸ್ತಾನ್ – ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಡ್ರಾನತ್ತ ಸಾಗಿದೆ. ಮೊದಲ ಇನಿಂಗ್ಸ್ನಲ್ಲಿ 556 ರನ್ ಬಾರಿಸಿ ಆಸ್ಟ್ರೇಲಿಯಾ ತಂಡವು ಡಿಕ್ಲೇರ್ ಮಾಡಿಕೊಂಡಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ಕೇವಲ 148 ರನ್ಗಳಿಗೆ ಆಲೌಟ್ ಆಗಿತ್ತು. ಇನ್ನು 2ನೇ ಇನಿಂಗ್ಸ್ನಲ್ಲಿ 2 ವಿಕೆಟ್ ನಷ್ಟಕ್ಕೆ 97 ರನ್ಗಳಿಸಿ ಆಸ್ಟ್ರೇಲಿಯಾ ಡಿಕ್ಲೇರ್ ಮಾಡಿಕೊಂಡಿತು. ಬೃಹತ್ ಮೊತ್ತದ ಗುರಿ ಪಡೆದ ಪಾಕಿಸ್ತಾನ್ಗೆ ಅಂತಿಮ ದಿನದಾಟದಲ್ಲಿ ಗೆಲ್ಲಲು 314 ರನ್ಗಳ ಅವಶ್ಯಕತೆಯಿತ್ತು.
ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(Babar Azam Create New World Record)
Published On - 4:57 pm, Wed, 16 March 22