Babar Azam – Virat Kohli: ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಬಾಬರ್ ಆಜಂ

| Updated By: ಝಾಹಿರ್ ಯೂಸುಫ್

Updated on: Oct 01, 2022 | 10:25 AM

Babar Azam - Virat Kohli's Record: ಇಂಗ್ಲೆಂಡ್​ ವಿರುದ್ಧದ 6ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಾಯಕ ಬಾಬರ್ ಆಜಂರ ಅರ್ಧಶತಕದೊಂದಿಗೆ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್​ ಕಲೆಹಾಕಿತು.

Babar Azam - Virat Kohli: ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಬಾಬರ್ ಆಜಂ
Babar Azam - Virat Kohli
Follow us on

Babar Azam – Virat Kohli Records:  ಇಂಗ್ಲೆಂಡ್​ ವಿರುದ್ಧದ 6ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ (Babar Azam) ಆಜಂ 59 ಎಸೆತಗಳಲ್ಲಿ 87 ರನ್ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಬಾಬರ್ ಟಿ20 ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದರು. ಈ ಸಾಧನೆಯೊಂದಿಗೆ ಪಾಕ್ ನಾಯಕ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯ (Virat Kohli) ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ. ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ರನ್ ಮೆಷಿನ್ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 81 ಇನಿಂಗ್ಸ್​ಗಳ ಮೂಲಕ ಈ ಮೈಲುಗಲ್ಲು ಸಾಧಿಸಿದ್ದರು. ಇದೀಗ ಪಾಕ್ ತಂಡದ ನಾಯಕ ಬಾಬರ್ ಆಜಂ ಕೂಡ 81 ಇನಿಂಗ್ಸ್​​ ಮೂಲಕವೇ 3 ಸಾವಿರ ರನ್​ ಪೂರೈಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಅಷ್ಟೇ ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದ ವಿಶ್ವದ ಐದನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಬಾಬರ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಆಟಗಾರರು ಟಿ20 ಕ್ರಿಕೆಟ್​ನಲ್ಲಿ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಅವರೆಂದರೆ…

  1. ವಿರಾಟ್ ಕೊಹ್ಲಿ- 81 ಇನಿಂಗ್ಸ್​
  2. ಮಾರ್ಟಿನ್ ಗಪ್ಟಿಲ್- 101 ಇನಿಂಗ್ಸ್
  3. ರೋಹಿತ್ ಶರ್ಮಾ- 108 ಇನಿಂಗ್ಸ್
  4. ಪೌಲ್ ಸ್ಟರ್ಲಿಂಗ್- 113 ಇನಿಂಗ್ಸ್

ಈ ಆಟಗಾರರು ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 3 ಸಾವಿರ ರನ್ ಪೂರೈಸಿದ ವಿಶೇಷ ದಾಖಲೆ ಹೊಂದಿದ್ದಾರೆ. ಇದೀಗ ಈ ಪಟ್ಟಿಗೆ 81 ಇನಿಂಗ್ಸ್ ಮೂಲಕ ಐದನೇ ಆಟಗಾರನಾಗಿ ಎಂಟ್ರಿ ಕೊಟ್ಟಿರುವ ಬಾಬರ್ ಆಜಂ ರನ್ ಮೆಷಿನ್ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

ಇದನ್ನೂ ಓದಿ
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಇಂಗ್ಲೆಂಡ್​ ವಿರುದ್ಧದ 6ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಾಯಕ ಬಾಬರ್ ಆಜಂರ ಅರ್ಧಶತಕದೊಂದಿಗೆ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡದ ಪರ ಆರಂಭಿಕ ಆಟಗಾರ ಫಿಲಿಪ್ ಸಾಲ್ಟ್ ಸ್ಫೋಟಕ ಇನಿಂಗ್ಸ್ ಆಡಿದರು. ಕೇವಲ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 13 ಬೌಂಡರಿಯೊಂದಿಗೆ ಅಜೇಯ 88 ರನ್​ ಬಾರಿಸಿದ ಸಾಲ್ಟ್ ತಂಡವನ್ನು 14.3 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿಸಿದರು.