AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಝಂ ಆಟೋಗ್ರಾಫ್; ಕೆರಳಿದ ಫ್ಯಾನ್ಸ್

Babar Azam India Jersey Autograph: ಭಾರತೀಯ ಕ್ರಿಕೆಟ್ ತಂಡದ ಜೆರ್ಸಿಯ ಮೇಲೆ ಪಾಕಿಸ್ತಾನದ ಬಾಬರ್ ಅಜಮ್ ಆಟೋಗ್ರಾಫ್ ನೀಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಅಭಿಮಾನಿಯೊಬ್ಬನ ಕೋರಿಕೆಯಂತೆ ಬಾಬರ್ ಸಹಿ ಹಾಕಿದ್ದರೂ, ಭಾರತೀಯ ಅಭಿಮಾನಿಗಳು ಇದನ್ನು ಜೆರ್ಸಿಗೆ ಮಾಡಿದ ಅವಮಾನವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಹದಗೆಟ್ಟಿರುವ ಭಾರತ-ಪಾಕ್ ಸಂಬಂಧಗಳ ನಡುವೆ ಈ ಘಟನೆ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಳಪೆ ಫಾರ್ಮ್‌ನಲ್ಲಿರುವ ಬಾಬರ್​ಗೆ ಮತ್ತೊಂದು ಸಂಕಷ್ಟ.

ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಝಂ ಆಟೋಗ್ರಾಫ್; ಕೆರಳಿದ ಫ್ಯಾನ್ಸ್
Babar Azam
ಪೃಥ್ವಿಶಂಕರ
|

Updated on: Dec 29, 2025 | 3:46 PM

Share

ಭಾರತ ಮತ್ತು ಪಾಕಿಸ್ತಾನ (India- Pakistan) ನಡುವಿನ ಎಲ್ಲಾ ರೀತಿಯ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು ವರ್ಷಗಳೇ ಕಳೆದಿವೆ. ಇದರ ಪರಿಣಾಮವಾಗಿ ಕ್ರಿಕೆಟ್​ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರು ದೃಷ್ಟಿಯಿಟ್ಟು ನೋಡುವುದಿರಲಿ, ಕೈಕೂಡ ಕುಲುಕುತ್ತಿಲ್ಲ. ಇದೆಲ್ಲದರ ನಡುವೆ ಪಾಕಿಸ್ತಾನದ ಆಟಗಾರನೊಬ್ಬ ಟೀಂ ಇಂಡಿಯಾ ಜೆರ್ಸಿಯ (India cricket jersey) ಮೇಲೆ ತನ್ನ ಆಟೋಗ್ರಾಫ್ ಹಾಕಿದರೆ ಪರಿಸ್ಥಿತಿ ಏನಾಗಬೇಡ?. ​ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ಟೀಂ ಇಂಡಿಯಾ ಜೆರ್ಸಿಯ ಮೇಲೆ ತನ್ನ ಆಟೋಗ್ರಾಫ್ ನೀಡಿರುವುದು ಭಾರತೀಯರನ್ನು ಕೆರಳಿಸಿದೆ. ಇದರಲ್ಲಿ ಬಾಬರ್​ದ್ದು ಯಾವುದೇ ತಪ್ಪಿಲ್ಲದಿದ್ದರೂ, ಅಭಿಮಾನಿಗಳು ಮಾತ್ರ ಬಾಬರ್ ವಿರುದ್ಧ ಕೆಂಡಕಾರುತ್ತಿದ್ದಾರೆ. ಬಾಬರ್ ಆಝಂ ಟೀಂ ಇಂಡಿಯಾ ಜೆರ್ಸಿಗೆ ಅವಮಾನ ಮಾಡಿದ್ದಾರೆ ಎಂತಲೂ ಕೆಲವರು ಆರೋಪಿಸಿದ್ದಾರೆ.

ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಟೋಗ್ರಾಫ್

ವಾಸ್ತವವಾಗಿ ಪಾಕಿಸ್ತಾನದ ಕೆಲವು ಸ್ಟಾರ್ ಆಟಗಾರರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಆಡುತ್ತಿದ್ದಾರೆ. ಅವರಲ್ಲಿ ಪಾಕ್ ತಂಡದ ಮಾಜಿ ನಾಯಕ ಬಾಬರ್ ಕೂಡ ಒಬ್ಬರು. ಈ ಲೀಗ್​ನಲ್ಲಿ ಸಿಡ್ನಿ ಪರ ಆಡುತ್ತಿರುವ ಬಾಬರ್ ಬಳಿ ಟೀಂ ಇಂಡಿಯಾ ಅಭಿಮಾನಿಯೊಬ್ಬರು ಆಟೋಗ್ರಾಫ್ ಕೇಳಿದ್ದಾರೆ. ಆ ಅಭಿಮಾನಿ ಭಾರತ ತಂಡದ ಜೆರ್ಸಿಯನ್ನು ಧರಿಸಿದ್ದು ಬಾಬರ್ ಆ ಜೆರ್ಸಿಯ ಮೇಲೆ ತನ್ನ ಆಟೋಗ್ರಾಫ್ ನೀಡಿದ್ದಾರೆ. ಮೇಲೆ ಹೇಳಿದಂತೆ ಇದರಲ್ಲಿ ಬಾಬರ್ ಅವರ ತಪ್ಪಿಲ್ಲ. ಏಕೆಂದರೆ ಅಭಿಮಾನಿ ಕೇಳಿದ ಕಡೆ ಬಾಬರ್ ತಮ್ಮ ಆಟೋಗ್ರಾಫ್ ನೀಡಿದ್ದಾರೆ.

ಆದಾಗ್ಯೂ ಟೀಂ ಇಂಡಿಯಾ ಜೆರ್ಸಿಯ ಮೇಲೆ ಬಾಬರ್ ಆಝಂ ನೀಡಿದ ಆಟೋಗ್ರಾಫ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಭಾರತೀಯ ಅಭಿಮಾನಿಗಳು ಇದನ್ನು ಭಾರತೀಯ ತಂಡದ ಜೆರ್ಸಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ. ಇದಕ್ಕಾಗಿ ಬಾಬರ್ ಆಝಂ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಈಗಾಗಲೇ ಹದಗೆಟ್ಟಿವೆ. ಇದೆಲ್ಲದರ ನಡುವೆ ಜೆರ್ಸಿ ಮೇಲೆ ಬಾಬರ್ ಆಟೋಗ್ರಾಫ್ ನೀಡಿರುವುದು ಹೊಸ ವಿವಾದವನ್ನು ಹುಟ್ಟುಹಾಕಬಹುದು. ಇತ್ತ ಪಿಸಿಬಿ ಕೂಡ ಬಾಬರ್ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು.

ಫಾರ್ಮ್​ ಕಳೆದುಕೊಂಡಿರುವ ಬಾಬರ್

ಆಟೋಗ್ರಾಫ್ ವಿವಾದ ಒಂದೆಡೆಯಾದರೆ, ಇನ್ನೊಂದೆಡೆ ಬಾಬರ್ ತಮ್ಮ ಕಳಪೆ ಫಾರ್ಮ್​ನಿಂದಾಗಿ ತಂಡದಿಂದಲೇ ಹೊರಬಿದ್ದಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಪಾಕಿಸ್ತಾನ ತಂಡದಲ್ಲಿ ಬಾಬರ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇತ್ತ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್ ಅಲ್ಲಿಯೂ ಇಲ್ಲಿಯವರೆಗೆ ನಿರಾಶಾದಾಯಕ ಪ್ರದರ್ಶನ ನೀಡಿದ್ದಾರೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ 71 ರನ್‌ಗಳನ್ನು ಗಳಿಸಿದ್ದಾರೆ, ಸರಾಸರಿ 17.7. ಅವರ ಸ್ಟ್ರೈಕ್ ರೇಟ್ ಕೂಡ 110 ಆಗಿದೆ. ಅವರು ತಮ್ಮ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಮೂರರಲ್ಲಿ ಎರಡಂಕಿಯನ್ನು ತಲುಪಲು ವಿಫಲರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ