ವೇತನ ಕಡಿತ… ಟಿ20 ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ್ ಸ್ಟಾರ್ ಆಟಗಾರರು

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ್ ತಂಡ ಎಲ್ಲಾ ಪಂದ್ಯಗಳಲ್ಲೂ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದ್ದ ಪಾಕ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ಯುವ ವೇಗಿ ನಸೀಮ್ ಶಾ ಅವರನ್ನು ಕೈ ಬಿಡಲಾಗಿತ್ತು. ಇದೀಗ ಈ ಆಟಗಾರರು ದೇಶೀಯ ಟೂರ್ನಿ ಆಡಲು ನಿರಾಕರಿಸಿದ್ದಾರೆ.

ವೇತನ ಕಡಿತ... ಟಿ20 ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ್ ಸ್ಟಾರ್ ಆಟಗಾರರು
Pakistan Team

Updated on: Mar 18, 2025 | 7:54 AM

ಪಾಕಿಸ್ತಾನ್ ತಂಡದ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ನಸೀಮ್ ಶಾ ಮುಂಬರುವ ನ್ಯಾಷನಲ್​ ಟಿ20 ಚಾಂಪಿಯನ್​ಶಿಪ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಪಾಕಿಸ್ತಾನದ ದೇಶೀಯ ಟಿ20 ಟೂರ್ನಿಯಾಗಿರುವ ಈ ಪಂದ್ಯಾವಳಿಯಿಂದ ಪ್ರಮುಖ ಆಟಗಾರರು ಹೊರಗುಳಿಯಲು ಮುಖ್ಯ ಕಾರಣ ವೇತನ ಕಡಿತ ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತನ್ನ ದೇಶೀಯ ಟೂರ್ನಿ ನ್ಯಾಷನಲ್ ಕಪ್​ನಲ್ಲಿ ಕಣಕ್ಕಿಳಿಯುವ ಆಟಗಾರರ ವೇತನವನ್ನು ಶೇ. 75 ರಷ್ಟು ಕಡಿತ ಮಾಡಿದೆ. ಈ ಹಿಂದೆ ಆಟಗಾರರಿಗೆ ಪಂದ್ಯ ಶುಲ್ಕವಾಗಿ 40,000 ರೂ. (PKR) ನೀಡಲಾಗುತ್ತಿತ್ತು.

ಆದರೆ ಈ ಬಾರಿಯಿಂದ ಈ ಟೂರ್ನಿಯಲ್ಲಿ ಕಣಕ್ಕಿಳಿಯುವ ಆಟಗಾರರಿಗೆ 10,000 ರೂ. ಪಂದ್ಯ ಶುಲ್ಕ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಲ್ಲೇ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ನಸೀಮ್ ಶಾ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ನ್ಯೂಝಿಲೆಂಡ್‌ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಿಂದ ಈ ಮೂವರನ್ನು ಕೈ ಬಿಡಲಾಗಿತ್ತು. ಹೀಗಾಗಿ ಬಾಬರ್, ರಿಝ್ವಾನ್ ಹಾಗೂ ನಸೀಮ್ ಶಾ ದೇಶೀಯ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

ಆದರೀಗ ರಾಷ್ಟ್ರೀಯ ತಂಡದಿಂದ ಹೊರಬಿದ್ದರೂ ಈ ಮೂವರು ಆಟಗಾರರು ನ್ಯಾಷನಲ್​ ಟಿ20 ಚಾಂಪಿಯನ್​ಶಿಪ್ ಆಡಲು ಹಿಂದೇಟು ಹಾಕಿರುವುದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಚಿಂತೆ ಹೆಚ್ಚಿಸಿದೆ.

ಇನ್ನು ಈ ಬಾರಿಯ ನ್ಯಾಷನಲ್ ಟಿ20 ಚಾಂಪಿಯನ್​ಶಿಪ್ ಟೂರ್ನಿಯು ಫೈಸಲಾಬಾದ್, ಲಾಹೋರ್ ಮತ್ತು ಮುಲ್ತಾನ್ ನಗರಗಳಲ್ಲಿ ನಡೆಯಲಿದ್ದು, ಒಟ್ಟು 39 ಪಂದ್ಯಗಳನ್ನು ಆಡಲಾಗುತ್ತದೆ. ಅಲ್ಲದೆ ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 27 ರಂದು ಫೈಸಲಾಬಾದ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ಇತ್ತ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಆಟಗಾರರ ವೇತನ ಕಡಿತಗೊಳಿಸಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ, ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ತಂಡದ ಆಟಗಾರರ ವೇತನಕ್ಕೂ ಕತ್ತರಿ ಹಾಕುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.