Babar Azam or Virat Kohli: ಬಾಬರ್ ಅಥವಾ ಕೊಹ್ಲಿ: ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ಹೆಸರಿಸಿದ ಜಯಸೂರ್ಯ

Babar Azam or Virat Kohli: ವಿರಾಟ್ ಕೊಹ್ಲಿ ಇತ್ತೀಚೆಗೆ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದ 71 ನೇ ಶತಕವನ್ನು ಪೂರ್ಣಗೊಳಿಸಿದರು. ಈ ವೇಳೆ ಕೊಹ್ಲಿ ಆಸ್ಟ್ರೇಲಿಯಾದ ದಿಗ್ಗಜ ರಿಕಿ ಪಾಂಟಿಂಗ್ ಅವರ 71 ಶತಕಗಳನ್ನು ಸರಿಗಟ್ಟಿದರು.

Babar Azam or Virat Kohli: ಬಾಬರ್ ಅಥವಾ ಕೊಹ್ಲಿ: ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ಹೆಸರಿಸಿದ ಜಯಸೂರ್ಯ
Babar-Virat-Sanath
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 11, 2022 | 12:35 PM

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಸನತ್ ಜಯಸೂರ್ಯ ಅವರು ವಿರಾಟ್ ಕೊಹ್ಲಿ (Virat Kohli) ಮತ್ತು ಬಾಬರ್ ಆಜಂ (Babar Azam( ಇವರಿಬ್ಬರಲ್ಲಿ ತಮ್ಮ ನೆಚ್ಚಿನ ಆಟಗಾರನನ್ನು ಹೆಸರಿಸಿದ್ದಾರೆ. ಮಾಜಿ ಎಡಗೈ ಆರಂಭಿಕ ಆಟಗಾರ ಜಯಸೂರ್ಯ ಪಾಕ್​ ನಾಯಕನಗಿಂತ ವಿರಾಟ್ ಕೊಹ್ಲಿಗೆ ಆದ್ಯತೆ ನೀಡಿರುವುದು ವಿಶೇಷ. ಅಂದರೆ ತಮ್ಮ ಮತ್ತು ಮಗನ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಎಂದು ಜಯಸೂರ್ಯ ಹೇಳಿದ್ದಾರೆ.

ಬಾಬರ್ ಆಜಂ ಮತ್ತು ವಿರಾಟ್ ಕೊಹ್ಲಿ ನಡುವೆ ಯಾರು ಉತ್ತಮ ಬ್ಯಾಟ್ಸ್​ಮನ್​​? ಈ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆಯುತ್ತಿದೆ. ಅನೇಕ ಅನುಭವಿಗಳು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ನೀಡಿದ್ದಾರೆ. ಇದೀಗ ಜಯಸೂರ್ಯ ಕೂಡ ತಮ್ಮ ನೆಚ್ಚಿನ ಆಟಗಾರನನ್ನು ಹೆಸರಿಸಿದ್ದು, ಈ ಮೂಲಕ ನನಗೆ ಹಾಗೂ ನನ್ನ ಮಗನಿಗೆ ವಿರಾಟ್ ಕೊಹ್ಲಿ ಅಂದರೆ ಇಷ್ಟ ಎಂದಿದ್ದಾರೆ.

ಪ್ರಸ್ತುತ ಏಷ್ಯಾಕಪ್‌ನಲ್ಲಿ, ಬಾಬರ್ ಆಜಂ ಇಲ್ಲಿಯವರೆಗೆ ದೊಡ್ಡ ಇನ್ನಿಂಗ್ಸ್‌ಗಳನ್ನು ಆಡಲು ವಿಫಲರಾಗಿರಬಹುದು, ಆದರೆ ಅವರು ನಾಯಕನಾಗಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಆಧುನಿಕ ಕ್ರಿಕೆಟ್ ದಂತಕಥೆಗಳಲ್ಲಿ ಬಾಬರ್ ಆಜಂ ಮತ್ತು ವಿರಾಟ್ ಕೊಹ್ಲಿಯನ್ನು ಪರಿಗಣಿಸಲಾಗಿದೆ. ಪ್ರಸ್ತುತ ಫ್ಯಾಬ್ ಫೋರ್‌ನಲ್ಲಿ ವಿರಾಟ್ ಕೊಹ್ಲಿ, ಬಾಬರ್ ಆಜಂ, ಸ್ಟೀವ್ ಸ್ಮಿತ್ ಮತ್ತು ಕೇನ್ ವಿಲಿಯಮ್ಸನ್ ಅವರ ಹೆಸರುಗಳನ್ನು ಸೇರಿಸಲಾಗಿದೆ.

ಆದರೆ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಬಾಬರ್​ಗಿಂತ ವಿರಾಟ್ ಕೊಹ್ಲಿಯೇ ಮುಂದಿದ್ದಾರೆ. ಅಲ್ಲದೆ ಆಕ್ರಮಣಕಾರಿ ಆಟದಲ್ಲೂ ಕಿಂಗ್ ಕೊಹ್ಲಿಯನ್ನು ಮೀರಿಸುವ ಆಟಗಾರ ಫ್ಯಾಬ್ ಫೋರ್​ನಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿಯೇ ಬಹುತೇಕ ಮಾಜಿ ಆಟಗಾರರ ಫೇವರೇಟ್ ಕ್ರಿಕೆಟಿಗನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಇತ್ತೀಚೆಗೆ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದ 71 ನೇ ಶತಕವನ್ನು ಪೂರ್ಣಗೊಳಿಸಿದರು. ಈ ವೇಳೆ ಕೊಹ್ಲಿ ಆಸ್ಟ್ರೇಲಿಯಾದ ದಿಗ್ಗಜ ರಿಕಿ ಪಾಂಟಿಂಗ್ ಅವರ 71 ಶತಕಗಳನ್ನು ಸರಿಗಟ್ಟಿದರು. ಈಗ ಸಚಿನ್ ತೆಂಡೂಲ್ಕರ್ ಮಾತ್ರ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳ ವಿಷಯದಲ್ಲಿ ಕೊಹ್ಲಿಗಿಂತ ಮುಂದಿದ್ದಾರೆ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ಶತಕ ಬಾರಿಸಿರುವ ಸಚಿನ್ ದಾಖಲೆ ಮುರಿಯಲು ಕೊಹ್ಲಿಗೆ 29 ಶತಕಗಳ ಅವಶ್ಯಕತೆಯಿದೆ.

Published On - 12:35 pm, Sun, 11 September 22

BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ