Breaking: ಏಕದಿನ ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದ ನಾಯಕತ್ವದಿಂದ ಕೆಳಗಿಳಿದ ಬಾಬರ್ ಆಝಂ..!

Babar Azam: 2023ರ ವಿಶ್ವಕಪ್‌ನಲ್ಲಿ ಬಾಬರ್ ಆಝಂ ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಸಂಪೂರ್ಣ ವಿಫಲವಾಗಿತ್ತು. ಆಡಿದ 9 ಪಂದ್ಯಗಳ ಪೈಕಿ 5ರಲ್ಲಿ ಸೋತಿದ್ದು ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲು. ಬಾಬರ್ ಸ್ವತಃ ಬ್ಯಾಟ್‌ನಿಂದ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ.

Breaking: ಏಕದಿನ ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದ ನಾಯಕತ್ವದಿಂದ ಕೆಳಗಿಳಿದ ಬಾಬರ್ ಆಝಂ..!
ಬಾಬರ್ ಆಝಂ
Follow us
|

Updated on:Nov 15, 2023 | 9:35 PM

ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ (World Cup 2023) ತಂಡದ ಕಳಪೆ ಪ್ರದರ್ಶನಕ್ಕೆ ನೈತಿಕ ಹೊಣೆ ಹೊತ್ತಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಂ (Babar Azam) ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್​ಗೆ ಪ್ರಶಸ್ತಿ ಗೆಲ್ಲಬಹುದಾದ ಪ್ರಮುಖ ತಂಡಗಳಲ್ಲಿ ಒಂದಾಗಿ ಸ್ಪರ್ಧೆಗಿಳಿದಿದ್ದ ಪಾಕಿಸ್ತಾನ ತಂಡ (Pakistan cricket Team) ಆಡಿದ 9 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದು ಪಾಕ್ ಮಾಜಿ ಆಟಗಾರರ, ಆಡಳಿತ ಮಂಡಳಿಯ ಹಾಗೂ ಪಾಕ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಹೀಗಾಗಿ ಪಾಕ್ ತಂಡ ಇನ್ನು ವಿಶ್ವಕಪ್​ನಲ್ಲಿ ತನ್ನ ಪಯಣ ಮುಗಿಸುವುದಕ್ಕೂ ಮುನ್ನವೇ ಬಾಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಕೂಗು ಜೋರಾಗಿ ಕೇಳಿಬಂದಿತ್ತು. ಇದೀಗ ವಿಶ್ವಕಪ್ ಅಭಿಯಾನವನ್ನು ಮುಗಿಸಿ ತಾಯ್ನಾಡಿಗೆ ಮರಳಿದ ಬಳಿಕ ಬಾಬರ್ ಆಝಂ, ಕ್ರಿಕೆಟ್​ನ ಎಲ್ಲಾ ಸ್ವರೂಪದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ಅನೇಕ ಏರಿಳಿತಗಳನ್ನು ಅನುಭವಿಸಿದ್ದೇನೆ

ತಮ್ಮ ರಾಜೀನಾಮೆ ನಿರ್ಧಾರದ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ಬಾಬರ್, 2019 ರಲ್ಲಿ ಪಾಕ್ ತಂಡವನ್ನು ಮುನ್ನಡೆಸುವ ಆಹ್ವಾನ ಬಂದಿದ್ದು, ನನಗೆ ಈಗಲೂ ಚೆನ್ನಾಗಿ ನೆನಪಿದೆ. ಕಳೆದ ನಾಲ್ಕು ವರ್ಷಗಳಲ್ಲಿ, ನಾನು ಮೈದಾನದ ಒಳಗೆ ಮತ್ತು ಹೊರಗೆ ಅನೇಕ ಏರಿಳಿತಗಳನ್ನು ಅನುಭವಿಸಿದ್ದೇನೆ. ಆದರೆ ನಾನು ಕ್ರಿಕೆಟ್ ಜಗತ್ತಿನಲ್ಲಿ ಪಾಕಿಸ್ತಾನದ ಹೆಮ್ಮೆ ಮತ್ತು ಗೌರವವನ್ನು ಕಾಪಾಡಿಕೊಳ್ಳುವ ಸಲುವಾಗಿ ಸಾಕಷ್ಟು ಶ್ರಮವಹಿಸಿದ್ದೇನೆ. ಆಟಗಾರರು, ತರಬೇತುದಾರರು ಮತ್ತು ನಿರ್ವಹಣೆಯ ಸಾಮೂಹಿಕ ಪ್ರಯತ್ನದ ಫಲವಾಗಿ ವೈಟ್-ಬಾಲ್ ಮಾದರಿಯಲ್ಲಿ ನಾನು ನಂ. 1 ಸ್ಥಾನವನ್ನು ತಲುಪಿದೆ. ಈ ಪ್ರಯಾಣದಲ್ಲಿ ನನಗೆ ಬೆಂಬಲವಾಗಿ ನಿಂತ ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.

ಇದು ಕಠಿಣ ನಿರ್ಧಾರ

ಇಂದು ನಾನು ಪಾಕಿಸ್ತಾನದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರ. ಆದರೆ ಈ ನಿರ್ಧಾರ ತೆಗೆದುಕೊಳ್ಳಲು ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಎಲ್ಲಾ ಮೂರು ಮಾದರಿಗಳಲ್ಲಿ ಆಟಗಾರನಾಗಿ ಪಾಕಿಸ್ತಾನವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ. ನನ್ನ ಅನುಭವ ಮತ್ತು ಸಮರ್ಪಣೆಯೊಂದಿಗೆ ಹೊಸ ನಾಯಕ ಮತ್ತು ತಂಡವನ್ನು ಬೆಂಬಲಿಸುತ್ತೇನೆ. ಈ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ನಾಯಕತ್ವದಲ್ಲಿ ಬಾಬರ್ ಫ್ಲಾಪ್

2023ರ ವಿಶ್ವಕಪ್‌ನಲ್ಲಿ ಬಾಬರ್ ಆಝಂ ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಸಂಪೂರ್ಣ ವಿಫಲವಾಗಿತ್ತು. ಆಡಿದ 9 ಪಂದ್ಯಗಳ ಪೈಕಿ 5ರಲ್ಲಿ ಸೋತಿದ್ದು ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲು. ಬಾಬರ್ ಸ್ವತಃ ಬ್ಯಾಟ್‌ನಿಂದ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. 9 ಇನ್ನಿಂಗ್ಸ್‌ಗಳಲ್ಲಿ 320 ರನ್ ಕಲೆಹಾಕಿದ ಬಾಬರ್ ಕೇವಲ 4 ಅರ್ಧ ಶತಕಗಳನ್ನು ಸಿಡಿಸಲಷ್ಟೇ ಶಕ್ತರಾಗಿದ್ದರು. ಅಲ್ಲದೆ ಬಾಬರ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡವು ಯಾವುದೇ ಪ್ರಮುಖ ಪಂದ್ಯಾವಳಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. 2022ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ, 2021ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಮತ್ತು 2022ರ ಏಷ್ಯಾಕಪ್‌ನ ಫೈನಲ್‌ನಲ್ಲಿಯೂ ಪಾಕ್ ತಂಡ ಸೋತಿದೆ. ಇದಲ್ಲದೆ, 2023 ರ ಏಷ್ಯಾಕಪ್‌ನಲ್ಲಿ ತಂಡ ಸೂಪರ್-4 ಸುತ್ತಿನಲ್ಲೇ ಹೊರಬಿದ್ದಿತು. ಈ ಎಲ್ಲಾ ಪಂದ್ಯಾವಳಿಗಳಲ್ಲಿಯೂ ಬಾಬರ್ ಬ್ಯಾಟ್‌ನಿಂದ ವಿಫಲರಾಗಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Wed, 15 November 23

ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್