AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ತಂಡದಿಂದ ತ್ರಿಮೂರ್ತಿಗಳು ಕಿಕ್ ಔಟ್

Pakistan vs Bangladesh: ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ನಡುವಣ ಟಿ20 ಸರಣಿಯು ಮೇ 27 ರಿಂದ ಶುರುವಾಗಲಿದೆ. ಪಾಕ್​ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗಾಗಿ ಹೆಸರಿಸಲಾದ ಪಾಕಿಸ್ತಾನ್ ತಂಡದಲ್ಲಿ ಬಾಬರ್ ಆಝಂ, ಶಾಹೀನ್ ಅಫ್ರಿದಿ ಹಾಗೂ ಮೊಹಮ್ಮದ್ ರಿಝ್ವಾನ್ ಕಾಣಿಸಿಕೊಂಡಿಲ್ಲ.

ಪಾಕಿಸ್ತಾನ್ ತಂಡದಿಂದ ತ್ರಿಮೂರ್ತಿಗಳು ಕಿಕ್ ಔಟ್
Pakistan Team
ಝಾಹಿರ್ ಯೂಸುಫ್
|

Updated on: May 21, 2025 | 12:30 PM

Share

ಬಾಂಗ್ಲಾದೇಶ್ ವಿರುದ್ಧದ ಸರಣಿಗಾಗಿ ಪಾಕಿಸ್ತಾನ್ (Pakistan) ಟಿ20 ತಂಡ ಪ್ರಕಟವಾಗಿದೆ. 16 ಸದಸ್ಯರ ಈ ತಂಡದಲ್ಲಿ ಪಾಕ್ ತಂಡದ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ಶಾಹೀನ್ ಅಫ್ರಿದಿ ಕಾಣಿಸಿಕೊಂಡಿಲ್ಲ ಎಂಬುದೇ ವಿಶೇಷ. ಈ ಮೂವರು ಈ ಹಿಂದೆ ಪಾಕ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಇದೀಗ ಮೂವರನ್ನು ಸಹ ತಂಡದಿಂದ ಕೈ ಬಿಡಲಾಗಿದೆ.

ಪಾಕಿಸ್ತಾನ್ – ಬಾಂಗ್ಲಾದೇಶ್ ನಡುವಣ ಟಿ20 ಸರಣಿಯು ಮೇ 27 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 3 ಟಿ20 ಪಂದ್ಯಗಳನ್ನಾಡಲಾಗುತ್ತದೆ. ಆದರೆ ಈ ಪಂದ್ಯಗಳಿಂದ ಪ್ರಮುಖ ಆಟಗಾರರನ್ನೇ ಕೈ ಬಿಡುವ ಮೂಲಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮಹತ್ವದ ಹೆಜ್ಜೆಯನ್ನಿಟ್ಟಿದೆ.

ಪಾಕ್ ತಂಡದ ನಾಯಕ ಯಾರು?

ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ಶಾಹೀನ್ ಅಫ್ರಿದಿ ಅವರನ್ನು ಕೈ ಬಿಟ್ಟಿರುವ ಪಿಸಿಬಿ ತಂಡದ ನಾಯಕತ್ವವನ್ನು ಸಲ್ಮಾನ್ ಅಲಿ ಅಘಾಗೆ ವಹಿಸಿದ್ದಾರೆ. ಹಾಗೆಯೇ ಉಪನಾಯಕನಾಗಿ ಶಾದಾಬ್ ಖಾನ್ ಆಯ್ಕೆಯಾಗಿದ್ದಾರೆ.

ಇನ್ನು ತಂಡದ ಮುಖ್ಯ ಕೋಚ್ ಆಗಿ ಮೈಕ್ ಹೆಸ್ಸನ್ ಕಾಣಿಸಿಕೊಂಡಿದ್ದಾರೆ. ಮೈಕ್ ಹೆಸ್ಸನ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಡೈರೆಕ್ಟರ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಪಾಕ್ ತಂಡದ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ತ್ರಿಮೂರ್ತಿಗಳನ್ನು ಕೈಬಿಡಲು ಕಾರಣವೇನು?

ಬಾಬರ್ ಆಝಂ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ 10 ಪಂದ್ಯಗಳಲ್ಲಿ 3 ಅರ್ಧಶತಕ ಬಾರಿಸಿದ್ದಾರೆ. ಅಲ್ಲದೆ ಒಟ್ಟು 288 ರನ್ ಕಲೆಹಾಕಿದ್ದಾರೆ.

ಮತ್ತೊಂದೆಡೆ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 10 ಪಂದ್ಯಗಳಲ್ಲಿ 1 ಶತಕದೊಂದಿಗೆ ಒಟ್ಟು 367 ರನ್​ಗಳಿಸಿ ಮಿಂಚಿದ್ದಾರೆ.

ಹಾಗೆಯೇ ಶಾಹೀನ್ ಅಫ್ರಿದಿ 10 ಪಂದ್ಯಗಳಿಂದ 11 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಹೀಗಾಗಿ ಕಳಪೆ ಫಾರ್ಮ್​ನಲ್ಲಿರುವ ಎಡಗೈ ವೇಗಿಯನ್ನು ಪಾಕ್ ತಂಡದಿಂದ ಕೈ ಬಿಡಲಾಗಿದೆ.

ಇನ್ನು ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ನಿಧಾನಗತಿಯ ಇನಿಂಗ್ಸ್​ಗೆ ಹೆಸರುವಾಸಿ. ಇದೇ ಕಾರಣದಿಂದಾಗಿ ಇಬ್ಬರನ್ನು ಟಿ20 ಸರಣಿಗೆ ಆಯ್ಕೆ ಮಾಡಲಾಗಿಲ್ಲ ಎಂದು ತಿಳಿದು ಬಂದಿದೆ.

Shaheen, Rizwan, Babar

ಶಾಹೀನ್ ಅಫ್ರಿದಿ, ಮೊಹಮ್ಮದ್ ರಿಝ್ವಾನ್, ಬಾಬರ್ ಆಝಂ

ಇದನ್ನೂ ಓದಿ: IPL 2025: ಜೋಶ್ ಹೇಝಲ್​ವುಡ್ ಎಂಟ್ರಿಗೆ ಡೇಟ್ ಫಿಕ್ಸ್

ಪಾಕಿಸ್ತಾನ್ ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್​ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಮ್ ಜೂನಿಯರ್, ಮೊಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಶಾಹಿಬ್​ಝಾದ ಫರ್ಹಾನ್, ಸೈಮ್ ಅಯ್ಯೂಬ್.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ