World Record: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವದಾಖಲೆ: 20 ಓವರ್​ಗಳಲ್ಲಿ 318 ರನ್​

Bahrain vs Saudi Arabia: ಅಂತರಾಷ್ಟ್ರೀಯ ಮಹಿಳಾ ಟಿ20 ಪಂದ್ಯದಲ್ಲಿ ಎರಡನೇ ಬಾರಿಗೆ ತಂಡವೊಂದು 300 ರನ್​ಗಳ ಗಡಿ ದಾಟಿದೆ. ಇದಕ್ಕೂ ಮುನ್ನ 2019ರಲ್ಲಿ ಉಗಾಂಡ ಮಾಲಿ ವಿರುದ್ಧ 2 ವಿಕೆಟ್ ನಷ್ಟಕ್ಕೆ 314 ರನ್ ಗಳಿಸಿತ್ತು.

World Record: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವದಾಖಲೆ: 20 ಓವರ್​ಗಳಲ್ಲಿ 318 ರನ್​
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 22, 2022 | 9:24 PM

ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಒಮಾನ್‌ನಲ್ಲಿ ನಡೆಯುತ್ತಿರುವ ಗಲ್ಫ್ ರಾಷ್ಟ್ರಗಳ ಮಹಿಳಾ ತಂಡಗಳ ಜಿಸಿಸಿ ಮಹಿಳಾ ಟಿ20 ಚಾಂಪಿಯನ್‌ಶಿಪ್ ಕಪ್ ಪಂದ್ಯದಲ್ಲಿ ಸೌದಿ ಅರೇಬಿಯಾ ವಿರುದ್ಧ ಬಹ್ರೇನ್ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 318 ರನ್ ಗಳಿಸಿ ವಿಶ್ವ ದಾಖಲೆ ಬರೆದಿದೆ. ಇದು ಅಂತಾರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ ಇದುವರೆಗಿನ ಗರಿಷ್ಠ ಟಿ20 ಮೊತ್ತವಾಗಿದೆ. ಇದರೊಂದಿಗೆ ಟಿ20 ಕ್ರಿಕೆಟ್ ಅತ್ಯಧಿಕ ಮೊತ್ತ ದಾಖಲಿಸಿದ ವಿಶ್ವ ದಾಖಲೆ ಇದೀಗ ಬಹ್ರೇನ್ ದೇಶದ ಪಾಲಾಗಿದೆ. ವಿಶೇಷ ಎಂದರೆ ಈ ಮೊತ್ತವನ್ನು ಚೇಸ್ ಮಾಡಿದ ಸೌದಿ ಅರೇಬಿಯಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 49 ರನ್ ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಬಹ್ರೇನ್ ತಂಡವು ಬರೋಬ್ಬರಿ 269 ರನ್‌ಗಳ ಭರ್ಜರಿ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ 38ರ ಹರೆಯದ ದೀಪಿಕಾ ರಸಾಂಗಿಕಾ ಬಹ್ರೇನ್ ಪರ ಭರ್ಜರಿ ಪ್ರದರ್ಶನ ನೀಡಿದ್ದರು. ಕೇವಲ 66 ಎಸೆತಗಳಲ್ಲಿ ಅಜೇಯ 161 ರನ್ ಗಳಿಸಿದರು. ವಿಶೇಷ ಎಂದರೆ ಮಹಿಳಾ ಟಿ20 ಪಂದ್ಯದಲ್ಲಿ ಬ್ಯಾಟರ್​ವೊಬ್ಬರು 150 ಪ್ಲಸ್‌ ಗಳಿಸಿದ್ದು ಇದೇ ಮೊದಲು. ಈ ಇನ್ನಿಂಗ್ಸ್‌ನಲ್ಲಿ ದೀಪಿಕಾ 31 ಬೌಂಡರಿಗಳನ್ನು ಬಾರಿಸಿದ್ದರು. ಅಂದರೆ, ಬೌಂಡರಿಯಿಂದ 124 ರನ್ ಮೂಡಿಬಂದಿತ್ತು.

ದೀಪಿಕಾ ಹೊರತಾಗಿ ತಂಡದ ನಾಯಕಿ ತರಂಗ ಗಜನಾಯಕ ಕೂಡ 56 ಎಸೆತಗಳಲ್ಲಿ 94 ರನ್‌ಗಳ ಇನಿಂಗ್ಸ್‌ ಆಡಿದರು. ತರಂಗ 17 ಬೌಂಡರಿಗಳನ್ನು ಬಾರಿಸಿದರು. ಬಹ್ರೇನ್ ಇನ್ನಿಂಗ್ಸ್‌ನಲ್ಲಿ ಒಟ್ಟು 50 ಬೌಂಡರಿಗಳು ಸೇರಿದ್ದವು. ಅಂದರೆ, 318 ರನ್‌ಗಳಲ್ಲಿ 200 ರನ್ ಬೌಂಡರಿಯಿಂದ ಮೂಡಿ ಬಂದಿತ್ತು. ಮೈರಾ ಖಾನ್ ಸೌದಿ ಅರೇಬಿಯಾದ ಅತ್ಯಂತ ದುಬಾರಿ ಬೌಲರ್ ಎನಿಸಿಕೊಂಡರು. ಮೈರಾ ತಮ್ಮ 4 ಓವರ್‌ಗಳಲ್ಲಿ 68 ರನ್ ಬಿಟ್ಟುಕೊಟ್ಟಿದ್ದರು. ಹಾಗೆಯೇ ಇಮಾನ್ ಎಜಾಜ್ 4 ಓವರ್‌ಗಳಲ್ಲಿ 63 ರನ್ ನೀಡಿದ್ದರು.

ಅಂತರಾಷ್ಟ್ರೀಯ ಮಹಿಳಾ ಟಿ20 ಪಂದ್ಯದಲ್ಲಿ ಎರಡನೇ ಬಾರಿಗೆ ತಂಡವೊಂದು 300 ರನ್​ಗಳ ಗಡಿ ದಾಟಿದೆ. ಇದಕ್ಕೂ ಮುನ್ನ 2019ರಲ್ಲಿ ಉಗಾಂಡ ಮಾಲಿ ವಿರುದ್ಧ 2 ವಿಕೆಟ್ ನಷ್ಟಕ್ಕೆ 314 ರನ್ ಗಳಿಸಿತ್ತು. ಪುರುಷರ ಅಂತಾರಾಷ್ಟ್ರೀಯ ಟಿ20ಯಲ್ಲಿ ಇದುವರೆಗೆ ಯಾವುದೇ ತಂಡ 300 ರನ್‌ಗಳ ಗಡಿ ದಾಟಿಲ್ಲ. 2019 ರಲ್ಲಿ ಡೆಹ್ರಾಡೂನ್‌ನಲ್ಲಿ ಐರ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ ಮಾಡಿದ 278 ರನ್​ಗಳಿಸಿರುವುದು ವಿಶ್ವ ದಾಖಲೆಯಾಗಿದೆ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ