BAN vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಗೆದ್ದು ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ

BAN vs NZ: ಪ್ರಸ್ತುತ ಬಾಂಗ್ಲಾದೇಶ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ತಂಡ ಆತಿಥೇಯರ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ತಂಡವನ್ನು 150 ರನ್‌ಗಳಿಂದ ಮಣಿಸಿದ ಬಾಂಗ್ಲಾ ತಂಡ ಐತಿಹಾಸಿಕ ಗೆಲುವು ಸಾಧಿಸಿದೆ.

BAN vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಗೆದ್ದು ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ
ಬಾಂಗ್ಲಾದೇಶ ತಂಡ
Follow us
ಪೃಥ್ವಿಶಂಕರ
|

Updated on:Dec 02, 2023 | 12:40 PM

ಪ್ರಸ್ತುತ ಬಾಂಗ್ಲಾದೇಶ ಪ್ರವಾಸದಲ್ಲಿರುವ ನ್ಯೂಜಿಲೆಂಡ್ (Bangladesh vs New Zealand) ತಂಡ ಆತಿಥೇಯರ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ತಂಡವನ್ನು 150 ರನ್‌ಗಳಿಂದ ಮಣಿಸಿದ ಬಾಂಗ್ಲಾ ತಂಡ ಐತಿಹಾಸಿಕ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿರುವ ಬಾಂಗ್ಲಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship) ಅಂಕಪಟ್ಟಿಯಲ್ಲಿಯೂ ಭಾರಿ ಲಾಭ ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ ನಲ್ಲಿ 310 ರನ್ ಕಲೆಹಾಕಿತು. ಇದಕ್ಕೆ ಪ್ರತ್ಯುತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಕಿವೀಸ್ ಪಡೆ 317 ರನ್​ಗಳಿಗೆ ಆಲೌಟ್ ಆಗಿ 7 ರನ್​ಗಳ ಮುನ್ನಡೆ ಕಾಯ್ದುಕೊಂಡಿತು. ಎರಡನೇ ಇನ್ನಿಂಗ್ಸ್​ನಲ್ಲಿ ಬಾಂಗ್ಲಾ ತಂಡ ನೀಡಿದ 332 ರನ್​ಗಳ ಗುರಿ ಬೆನ್ನಟ್ಟಿದ ಕಿವೀಸ್ ಪಡೆ 181 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತು.

ಮೇಲೆ ಹೇಳಿದಂತೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ಪರ ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕ ಆಟಗಾರ ಮಹಮ್ಮದುಲ್ ಹಸನ್ ಜಾಯ್ 86 ರನ್​ಗಳ ಇನ್ನಿಂಗ್ಸ್ ಆಡಿದನ್ನು ಬಿಟ್ಟರೆ, ತಂಡದ ಪರ ಮತ್ತ್ಯಾರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಹೊರಬರಲಿಲ್ಲ. ಹೀಗಾಗಿ ತಂಡ 310 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ನ್ಯೂಜಿಲೆಂಡ್‌ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಗ್ಲೆನ್ ಫಿಲಿಪ್ಸ್ 4 ವಿಕೆಟ್ ಪಡೆದರೆ, ಕೈಲ್ ಜೇಮ್ಸನ್ ಮತ್ತು ಅಜಾಜ್ ಪಟೇಲ್ ತಲಾ 2 ವಿಕೆಟ್ ಪಡೆದರು.

IND vs NZ: ಐಸಿಸಿ ನಾಕೌಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತದ ಪ್ರದರ್ಶನ ಹೇಗಿದೆ ಗೊತ್ತಾ?

ಶತಕ ಬಾರಿಸಿದ ಕೇನ್

ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ಕೂಡ ಹೆಚ್ಚಿನ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಇಡೀ ತಂಡ 317 ರನ್‌ಗಳಿಗೆ ಆಲೌಟ್ ಆಗಿ, ಕೇವಲ 7 ರನ್‌ಗಳ ಮುನ್ನಡೆ ಕಾಯ್ದುಕೊಂಡಿತು. ತಂಡದ ಪರ ಕೇನ್ ವಿಲಿಯಮ್ಸನ್ 104 ರನ್‌ಗಳ ಶತಕದ ಇನ್ನಿಂಗ್ಸ್ ಆಡಿದರೆ, ಡೆರೆಲ್ ಮಿಚೆಲ್ ಹಾಗೂ ಗ್ಲೆನ್ ಪಿಲಿಫ್ಸ್ ಕ್ರಮವಾಗಿ 41 ಹಾಗೂ 42 ರನ್​ಗಳ ಕೊಡುಗೆ ನೀಡಿದರು. ಬಾಂಗ್ಲಾ ಪರ ತೈಜುಲ್ ಇಸ್ಲಾಂ 39 ಓವರ್‌ ಬೌಲ್ ಮಾಡಿ 109 ರನ್ ನೀಡಿ 4 ವಿಕೆಟ್ ಪಡೆದರೆ, ಮೊಮಿನುಲ್ ಹಕ್ 3 ವಿಕೆಟ್ ಪಡೆದರು.

ನಾಯಕನ ಆಟ ಆಡಿದ ಶಾಂಟೋ

7 ರನ್​ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಪರ ನಾಯಕನ ಆಟ ಆಡಿದ ನಜ್ಮುಲ್ ಹೊಸೈನ್ ಶಾಂಟೋ 105 ರನ್‌ಗಳ ಉತ್ತಮ ಇನ್ನಿಂಗ್ಸ್ ಆಡಿದರು. ಇವರಲ್ಲದೇ ಮೊಮಿನುಲ್ ಹಕ್ 67 ರನ್ ಹಾಗೂ ಮೆಹೆಂದಿ ಹಸನ್ 50 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡುವ ಮೂಲಕ ತಂಡವನ್ನು 300ರ ಗಡಿ ದಾಟಿಸಿದರು. ಅಂತಿಮವಾಗಿ ಬಾಂಗ್ಲಾ ತಂಡ 338 ರನ್​ಗಳಿಗೆ ಆಲೌಟ್ ಆಗಿ, ನ್ಯೂಜಿಲೆಂಡ್​ಗೆ 332 ರನ್​ಗಳ ಟಾರ್ಗೆಟ್ ನೀಡಿತು. ಈ ಇನ್ನಿಂಗ್ಸ್‌ನಲ್ಲಿ ಸ್ಪಿನ್ನರ್ ಅಜಾಜ್ ಪಟೇಲ್ ಕಿವೀಸ್ ತಂಡದ ಪರ ಗರಿಷ್ಠ 4 ವಿಕೆಟ್ ಪಡೆದರು.

ಇಸ್ಲಾಂ ದಾಳಿಗೆ ತತ್ತರಿಸಿದ ಕಿವೀಸ್

ಗೆಲುವಿಗೆ 332 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ ಮೊದಲ ಓವರ್‌ನಲ್ಲಿಯೇ ಟಾಮ್ ಲ್ಯಾಥಮ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆ ಬಳಿಕ ಅರ್ಧದಷ್ಟು ಕಿವೀಸ್ ತಂಡ ಕೇವಲ 60 ರನ್‌ಗಳಿಗೆ ಪೆವಿಲಿಯನ್ ಸೇರಿಕೊಂಡತು. ಹೀಗಾಗಿ ನಾಲ್ಕನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ ಈ ಟೆಸ್ಟ್‌ನಲ್ಲಿ ಗೆಲುವು ಸಾಧಿಸುವುದು ಖಚಿತವಾಗಿತ್ತು. ಬಾಂಗ್ಲಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದಿದ್ದ ತೈಜುಲ್ ಇಸ್ಲಾಂ, ಎರಡನೇ ಇನ್ನಿಂಗ್ಸ್‌ನಲ್ಲಿಯೂ ತಮ್ಮ ಮಾರಕ ದಾಳಿಯನ್ನು ಮುಂದುವರಿಸಿ, ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು. ಹೀಗಾಗಿ ಐದನೇ ದಿನದ ಮೊದಲ ಸೆಷನ್‌ನಲ್ಲಿಯೇ ನ್ಯೂಜಿಲೆಂಡ್‌ನ 10ನೇ ವಿಕೆಟ್ ಪತನಗೊಂಡಿತು.

ಬಾಂಗ್ಲಾದೇಶಕ್ಕೆ ಮೊದಲ ಟೆಸ್ಟ್ ಗೆಲುವು

ಕಿವೀಸ್ ತಂಡವನ್ನು 150 ರನ್​ಗಳಿಂದ ಮಣಿಸಿದ ಬಾಂಗ್ಲಾದೇಶ ತಂಡಕ್ಕೆ ಟೆಸ್ಟ್ ಮಾದರಿಯಲ್ಲಿ ಇದು ಮೊದಲ ಗೆಲುವಾಗಿದೆ. ಈ ಪಂದ್ಯವೂ ಸೇರಿದಂತೆ ಉಭಯ ತಂಡಗಳ ನಡುವೆ ಇದುವರೆಗೆ 11 ಟೆಸ್ಟ್ ಪಂದ್ಯಗಳು ನಡೆದಿದ್ದವು. ಹಿಂದಿನ 10 ಟೆಸ್ಟ್‌ಗಳಲ್ಲಿ ಮೇಲುಗೈ ಸಾಧಿಸಿದ್ದ ನ್ಯೂಜಿಲೆಂಡ್ ತಂಡ 8 ಪಂದ್ಯಗಳನ್ನು ಗೆದ್ದು ಬೀಗಿತ್ತು. ಉಳಿದಂತೆ 2 ಟೆಸ್ಟ್‌ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿದ್ದವು. ಹೀಗಾಗಿ ನ್ಯೂಜಿಲೆಂಡ್ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡ ಬಾಂಗ್ಲಾದೇಶ ತಂಡ ನಜ್ಮುಲ್ ಹುಸೇನ್ ಶಾಂಟೊ ನಾಯಕತ್ವದಲ್ಲಿ ಇತಿಹಾಸ ನಿರ್ಮಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Sat, 2 December 23

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್