AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ವೇಗಿಗಳ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರ!

Australia vs Bangladesh, 1st Test: ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿ ಶುರುವಾಗಿದೆ. ಡಾರ್ವಿನ್​ನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ವೇಗಿಗಳು ಪ್ರಚಂಡ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿದ್ದಾರೆ.

ಬಾಂಗ್ಲಾ ವೇಗಿಗಳ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರ!
Bangladesh
ಝಾಹಿರ್ ಯೂಸುಫ್
|

Updated on: Aug 13, 2026 | 12:23 PM

Share

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಡಾರ್ವಿನ್​ನ ಮರ್ರಾರ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಬಾಂಗ್ಲಾ ಬೌಲರ್​ಗಳು ಯಶಸ್ವಿಯಾಗಿದ್ದರು. ಮೊದಲಿಗೆ ಜೇಕ್ ವೆದರಾಲ್ಡ್ (23) ವಿಕೆಟ್ ಕಬಳಿಸಿದ ಹಸನ್ ಮಹಮೂದ್ ಆ ಬಳಿಕ ಟ್ರಾವಿಸ್ ಹೆಡ್​ಗೆ (23) ಪೆವಿಲಿಯನ್ ಹಾದಿ ತೋರಿಸಿದರು.

ಇದರ ಬೆನ್ನಲ್ಲೇ ಇಬಾದತ್ ಹೊಸೇನ್ ಮಾರ್ನಸ್ ಲಾಬುಶೇನ್ (1) ವಿಕೆಟ್ ಕಬಳಿಸಿದರು. ಆ ಬಳಿಕ ಬಂದ ಕ್ಯಾಮರೋನ್ ಗ್ರೀನ್ (13) ತಸ್ಕಿನ್ ಅಹ್ಮದ್​ಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡುವಲ್ಲಿ ಯಶಸ್ವಿಯಾದರು.

ಈ ವೇಳೆ ಮತ್ತೆ ದಾಳಿಗಿಳಿದ ಇಬಾದ್ ಹೊಸೇನ್ ಅಲೆಕ್ಸ್ ಕ್ಯಾರಿ (19) ಯನ್ನು ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಬ್ಯೂ ವೆಬ್​ಸ್ಟರ್ (12) ವಿಕೆಟ್ ಎಗರಿಸುವಲ್ಲಿ ತಸ್ಕಿನ್ ಅಹ್ಮದ್ ಯಶಸ್ವಿಯಾದರು.

ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ಸ್ಟೀವ್ ಸ್ಮಿತ್ ಆಕರ್ಷಕ ಅರ್ಧಶತಕದೊಂದಿಗೆ ತಂಡದ ಮೊತ್ತವನ್ನು 150ರ ಗಡಿದಾಟಿಸಿದರು.  ಇನ್ನು ಪ್ಯಾಟ್ ಕಮಿನ್ಸ್ (9) ಹಾಗೂ ಮಿಚೆಲ್ ಸ್ಟಾರ್ಕ್ (1) ಗೆ ಹಸನ್ ಮಹಮೂದ್ ಪೆವಿಲಿಯನ್ ಹಾದಿ ತೋರಿಸಿದರು.

ಇತ್ತ 109 ಎಸೆತಗಳನ್ನು ಎದುರಿಸಿದ ಸ್ಟೀವ್ ಸ್ಮಿತ್ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 71 ರನ್ ಬಾರಿಸಿ 9 ವಿಕೆಟ್​ವರೆಗೆ ಬ್ಯಾಟಿಂಗ್ ಜೊತೆಯಾಟ ಮುಂದುವರೆಸಿದ್ದರು. ಆದರೆ ಹಸನ್ ಮಹಮೂದ್ ಎಸೆದ 51ನೇ ಓವರ್​ನ 5ನೇ ಎಸೆತವನ್ನು ಗುರುತಿಸುವಲ್ಲಿ ವಿಫಲರಾದ ಸ್ಮಿತ್ (71) ವಿಕೆಟ್​ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ನಾಥನ್ ಲಿಯಾನ್​ (7) ರನ್ನು ಔಟ್ ಮಾಡುವಲ್ಲಿ ಹಸನ್ ಮಹಮೂದ್ ಯಶಸ್ವಿಯಾದರು.

ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಕೇವಲ 198 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಬಾಂಗ್ಲಾದೇಶ್ ಯಶಸ್ವಿಯಾಗಿದೆ. ಬಾಂಗ್ಲಾದೇಶ್ ಪರ 17 ಓವರ್​ಗಳನ್ನು ಎಸೆದ ಹಸನ್ ಮಹಮೂದ್ ಕೇವಲ 55 ರನ್ ನೀಡಿ 6 ವಿಕೆಟ್ ಕಬಳಿಸಿದರೆ, ತಸ್ಕಿನ್ ಅಹ್ಮದ್ ಹಾಗೂ ಇಬಾದತ್ ಹೊಸೇನ್ ತಲಾ 2 ವಿಕೆಟ್ ಪಡೆದರು.

ಆಸ್ಟ್ರೇಲಿಯಾ ಪ್ಲೇಯಿಂಗ್ 11:  ಜೇಕ್ ವೆದರಾಲ್ಡ್ , ಟ್ರಾವಿಸ್ ಹೆಡ್ , ಮಾರ್ನಸ್ ಲಾಬುಶೇನ್ , ಸ್ಟೀವ್ ಸ್ಮಿತ್ , ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಬ್ಯೂ ವೆಬ್‌ಸ್ಟರ್ , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಜೋಶ್ ಹೇಝಲ್​ವುಡ್​.

ಇದನ್ನೂ ಓದಿ: 6,6,6,6,6,6,6,6,6: ಆ್ಯಂಡ್ರೆ ರಸೆಲ್ ಸಿಡಿಲಬ್ಬರ!

ಬಾಂಗ್ಲಾದೇಶ್ ಪ್ಲೇಯಿಂಗ್ 11: ಶಾದ್ಮನ್ ಇಸ್ಲಾಂ , ತಂಝಿದ್ ಹಸನ್ ತಮೀಮ್ , ಮೋಮಿನುಲ್ ಹಕ್ , ನಜ್ಮುಲ್ ಹೊಸೇನ್ ಶಾಂತೊ (ನಾಯಕ) , ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಮುಷ್ಫಿಕರ್ ರಹೀಮ್ , ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ , ತಸ್ಕಿನ್ ಅಹ್ಮದ್ , ಹಸನ್ ಮಹಮೂದ್, ಎಬಾದತ್ ಹೊಸೇನ್.

Follow Us