WI vs BAN: ಹೀನಾಯ ಸೋಲಿನ ಬೆನ್ನಲ್ಲೇ ಬಾಂಗ್ಲಾ ತಂಡಕ್ಕೆ ಶೇ.20 ರಷ್ಟು ದಂಡ..!

West Indies vs Bangladesh: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್​ ಕಲೆಹಾಕಿತ್ತು.

WI vs BAN: ಹೀನಾಯ ಸೋಲಿನ ಬೆನ್ನಲ್ಲೇ ಬಾಂಗ್ಲಾ ತಂಡಕ್ಕೆ ಶೇ.20 ರಷ್ಟು ದಂಡ..!
Bangladesh Team
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 07, 2022 | 10:48 AM

ಡೊಮಿನಿಕಾದಲ್ಲಿ ನಡೆದ ವೆಸ್ಟ್ ಇಂಡೀಸ್ (West Indies vs Bangladesh) ವಿರುದ್ದದ ಎರಡನೇ ಟಿ20 ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ಬಾಂಗ್ಲಾದೇಶಕ್ಕೆ ಪಂದದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ನಿಗದಿತ ಸಮಯಕ್ಕಿಂತ ನಿಧಾನವಾಗಿ ಓವರ್​ಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿ ರಿಚಿ ರಿಚರ್ಡ್‌ಸನ್ ಈ ದಂಡ ವಿಧಿಸಿದರು. ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಆಟಗಾರರು ತಮ್ಮ ತಂಡವು ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲರಾದರೆ ಪ್ರತಿ ಓವರ್‌ಗೆ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡವನ್ನು ವಿಧಿಸಲಾಗುತ್ತದೆ.

ತಂಡದ ನಿಧಾನಗತಿಯ ಬೌಲಿಂಗ್​ ತಪ್ಪನ್ನು ಬಾಂಗ್ಲಾದೇಶದ ನಾಯಕ ಮಹಮ್ಮದುಲ್ಲಾ ಒಪ್ಪಿಕೊಂಡಿದ್ದು, ಹೀಗಾಗಿ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ ಎಂದು ಮ್ಯಾಚ್ ರೆಫರಿ ತಿಳಿಸಿದ್ದಾರೆ. ಆನ್-ಫೀಲ್ಡ್ ಅಂಪೈರ್‌ಗಳಾದ ಲೆಸ್ಲಿ ರೈಫರ್ ಜೂನಿಯರ್ ಮತ್ತು ನಿಗೆಲ್ ಡುಗಿಡ್, ಮೂರನೇ ಅಂಪೈರ್ ಗ್ರೆಗೊರಿ ಬ್ರಾಥ್‌ವೈಟ್ ಮತ್ತು ನಾಲ್ಕನೇ ಅಂಪೈರ್ ಪ್ಯಾಟ್ರಿಕ್ ಗುಸ್ಟರ್ಡ್ ಅವರು ರೆಫರಿಗೆ ಬಾಂಗ್ಲಾದೇಶದ ವಿರುದ್ದ ಸ್ಲೋ ಓವರ್​ ರೇಟ್ ದೂರನ್ನು ನೀಡಿದ್ದರು. ಇತ್ತ ಪಂದ್ಯ ಸೋತಿದ್ದ ಬಾಂಗ್ಲಾದೇಶ ತಂಡವು ಇದೀಗ ಪಂದ್ಯದ ಶುಲ್ಕದ ಶೇ.20 ರಷ್ಟು ದಂಡ ಪಾವತಿಸಬೇಕಾಗಿ ಬಂದಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್​ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ ತಂಡವು 6 ವಿಕೆಟ್ ನಷ್ಟಕ್ಕೆ 158 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ವಿಂಡೀಸ್ 35 ರನ್​ಗಳಿಂದ ಭರ್ಜರಿ ಜಯ ಸಾಧಿಸಿತು. ವೆಸ್ಟ್ ಇಂಡೀಸ್ ಪರ 28 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 61 ರನ್​ ಬಾರಿಸಿದ್ದ ರೋವ್​ಮನ್ ಪೊವೆಲ್​ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್