AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

Bangladesh May End IPL Broadcast Ban: ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರದ ಮೇಲಿನ ನಿಷೇಧವನ್ನು ಹೊಸ ಸರ್ಕಾರ ತೆರವುಗೊಳಿಸುವ ಸಾಧ್ಯತೆ ಇದೆ. ಮುಸ್ತಾಫಿಜುರ್ ರೆಹಮಾನ್ ವಿಚಾರದಲ್ಲಿ ಹಿಂದಿನ ಸರ್ಕಾರ ಐಪಿಎಲ್ ನಿಷೇಧಿಸಿತ್ತು, ಟಿ20 ವಿಶ್ವಕಪ್‌ನಿಂದಲೂ ಹಿಂದೆ ಸರಿದಿತ್ತು. ಆದರೆ ಈಗ ಕ್ರೀಡಾ ಸಚಿವರು ಈದ್ ನಂತರ ಚರ್ಚಿಸುವ ಸುಳಿವು ನೀಡಿದ್ದಾರೆ. ಐಪಿಎಲ್ ಪ್ರಸಾರದಿಂದ ಬಾಂಗ್ಲಾದೇಶಕ್ಕೆ ಆರ್ಥಿಕ ಲಾಭ ಮತ್ತು ಬಿಸಿಸಿಐ ಜೊತೆ ಸಂಬಂಧ ಸುಧಾರಿಸಲು ಇದು ಉತ್ತಮ ಅವಕಾಶ ಎಂದು ಪರಿಗಣಿಸಲಾಗಿದೆ.

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ
Ipl 2026
ಪೃಥ್ವಿಶಂಕರ
|

Updated on: Mar 23, 2026 | 4:37 PM

Share

ಐಪಿಎಲ್​ನಿಂದ (IPL) ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಹೊರಹಾಕಿದ್ದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಬಾಂಗ್ಲಾದೇಶದಲ್ಲಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾದೇಶದ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ಹಿಂದಿನ ಸರ್ಕಾರ ತೆಗೆದುಕೊಂಡಿದ್ದ ಐಪಿಎಲ್ ಬ್ಯಾನ್ ನಿರ್ಧಾರವನ್ನು ಮರುಪರಿಶೀಲಿಸುವ ಬಗ್ಗೆ ಸುಳಿವು ನೀಡಿದ್ದಾರೆ.

ಬಾಂಗ್ಲಾದೇಶ ಕ್ರೀಡಾ ಸಚಿವ ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರದ ಬಗ್ಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ‘ಪ್ರಸ್ತುತ ಐಪಿಎಲ್ ಪ್ರಸಾರದ ಬಗ್ಗೆ ಇನ್ನೂ ಚರ್ಚಿಸಿಲ್ಲ, ಆದರೆ ಈದ್ ರಜಾದಿನಗಳು ಮುಗಿದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಮೇಲೆ ಹೇಳಿದಂತೆ ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಕಂಡಿಸಿ, ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ಬಿಸಿಸಿಐ ಆದೇಶದ ಮೇರೆಗೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿತ್ತು.

ಇದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಟಿ20 ವಿಶ್ವಕಪ್​ ಆಡಲು ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುವುದಿಲ್ಲ. ಹೀಗಾಗಿ ನಮ್ಮ ತಂಡದ ಪಂದ್ಯಗಳನ್ನು ಭಾರತದಿಂದ ಹೊರಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿ, ಐಸಿಸಿಗೆ ಮನವಿ ಮಾಡಿತ್ತು. ಆದರೆ ಐಸಿಸಿ ಮಾತ್ರ ಈ ಹಂತದಲ್ಲಿ ಬಾಂಗ್ಲಾ ತಂಡದ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದಿತ್ತು. ಇದರಿಂದ ಇನ್ನಷ್ಟು ಕೆರಳಿದ್ದ ಬಾಂಗ್ಲಾದೇಶ ಸರ್ಕಾರ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿತ್ತು. ಬಾಂಗ್ಲಾ ಸರ್ಕಾರದ ಈ ನಿರ್ಧಾರ ಐಸಿಸಿಗಾಗಲಿ ಅಥವಾ ಬಿಸಿಸಿಐಗಾಗಲಿ ಯಾವುದೇ ನಷ್ಟವನ್ನುಂಟು ಮಾಡಲಿಲ್ಲ. ಆದರೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಾಗೂ ಆಟಗಾರರಿಗೆ ಆರ್ಥಿಕವಾಗಿ ಸಾಕಷ್ಟು ನಷ್ಟ ಉಂಟಾಯಿತು. ಸರ್ಕಾರದ ಈ ನಡೆಯನ್ನು ಬಾಂಗ್ಲಾ ಆಟಗಾರರೇ ವಿರೋಧಿಸಿದ್ದರು.

ಐಪಿಎಲ್ ಇತಿಹಾಸದಲ್ಲಿ ಫೈನಲ್ ತಲುಪದ ಏಕೈಕ ತಂಡ ಯಾವುದು ಗೊತ್ತಾ?

ಇದರಿಂದ ಬಾಂಗ್ಲಾದೇಶಕ್ಕೆ ಲಾಭ

ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಜಾರಿಗೆ ಬಂದಿದೆ. ಇದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಿಲುವಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಆದಾಗ್ಯೂ ಸರ್ಕಾರದೊಂದಿಗಿನ ಸಭೆಯಲ್ಲಿ ಐಪಿಎಲ್ ಪ್ರಸಾರದ ಬಗ್ಗೆ ಅಂತಿಮ ನಿರ್ಧಾರವೇನು ಎಂಬುದನ್ನು ಈಗ ನೋಡಬೇಕಾಗಿದೆ?. ಐಪಿಎಲ್ ಪ್ರಸಾರದಿಂದ ಬಾಂಗ್ಲಾದೇಶಕ್ಕೆ ಆರ್ಥಿಕವಾಗಿ ಲಾಭವಾಗುವುದರಿಂದ ಪ್ರಸಾರಕ್ಕೆ ಅನುವು ಮಾಡಿಕೊಡುವ ಸಾಧ್ಯತೆಗಳು ಹೆಚ್ಚಿವೆ. ಇದರ ಜೊತೆಗೆ ಭವಿಷ್ಯದಲ್ಲಿ ಬಿಸಿಸಿಐ ಜೊತೆಗಿನ ಸಂಬಂಧವನ್ನು ಸುಧಾರಿಸಿಕೊಳ್ಳಲು ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ಇದು ಉತ್ತಮ ಅವಕಾಶವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ