Asia Cup 2023: ಏಷ್ಯಾಕಪ್​ಗೆ ಬಾಂಗ್ಲಾ ತಂಡ ಪ್ರಕಟ; ಶಕೀಬ್ ಅಲ್ ಹಸನ್​ಗೆ ನಾಯಕತ್ವ

Asia Cup 2023: ಪಾಕಿಸ್ತಾನ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್​ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಶನಿವಾರ ಪ್ರಕಟಿಸಿದೆ. ಈ ಪಂದ್ಯಾವಳಿಯಲ್ಲಿ ತಂಡವನ್ನು ಶಕೀಬ್ ಅಲ್ ಹಸನ್ ಮುನ್ನಡೆಸಲಿದ್ದಾರೆ.

Asia Cup 2023: ಏಷ್ಯಾಕಪ್​ಗೆ ಬಾಂಗ್ಲಾ ತಂಡ ಪ್ರಕಟ; ಶಕೀಬ್ ಅಲ್ ಹಸನ್​ಗೆ ನಾಯಕತ್ವ
ಬಾಂಗ್ಲಾದೇಶ ಕ್ರಿಕೆಟ್ ತಂಡ
Follow us
ಪೃಥ್ವಿಶಂಕರ
|

Updated on:Aug 12, 2023 | 10:37 AM

ಪಾಕಿಸ್ತಾನ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್​ಗೆ (Asia Cup 2023) ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು (Bangladesh Cricket Board) 17 ಸದಸ್ಯರ ತಂಡವನ್ನು ಶನಿವಾರ ಪ್ರಕಟಿಸಿದೆ. ಈ ಪಂದ್ಯಾವಳಿಯಲ್ಲಿ ತಂಡವನ್ನು ಶಕೀಬ್ ಅಲ್ ಹಸನ್ (Shakib Al Hasan) ಮುನ್ನಡೆಸಲಿದ್ದಾರೆ. ತಂಡದಲ್ಲಿ ಯುವ ಆಟಗಾರರಾದ ತಂಝಿದ್ ತಮೀಮ್ ಮತ್ತು ಶಮೀಮ್ ಹೊಸೈನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮಹೇದಿ ಹಸನ್ ಕೂಡ ತಂಡದಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ದಿನದ ಹಿಂದಷ್ಟೆ ಅಂದರೆ, ಆಗಸ್ಟ್ 11 ರಂದು ಶಕೀಬ್ ಅಲ್ ಹಸನ್ ಅವರನ್ನು ಏಕದಿನ ತಂಡದ ನಾಯಕನಾಗಿ ನೇಮಿಸಿದ್ದ ಮುಖ್ಯ ಆಯ್ಕೆಗಾರ ಮಿನ್ಹಾಜುಲ್ ಅಬೆದಿನ್ ಏಷ್ಯಾಕಪ್​ಗೆ ಬಾಂಗ್ಲಾ ತಂಡವನ್ನು ಪ್ರಕಟಿಸಿದರು.

ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದ ಮೊಹಮ್ಮದ್ ನಯಿಮ್ ಬಾಂಗ್ಲಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರೆ, ಇದೇ ಅಫ್ಘಾನಿಸ್ತಾನ ವಿರುದ್ಧ ಟಿ20ಯಲ್ಲಿ ಮಿಂಚಿದ್ದ ಶಮಿಮ್ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಆಲ್ರೌಂಡರ್ ಮಹೇದಿ ಹಸನ್ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ.​

ಏಷ್ಯಾಕಪ್- ವಿಶ್ವಕಪ್​ಗೂ ಮುನ್ನ ಬಾಂಗ್ಲಾ ಏಕದಿನ ತಂಡಕ್ಕೆ ನಾಯಕನ ಆಯ್ಕೆ..!

ಮಹಮ್ಮದುಲ್ಲಾಗೆ ಕೋಕ್

ಏಷ್ಯಾಕಪ್ ತಂಡವನ್ನು ಆಯ್ಕೆ ಮಾಡುವಲ್ಲಿ ಆಯ್ಕೆದಾರರು ಎದುರಿಸಿದ ದೊಡ್ಡ ಸವಾಲೆಂದರೆ ಅದು ಅನುಭವಿ ಮಹಮ್ಮದುಲ್ಲಾ ಆಯ್ಕೆ. ಈ ವರ್ಷದ ಮಾರ್ಚ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯ ಆಡಿದ್ದ ಮಹಮ್ಮದುಲ್ಲಾ, ಆ ನಂತರ ಐರ್ಲೆಂಡ್ ವಿರುದ್ಧದ ಏಕದಿನ ಸರಣಿ, ಜುಲೈನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಆ ಬಳಿಕ ಮಾರ್ಚ್‌ನಲ್ಲಿ ಆಯ್ಕೆದಾರರು ಮಹಮ್ಮದುಲ್ಲಾ ಅವರಿಗೆ ವಿಶ್ರಾಂತಿ ನೀಡಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ಮಹಮ್ಮದುಲ್ಲಾ ಅವರನ್ನು ಏಷ್ಯಾಕಪ್​ ತಂಡದಿಂದಲೂ ಹೊರಗಿಡಲಾಗಿದೆ.

ಇನ್ನು ಹಠಾತ್ ನಿವೃತ್ತಿ ನಿರ್ಧಾರದಿಂದ ಬಾಂಗ್ಲಾ ಕ್ರಿಕೆಟ್​ನಲ್ಲಿ ಸಂಚಲನ ಸೃಷ್ಟಿಸಿದ್ದ ತಮೀಮ್, ತನ್ನ ನಿರ್ಧಾರದಿಂದ ಹಿಂದೆ ಸರಿದರಾದರೂ, ಪ್ರಸ್ತುತ ಬೆನ್ನುನೋವಿನಿಂದಾಗಿ ರಿಹ್ಯಾಬ್‌ನಲ್ಲಿದ್ದಾರೆ. ಹೀಗಾಗಿ ಅವರು ಸೆಪ್ಟೆಂಬರ್ 21 ರಿಂದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಏಷ್ಯಾಕಪ್‌ಗೆ ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಮ್ಹುದ್, ಮಹೇದಿ ಹಸನ್, ನಸುಮ್ ಅಹ್ಮದ್, ಶಮೀಮ್ ಹೊಸೈನ್, ಅಫೀಫ್ ಹೊಸೈನ್, ಶೋರಿಫುಲ್ ಇಸ್ಲಾಂ, ಇಬಾದತ್ ಹೊಸೈನ್, ಮೊಹಮ್ಮದ್ ನಯಿಮ್

Published On - 10:13 am, Sat, 12 August 23

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ