
ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಹುಟ್ಟಿಕೊಂಡಿರುವ ವಿವಾದ ಇದೀಗ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಮತ್ತಷ್ಟು ಬಿರುಕು ಮೂಡಿಸಿದೆ. ಮುಸ್ತಾಫಿಜುರ್ರನ್ನು ಐಪಿಎಲ್‌ನಿಂದ ಹೊರಹಾಕಿರುವುದಕ್ಕೆ ಕೆರಳಿರುವ ಬಾಂಗ್ಲಾ ಕ್ರಿಕೆಟ್ ಮಂಡಳಿ, ಭಾರತಕ್ಕೆ ಟಿ20 ವಿಶ್ವಕಪ್ ಆಡಲು ಬರುವುದಿಲ್ಲ ಎನ್ನುತ್ತಿದೆ. ಇದರ ಜೊತೆಗೆ ಐಪಿಎಲ್ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ಬ್ಯಾನ್ ಮಾಡಲಾಗುತ್ತಿದೆ ಎಂಬ ವರದಿಯೂ ಹರಿದಾಡುತ್ತಿದೆ. ಇದೆಲ್ಲ ವಿವಾದಗಳ ನಡುವೆ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರು 2026 ರ ಟಿ20 ವಿಶ್ವಕಪ್‌ಗಾಗಿ (T20 World Cup) ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ. ಲಿಟ್ಟನ್ ದಾಸ್ ನಾಯಕತ್ವದ 15 ಆಟಗಾರರ ತಂಡವನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಘೋಷಿಸಿದೆ. ಬಾಂಗ್ಲಾ ತಂಡದಲ್ಲಿರುವ 15 ಆಟಗಾರರಲ್ಲಿ ಐಪಿಎಲ್‌ನಿಂದ ಹೊರಬಿದ್ದ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ಕೂಡ ಸೇರಿದ್ದಾರೆ.
ಮೇಲೆ ಹೇಳಿದಂತೆ ಐಪಿಎಲ್ 2026 ರಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಹೊರಗಿಟ್ಟಿರುವುದು ಕೋಲಾಹಲ ಸೃಷ್ಟಿಸಿದೆ. ಮುಸ್ತಾಫಿಜುರ್ ಅವರನ್ನು ಹೊರಗಿಟ್ಟಿದ್ದರಿಂದ ಬಾಂಗ್ಲಾದೇಶ ಕ್ರೀಡಾ ಸಚಿವಾಲಯವು ಅಸಮಾಧಾನಗೊಂಡಿದ್ದು, ಬಿಸಿಸಿಐನ ಈ ನಿರ್ಧಾರ ಬಾಂಗ್ಲಾದೇಶ ಕ್ರಿಕೆಟ್ ಮತ್ತು ಅದರ ಆಟಗಾರರಿಗೆ ಮಾಡಿದ ಅವಮಾನವೆಂದು ಆರೋಪಿಸಿದೆ. ಬಾಂಗ್ಲಾದೇಶ ಕ್ರೀಡಾ ಸಚಿವಾಲಯದ ಸೂಚನೆಗಳನ್ನು ಅನುಸರಿಸಿ, ಬಿಸಿಬಿ ಮುಸ್ತಾಫಿಜುರ್ ಅವರನ್ನು ಹೊರಗಿಟ್ಟಿರುವ ಬಗ್ಗೆ ಸ್ಪಷ್ಟೀಕರಣವನ್ನು ಕೋರಿ ಬಿಸಿಸಿಐಗೆ ಇಮೇಲ್ ಮಾಡಿದೆ.
ಇದಲ್ಲದೆ, 2026 ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡ ಆಡಲಿರುವ ಪಂದ್ಯಗಳ ಸ್ಥಳವನ್ನು ಬದಲಾಯಿಸುವಂತೆ ಕೋರಿ ಐಸಿಸಿಗೆ ಇಮೇಲ್ ಕೂಡ ಮಾಡಿದೆ. ಬಿಸಿಬಿ ತನ್ನ ಆಟಗಾರರ ಸುರಕ್ಷತೆಯನ್ನು ಪರಿಗಣಿಸಿ ಭಾರತದ ಬದಲು ಶ್ರೀಲಂಕಾದಲ್ಲಿ ಪಂದ್ಯಗಳನ್ನು ನಡೆಸಬೇಕೆಂದು ಒತ್ತಾಯಿಸುತ್ತಿದೆ ಎಂತಲೂ ವರದಿಯಾಗಿದೆ.
Litton Das-led Bangladesh have named a strong group for the upcoming Men’s #T20WorldCup 2026 📃
More 👇https://t.co/hgVGLHTPfC
— ICC (@ICC) January 4, 2026
ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶ ಫೆಬ್ರವರಿ 7 ರಂದು ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ನಂತರ ಫೆಬ್ರವರಿ 9 ರಂದು ಇಟಲಿ ವಿರುದ್ಧ ಆಡಲಿದೆ. ಫೆಬ್ರವರಿ 14 ರಂದು ಬಾಂಗ್ಲಾದೇಶ ಇಂಗ್ಲೆಂಡ್ ವಿರುದ್ಧ ನಿರ್ಣಾಯಕ ಪಂದ್ಯವನ್ನು ಆಡಲಿದೆ. ಎಲ್ಲಾ ಮೂರು ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿವೆ. ಇದಲ್ಲದೆ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನೇಪಾಳ ವಿರುದ್ಧ ತನ್ನ ಅಂತಿಮ ಗುಂಪು ಹಂತದ ಪಂದ್ಯವನ್ನು ಆಡಲಿದೆ.
IPL 2026: ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಿಂದ ನಿಷೇಧ? ಸ್ಪಷ್ಟನೆ ನೀಡಿದ ಬಿಸಿಸಿಐ
2026 ರ ಟಿ20 ವಿಶ್ವಕಪ್‌ಗಾಗಿ ಬಾಂಗ್ಲಾದೇಶ ತಂಡ: ಲಿಟನ್ ದಾಸ್ (ನಾಯಕ), ಮೊಹಮ್ಮದ್ ಸೈಫ್ ಹಸನ್ (ಉಪನಾಯಕ), ತಂಜಿದ್ ಹಸನ್, ಮೊಹಮ್ಮದ್ ಪರ್ವೇಜ್ ಹೊಸೈನ್ ಎಮಾನ್, ತೌಹಿದ್ ಹೃದಯೋಯ್, ಶಮೀಮ್ ಹೊಸೈನ್, ಕಾಜಿ ನೂರುಲ್ ಹಸನ್ ಸೋಹನ್, ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ತಂಝೀಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮೊಹಮ್ಮದ್ ಶೈಫುದ್ದೀನ್, ಶೋರಿಫುಲ್ ಇಸ್ಲಾಂ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ