AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BAN vs AFG: ಅಫ್ಘಾನ್ ವಿರುದ್ಧ ಸೇಡು ತೀರಿಸಿಕೊಂಡ ಬಾಂಗ್ಲಾ ಹುಲಿಗಳು

Bangladesh vs Afghanistan: 117 ರನ್​ಗಳ ಗುರಿ ಪಡೆದ ಬಾಂಗ್ಲಾದೇಶ್ ತಂಡಕ್ಕೆ ಲಿಟ್ಟನ್ ದಾಸ್ (35) ಹಾಗೂ ಅಫೀಫ್ ಹೊಸೈನ್ (24) ಉತ್ತಮ ಆರಂಭ ಒದಗಿಸಿದ್ದರು.

BAN vs AFG: ಅಫ್ಘಾನ್ ವಿರುದ್ಧ ಸೇಡು ತೀರಿಸಿಕೊಂಡ ಬಾಂಗ್ಲಾ ಹುಲಿಗಳು
Bangladesh Team
TV9 Web
| Edited By: |

Updated on: Jul 16, 2023 | 10:35 PM

Share

Bangladesh vs Afghanistan, 2nd T20I: ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ್ ತಂಡವು ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಬಾಂಗ್ಲಾದೇಶ್ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ತಂಡದ ನಾಯಕ ಶಕೀಬ್ ಅಲ್ ಹಸನ್ ಬೌಲಿಂಗ್ ಆಯ್ದುಕೊಂಡಿದ್ದರು.

ಆದರೆ ಪಂದ್ಯದ ಆರಂಭದಲ್ಲೇ ಮಳೆ ಶುರುವಾಗಿದ್ದರಿಂದ ತಲಾ 17 ಓವರ್​ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಯಿತು. ಅದರಂತೆ ಮೊದಲ ಇನಿಂಗ್ಸ್ ಆಡಿದ ಅಫ್ಘಾನಿಸ್ತಾನ್ ಪರ ಪ್ರಮುಖ ಬ್ಯಾಟರ್​ಗಳು ವಿಫಲರಾದರು.

ಇದಾಗ್ಯೂ ಇಬ್ರಾಹಿಂ ಝದ್ರಾನ್ (22), ಅಜ್ಮತುಲ್ಲಾ (25) ಹಾಗೂ ಕರೀಮ್ ಜನತ್ 20 ರನ್​ಗಳಿಸುವ ಮೂಲಕ ತಂಡದ ಮೊತ್ತವನ್ನು 17 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 116 ಕ್ಕೆ ತಂದು ನಿಲ್ಲಿಸಿದರು.

117 ರನ್​ಗಳ ಗುರಿ ಪಡೆದ ಬಾಂಗ್ಲಾದೇಶ್ ತಂಡಕ್ಕೆ ಲಿಟ್ಟನ್ ದಾಸ್ (35) ಹಾಗೂ ಅಫೀಫ್ ಹೊಸೈನ್ (24) ಉತ್ತಮ ಆರಂಭ ಒದಗಿಸಿದ್ದರು. ಇನ್ನು ತೌಹಿದ್ ಹೃದಯ್ 19 ರನ್​ಗಳ ಕಾಣಿಕೆ ನೀಡಿದರೆ, ನಾಯಕ ಶಕೀಬ್ ಅಲ್ ಹಸನ್ ಅಜೇಯ 18 ರನ್ ಬಾರಿಸಿದರು. ಈ ಮೂಲಕ 16.1 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 119 ರನ್​ಗಳಿಸಿ ಬಾಂಗ್ಲಾದೇಶ್ ತಂಡವು ಜಯ ಸಾಧಿಸಿತು.

ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯನ್ನು ಬಾಂಗ್ಲಾದೇಶ್ 2-0 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ 2 ವಿಕೆಟ್​ಗಳ ಜಯ ಸಾಧಿಸಿತ್ತು.

ಬಾಂಗ್ಲಾದೇಶ್ ಪ್ಲೇಯಿಂಗ್ 11: ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ಅಫೀಫ್ ಹೊಸೈನ್ , ಶಾಕಿಬ್ ಅಲ್ ಹಸನ್ (ನಾಯಕ) , ತೌಹಿದ್ ಹೃದಯ್ , ನಜ್ಮುಲ್ ಹೊಸೈನ್ ಶಾಂಟೋ , ಶಮೀಮ್ ಹೊಸೈನ್ , ಮೆಹಿದಿ ಹಸನ್ ಮಿರಾಜ್ , ತಸ್ಕಿನ್ ಅಹ್ಮದ್ , ನಸುಮ್ ಅಹ್ಮದ್ , ಹಸನ್ ಮಹ್ಮದ್ , ರಹ್ ಮುಸ್ತಾಫ್ ಝುರ್.

ಅಫ್ಘಾನಿಸ್ತಾನ್ ಪ್ಲೇಯಿಂಗ್ 11: ಹಝರತುಲ್ಲಾ ಝಜೈ , ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ , ಕರೀಮ್ ಜನತ್ , ಮೊಹಮ್ಮದ್ ನಬಿ , ನಜೀಬುಲ್ಲಾ ಝದ್ರಾನ್ , ಅಜ್ಮತುಲ್ಲಾ ಒಮರ್ಜಾಯ್ , ರಶೀದ್ ಖಾನ್ (ನಾಯಕ) , ಮುಜೀಬ್ ಉರ್ ರಹಮಾನ್ , ವಫಾದರ್ ಮೊಮಂಡ್ , ಫಜಲ್ಹಕ್ ಫಾರೂಖಿ.

ಇದನ್ನೂ ಓದಿ: IPL 2024: RCB ತಂಡಕ್ಕೆ ಮೇಜರ್ ಸರ್ಜರಿ: ಕೋಚ್​ಗೆ ಗೇಟ್​ ಪಾಸ್..?

ಸೇಡು ತೀರಿಸಿಕೊಂಡ ಬಾಂಗ್ಲಾ ಹುಲಿಗಳು:

ಟಿ20 ಸರಣಿಯನ್ನು ಗೆಲ್ಲುವ ಮೂಲಕ ಬಾಂಗ್ಲಾದೇಶ್ ಏಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಂಡಿದೆ. ಈ ಸರಣಿಗೂ ಮುನ್ನ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಅಫ್ಘಾನಿಸ್ತಾನ್ ತಂಡವು 2-1 ಅಂತರದಿಂದ ಗೆದ್ದುಕೊಂಡಿತ್ತು. ಇದೀಗ ಟಿ20 ಸರಣಿಯಲ್ಲಿ ಜಯ ಸಾಧಿಸಿ ಬಾಂಗ್ಲಾದೇಶ್ ತಂಡವು ಲೆಕ್ಕ ಚುಕ್ತಾ ಮಾಡಿಕೊಂಡಿದೆ.

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ