ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಂದು ಭಾರತದಲ್ಲಿ ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಇಂದಿನಿಂದ ಅಭ್ಯಾಸ ಪಂದ್ಯಗಳು ಶುರುವಾಗಲಿದೆ. ಮೊದಲ ದಿನ ಮೂರು ಪಂದ್ಯಗಳನ್ನು ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ-ಶ್ರೀಲಂಕಾ ಮುಖಾಮುಖಿಯಾದರೆ, ದ್ವಿತೀಯ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಲಿದೆ. ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಸೆಣೆಸಾಟ ನಡೆಸಲಿದೆ.
ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ಅಭ್ಯಾಸ ಪಂದ್ಯವು ಗುವಾಹಟಿಯ ಬರಸ್ಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.
ಬಾಂಗ್ಲಾದೇಶ ತಂಡ: ತಂಝಿದ್ ಹಸನ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ತೌಹಿದ್ ಹೃದಯೋಯ್, ಮಹ್ಮುದುಲ್ಲಾ, ಮಹೇದಿ ಹಸನ್, ಮೆಹಿದಿ ಹಸನ್ ಮಿರಾಜ್, ತಂಝಿಮ್ ಹಸನ್ ಸಾಕಿಬ್, ಹಸನ್ ಮಹಮ್ಮದ್, ತಸುಮ್ ಅಹ್ಮದ್, ತಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ.
ವಿಶ್ವಕಪ್ಗೆ 15 ಸದಸ್ಯರ ಅಂತಿಮ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ತಂಡದಲ್ಲಾಗಿದೆ ಪ್ರಮುಖ ಬದಲಾವಣೆ..!
ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ಮಥೀಶ ಪತಿರಣ, ಕಸುನ್ ರಜಿತ, ಲಹಿರು ಕುಮಾರ, ಮಹೇಶ್ ತೀಕ್‌ಸನ ದಿಲ್ಶನ್ ಮಧುಶಂಕ, ದಿಮುತ್ ಕರುಣರತ್ನೆ.
ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಅಭ್ಯಾಸ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿವೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಸ್ಗಿಯಾಡಿಮ್ಸ್, ತಗಿಝಾಡ್ಸೊ ವಿಲಿಯಮ್ಸ್, ತಗಿಝಾಡ್ಸೊ ವಿಲಿಯಮ್ಸ್.
ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ನಜೀಬುಲ್ಲಾ ಝದ್ರಾನ್ , ರಹಮತ್ ಷಾ, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಅಬ್ದುಲ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಉರ್ ಅಹ್ಮದ್, ಫಜಲ್ಹಕ್ ಫರೂಲ್.
ನ್ಯೂಜಿಲೆಂಡ್-ಪಾಕಿಸ್ತಾನ ನಡುವಣ ಅಭ್ಯಾಸ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.
ಪಾಕಿಸ್ತಾನ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಫ್ರಿದಿ ವಾಸಿಂ.
ನ್ಯೂಝಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕ್ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ