Bangladesh vs England: ವಿಶ್ವ ಚಾಂಪಿಯನ್ನರನ್ನು ಮಕಾಡೆ ಮಲಗಿಸಿದ ಬಾಂಗ್ಲಾ ಟೈಗರ್ಸ್

| Updated By: ಝಾಹಿರ್ ಯೂಸುಫ್

Updated on: Mar 14, 2023 | 11:18 PM

Bangladesh vs England T20: ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ್ದ ಬಾಂಗ್ಲಾದೇಶ್, 2ನೇ ಪಂದ್ಯದಲ್ಲಿ 4 ವಿಕೆಟ್​ಗಳ ಜಯ ಸಾಧಿಸಿತ್ತು.

Bangladesh vs England: ವಿಶ್ವ ಚಾಂಪಿಯನ್ನರನ್ನು ಮಕಾಡೆ ಮಲಗಿಸಿದ ಬಾಂಗ್ಲಾ ಟೈಗರ್ಸ್
Bangladesh Team
Follow us on

Bangladesh vs England: ಹಾಲಿ ಟಿ20 ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಹೀನಾಯ  ಸೋಲುಣಿಸಿ  ಬಾಂಗ್ಲಾದೇಶ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಢಾಕಾದ ಶೇರ್​ ಈ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ 16 ರನ್​ಗಳ ಜಯ ಸಾಧಿಸಿ ಬಾಂಗ್ಲಾದೇಶ್ ತಂಡವು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಇಂಗ್ಲೆಂಡ್​ಗೆ ವೈಟ್ ವಾಶ್ ತಪ್ಪಿಸಿಕೊಳ್ಳುವ ಅವಕಾಶವಿತ್ತು. ಆದರೆ ಮೂರನೇ ಟಿ20 ಪಂದ್ಯದಲ್ಲೂ ಬಾಂಗ್ಲಾ ಆಟಗಾರರು ಪರಾಕ್ರಮ ಮೆರೆದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಪರ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

57 ಎಸೆತಗಳನ್ನು ಎದುರಿಸಿದ ಲಿಟ್ಟನ್ ದಾಸ್ 1 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ 73 ರನ್​ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಜ್ಮುಮ್ ಶಾಂಟೋ 36 ಎಸೆತಗಳಲ್ಲಿ ಅಜೇಯ 47 ರನ್​ ಗಳಿಸಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಬಾಂಗ್ಲಾದೇಶ್ ತಂಡವು 2 ವಿಕೆಟ್ ನಷ್ಟಕ್ಕೆ 158 ರನ್​ ಕಲೆಹಾಕಿತು.

159 ರನ್​ಗಳ ಗುರಿ ಪಡೆದ ಇಂಗ್ಲೆಂಡ್​ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಫಿಲ್ ಸಾಲ್ಟ್ ಶೂನ್ಯದೊಂದಿಗೆ ನಿರ್ಗಮಿಸಿದ್ದರು. ಇದಾಗ್ಯೂ ಮತ್ತೋರ್ವ ಆರಂಭಿಕ ಡೇವಿಡ್ ಮಲಾನ್ 47 ಎಸೆತಗಳಲ್ಲಿ 53 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಆಡಿದ ಜೋಸ್ ಬಟ್ಲರ್ 40 ರನ್ ಬಾರಿಸಿ ತಂಡಕ್ಕೆ ಆಸರೆಯಾದರು.

ಇದನ್ನೂ ಓದಿ
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ ತಂಡವು 142 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಬಾಂಗ್ಲಾದೇಶ್ ತಂಡವು 16 ರನ್​ಗಳ ಭರ್ಜರಿ ಜಯ ಸಾಧಿಸಿತು.

ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ್ದ ಬಾಂಗ್ಲಾದೇಶ್, 2ನೇ ಪಂದ್ಯದಲ್ಲಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್ನರನ್ನು ವೈಟ್​ವಾಶ್ ಮಾಡಿ ಸರಣಿ ಗೆದ್ದುಕೊಂಡಿದೆ. ಇತ್ತ ಟಿ20 ಕ್ರಿಕೆಟ್​ನ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಇಂಗ್ಲೆಂಡ್ ಈ ಹೀನಾಯ ಸರಣಿ ಸೋಲಿನಿಂದ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಬಾಂಗ್ಲಾದೇಶ್ ಪ್ಲೇಯಿಂಗ್ 11: ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ರೋನಿ ತಾಲುಕ್ದಾರ್ , ನಜ್ಮುಲ್ ಹೊಸೈನ್ ಶಾಂಟೋ , ತೌಹಿದ್ ಹೃದಯೋಯ್ , ಶಮೀಮ್ ಹೊಸೈನ್ , ಮೆಹಿದಿ ಹಸನ್ ಮಿರಾಜ್ , ಶಾಕಿಬ್ ಅಲ್ ಹಸನ್ (ನಾಯಕ) , ತನ್ವಿರ್ ಇಸ್ಲಾಂ , ತಸ್ಕಿನ್ ಅಹ್ಮದ್ , ಮುಸ್ತಫಿಜುರ್ ರಹಮಾನ್ , ಹಸನ್ ಮಹ್ಮದ್.

ಇದನ್ನೂ ಓದಿ: Virat Kohli: ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ಕಿಂಗ್ ಕೊಹ್ಲಿ

ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್ , ಡೇವಿಡ್ ಮಲನ್ , ಜೋಸ್ ಬಟ್ಲರ್ (ನಾಯಕ) , ಬೆನ್ ಡಕೆಟ್ , ಮೊಯಿನ್ ಅಲಿ , ಸ್ಯಾಮ್ ಕರ್ರನ್ , ಕ್ರಿಸ್ ವೋಕ್ಸ್ , ಕ್ರಿಸ್ ಜೋರ್ಡಾನ್ , ಆದಿಲ್ ರಶೀದ್ , ರೆಹಾನ್ ಅಹ್ಮದ್ , ಜೋಫ್ರಾ ಆರ್ಚರ್.