AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BAN vs PAK: 8 ಆಟಗಾರರು ಒಂದಂಕಿಗೆ ಸುಸ್ತು; ಬಾಂಗ್ಲಾದೇಶ ವಿರುದ್ಧ ಹೀನಾಯವಾಗಿ ಸೋತ ಪಾಕಿಸ್ತಾನ

Bangladesh vs Pakistan T20 Series: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಪಾಕಿಸ್ತಾನ ಕೇವಲ 110 ರನ್‌ಗಳಿಗೆ ಆಲೌಟ್ ಆಯಿತು. ಬಾಂಗ್ಲಾದೇಶ ತಂಡವು ಸುಲಭವಾಗಿ ಈ ಗುರಿಯನ್ನು ಗಳಿಸಿತು. ಈ ಗೆಲುವಿನಿಂದ ಬಾಂಗ್ಲಾದೇಶ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

BAN vs PAK: 8 ಆಟಗಾರರು ಒಂದಂಕಿಗೆ ಸುಸ್ತು; ಬಾಂಗ್ಲಾದೇಶ ವಿರುದ್ಧ ಹೀನಾಯವಾಗಿ ಸೋತ ಪಾಕಿಸ್ತಾನ
Ban Vs Pak
ಪೃಥ್ವಿಶಂಕರ
|

Updated on: Jul 20, 2025 | 11:05 PM

Share

ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಸ್ತುತ ಬಾಂಗ್ಲಾದೇಶ (Bangladesh vs Pakistan) ಪ್ರವಾಸದಲ್ಲಿದೆ . ಎರಡೂ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಢಾಕಾದ ಶೇರ್-ಎ-ಬಾಂಗ್ಲಾ (Sher-e-Bangla) ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 7 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಮಿರ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ತಂಡವು ಕೇವಲ 110 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಇನ್ನು 27 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಸುಮಾರು ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವೆ ಟಿ20 ಸರಣಿ ಆರಂಭವಾಗಿದೆ. ಇದಕ್ಕೂ ಮೊದಲು, ಮೇ-ಜೂನ್ ತಿಂಗಳಲ್ಲಿ ಎರಡೂ ತಂಡಗಳು ಪಾಕಿಸ್ತಾನದಲ್ಲಿ ಮುಖಾಮುಖಿಯಾಗಿದ್ದವು. ಈ ಸರಣಿಯಲ್ಲಿ ಪಾಕಿಸ್ತಾನ, ಬಾಂಗ್ಲಾದೇಶವನ್ನು 3-0 ಅಂತರದಿಂದ ಸೋಲಿಸಿತು. ಈ ಬಾರಿ ಸರಣಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದು, ಆತಿಥೇಯ ತಂಡವು ಪಾಕಿಸ್ತಾನಕ್ಕೆ ಮೊದಲ ಪಂದ್ಯದಲ್ಲೇ ಆಘಾತ ನೀಡಿದೆ.

ಪಾಕಿಸ್ತಾನದ ಬ್ಯಾಟಿಂಗ್ ವೈಫಲ್ಯ

ಜುಲೈ 20 ರಂದು ಭಾನುವಾರ ಮಿರ್ಪುರದಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಬೌಲರ್‌ಗಳ ಮಾರಕ ದಾಳಿಗೆ ಪಾಕಿಸ್ತಾನ ತಂಡಕ್ಕೆ ಪೂರ್ಣ 20 ಓವರ್‌ಗಳನ್ನು ಆಡಲು ಸಹ ಸಾಧ್ಯವಾಗಲಿಲ್ಲ. ಮುಸ್ತಾಫಿಜುರ್ ರೆಹಮಾನ್ (4 ಓವರ್‌ಗಳು, 6 ರನ್‌ಗಳು, 2 ವಿಕೆಟ್‌ಗಳು) ಸೇರಿದಂತೆ ಬಾಂಗ್ಲಾದೇಶದ ವೇಗಿಗಳು ಪಾಕಿಸ್ತಾನ ತಂಡವನ್ನು ಕೇವಲ 110 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಪರಿಸ್ಥಿತಿ ಹೇಗಿತ್ತೆಂದರೆ, ಪಾಕಿಸ್ತಾನದ ಅಗ್ರ 6 ಬ್ಯಾಟ್ಸ್‌ಮನ್‌ಗಳಲ್ಲಿ 5 ಮಂದಿ ಒಂದೇ ಅಂಕದ ಸ್ಕೋರ್‌ಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಕೇವಲ 46 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಪಾಕಿಸ್ತಾನ ತಂಡವು ಈ ಸ್ಕೋರ್ ಅನ್ನು ತಲುಪುವಲ್ಲಿ ಅನುಭವಿ ಆರಂಭಿಕ ಫಖರ್ ಜಮಾನ್ ದೊಡ್ಡ ಪಾತ್ರ ವಹಿಸಿದರು. ಅವರು 34 ಎಸೆತಗಳಲ್ಲಿ 44 ರನ್‌ಗಳ ಇನ್ನಿಂಗ್ಸ್ ಆಡಿದರು. ಮುಸ್ತಾಫಿಜುರ್ ಜೊತೆಗೆ, ಬಾಂಗ್ಲಾದೇಶ ಪರ ತಸ್ಕಿನ್ ಅಹ್ಮದ್ 3 ವಿಕೆಟ್‌ಗಳನ್ನು ಪಡೆದರು.

Champions League T20: 12 ವರ್ಷಗಳ ನಂತರ ಮತ್ತೆ ಆರಂಭವಾಗಲಿದೆ ಚಾಂಪಿಯನ್ಸ್ ಲೀಗ್ ಟಿ20

ಸುಲಭವಾಗಿ ಪಂದ್ಯ ಗೆದ್ದ ಬಾಂಗ್ಲಾದೇಶ

ಈ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ಕೇವಲ 15.3 ಓವರ್‌ಗಳಲ್ಲಿ ಅಂದರೆ 93 ಎಸೆತಗಳಲ್ಲಿ ಈ ಗುರಿಯನ್ನು ತಲುಪಿತು. ಆದಾಗ್ಯೂ, ಬಾಂಗ್ಲಾದೇಶ ತಂಡದ ಆರಂಭವೂ ಸಹ ಉತ್ತಮವಾಗಿರಲಿಲ್ಲ. ಮೊದಲ ಓವರ್‌ನಲ್ಲಿಯೇ ಮೊದಲ ವಿಕೆಟ್ ಪತನವಾಯಿತು. ಮೂರನೇ ಓವರ್‌ನ ವೇಳೆಗೆ, ಕೇವಲ 7 ರನ್‌ಗಳಿಗೆ 2 ವಿಕೆಟ್‌ಗಳು ಬಿದ್ದವು. ಆದರೆ ಇದರ ನಂತರ, ಆರಂಭಿಕ ಆಟಗಾರ ಪರ್ವೇಜ್ ಹೊಸೈನ್ ಎಮನ್ ಮತ್ತು ತೌಹೀದ್ ಹೃದಯೋಯ್ (37) 73 ರನ್‌ಗಳ ಪಾಲುದಾರಿಕೆಯನ್ನು ರಚಿಸಿ ಗೆಲುವು ಖಚಿತಪಡಿಸಿದರು. ಎಮನ್ ಅದ್ಭುತ ಅರ್ಧಶತಕ ಗಳಿಸಿ ತಂಡಕ್ಕೆ ಸುಲಭ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಸಲ್ಮಾನ್ ಮಿರ್ಜಾ ಪಾಕಿಸ್ತಾನ ಪರ 2 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್