ಬಾಂಗ್ಲಾದೇಶ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

ನಜ್ಮುಲ್ ಹೊಸೈನ್ ಶಾಂಟೊ 2023 ರಲ್ಲಿ ಬಾಂಗ್ಲಾದೇಶ್ ಪರ ಎಲ್ಲಾ ಸ್ವರೂಪಗಳಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್. ಈ ವರ್ಷ ಶಾಂಟೊ ನಾಲ್ಕು ಶತಕಗಳು ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ವರ್ಷ ಒಟ್ಟು 1,078 ರನ್ ಕಲೆಹಾಕುವ ಮೂಲಕ ಬಾಂಗ್ಲಾದೇಶ್ ತಂಡ ಟಾಪ್ ಸ್ಕೋರರ್ ಎನಿಸಿಕೊಂಡಿದ್ದಾರೆ.

ಬಾಂಗ್ಲಾದೇಶ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್
nazmul hasan shanto
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 05, 2023 | 6:58 PM

ಏಷ್ಯಾಕಪ್​ನಲ್ಲಿ ಸೂಪರ್-4 ಹಂತಕ್ಕೇರಿರುವ ಬಾಂಗ್ಲಾದೇಶ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ನಜ್ಮುಲ್ ಹೊಸೈನ್ ಶಾಂಟೊ ಅವರು ಮಂಡಿರಜ್ಜು ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇತ್ತ ಬಾಂಗ್ಲಾದೇಶ್ ತಂಡವು ಸೂಪರ್-4 ಹಂತಕ್ಕೇರಲು ಮುಖ್ಯ ಕಾರಣ ನಜ್ಮುಲ್ ಅವರ ಉತ್ತಮ ಪ್ರದರ್ಶನ.

ಏಕೆಂದರೆ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಗಳಲ್ಲಿ ಕ್ರಮವಾಗಿ 89 ಮತ್ತು 104 ರನ್ ಬಾರಿಸಿ ಮಿಂಚಿದ್ದರು. ಆದರೆ ಅಫ್ಘಾನ್​ ವಿರುದ್ಧದ ಪಂದ್ಯದ ವೇಳೆ ನಜ್ಮುಲ್ ಎಡ ಮಂಡಿ ನೋವಿಗೆ ಒಳಗಾಗಿದ್ದರು. ಹೀಗಾಗಿ ಫೀಲ್ಡಿಂಗ್​ನಿಂದ ಹಿಂದೆ ಸರಿದಿದ್ದರು.

ಇದೀಗ ಶಾಂಟೊ ಅವರ ಎಂಆರ್‌ಐ ಸ್ಕ್ಯಾನ್ ವರದಿ ಬಂದಿದ್ದು, ಅವರ ಸ್ನಾಯುಗಳಲ್ಲಿ ಸಮಸ್ಯೆಯಿರುವುದು ದೃಢಪಟ್ಟಿದೆ ಎಂದು ತಂಡದ ಫಿಸಿಯೋ ಬೈಜೆದುಲ್ ಇಸ್ಲಾಂ ಖಾನ್ ಹೇಳಿದ್ದಾರೆ. ಅಲ್ಲದೆ ಮುನ್ನೆಚ್ಚರಿಕೆಯಾಗಿ, ಶಾಂಟೊ ಅವರು ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುವುದಿಲ್ಲ. ಬದಲಾಗಿ ಏಕದಿನ ವಿಶ್ವಕಪ್​ಗೂ ಮುನ್ನ ಸಂಪೂರ್ಣ ಫಿಟ್​ನೆಸ್ ಸಾಧಿಸುವತ್ತ ಗಮನ ಹರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಂದರೆ ಇದೀಗ ಬಾಂಗ್ಲಾದೇಶ್ ನಿರ್ಣಾಯಕ ಹಂತಕ್ಕೇರಿದರೂ ಎಡಗೈ ದಾಂಡಿಗ ನಜ್ಮುಲ್ ಹೊಸೈನ್ ಹೊರಗುಳಿಯುತ್ತಿರುವುದು ಬಾಂಗ್ಲಾ ತಂಡ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

ಏಕೆಂದರೆ ನಜ್ಮುಲ್ 2023 ರಲ್ಲಿ ಬಾಂಗ್ಲಾದೇಶ್ ಪರ ಎಲ್ಲಾ ಸ್ವರೂಪಗಳಲ್ಲಿ ನಾಲ್ಕು ಶತಕಗಳು ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ ಆಟಗಾರ. ಅಷ್ಟೇ ಅಲ್ಲದೆ ಈ ವರ್ಷ ಒಟ್ಟು 1,078 ರನ್ ಕಲೆಹಾಕುವ ಮೂಲಕ ಬಾಂಗ್ಲಾದೇಶ್ ತಂಡ ಟಾಪ್ ಸ್ಕೋರರ್ ಎನಿಸಿಕೊಂಡಿದ್ದಾರೆ.

ಇದೀಗ ಏಷ್ಯಾಕಪ್ ಸೂಪರ್-4 ಹಂತದ ಪಂದ್ಯಗಳಿಂದ ಅವರು ಹೊರಗುಳಿದಿದ್ದು, ಇದಾಗ್ಯೂ ಲಾಹೋರ್​ನಲ್ಲಿ ಬುಧವಾರ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಮೊದಲ ಸೂಪರ್ ಫೋರ್​ ಪಂದ್ಯದಲ್ಲಿ ಶಕೀಬ್ ಅಲ್ ಹಸನ್ ಪಡೆ ಗೆಲುವು ದಾಖಲಿಸಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಬಾಂಗ್ಲಾದೇಶ್ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ತಮೀಮ್,  ತೌಹಿದ್ ಹೃದಯ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮದ್, ಶೇಖ್ ಮಹಿದಿ, ನಸುಮ್ ಅಹ್ಮದ್, ಶಮೀಮ್ ಹೊಸೈನ್, ಶರೀಫುಲ್ ಇಸ್ಲಾಂ, ಇಬಾದತ್ ಹೊಸೈನ್, ನಯಿಮ್ ಶೇಖ್.

Published On - 6:57 pm, Tue, 5 September 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ