IND vs AUS 3rd ODI: ರಾಜ್‌ಕೋಟ್‌ನಲ್ಲಿ ಸುರಿಯಲಿದೆ ರನ್ ಮಳೆ: ಸೌರಾಷ್ಟ್ರ ಸ್ಟೇಡಿಯಂ ಪಿಚ್ ರಿಪೋರ್ಟ್ ನೋಡಿ
IND vs AUS 3rd ODI Pitch Report: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ನಡೆಯಲಿರುವ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಇದು ಬ್ಯಾಟಿಂಗ್ ಸ್ನೇಹಿ ಆಗಿದೆ. ಬ್ಯಾಟರ್‌ಗಳಿಗೆ ಈ ಪಿಚ್ ಸ್ವರ್ಗ ಎಂದೇ ಹೇಳಬಹುದು. ಈ ಮೈದಾನವು ಇಂದೋರ್‌ಗಿಂತ ದೊಡ್ಡದಾಗಿದೆ, ಆದರೆ ಇಲ್ಲಿನ ಪಿಚ್ ಬ್ಯಾಟರ್‌ಗಳಿಗೆ ಸಂಪೂರ್ಣ ತಲೆಬಾಗುತ್ತದೆ.
ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸೋಮವಾರ ಸಂಜೆಯೇ ರಾಜ್ಕೋಟ್ಗೆ ತಲುಪಿದ್ದಾರೆ. ವಿಶ್ರಾಂತಿಯಲ್ಲಿದ್ದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಇನ್ನೂ ಕೆಲ ಆಟಗಾರರು ಮೂರನೇ ಪಂದ್ಯದಲ್ಲಿ ಆಡಲಿದ್ದು, ತಂಡ ಸೇರಿಕೊಂಡಿದ್ದಾರೆ.
ಈಗಾಗಲೇ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾಕ್ಕೆ ಮೂರನೇ ಏಕದಿನ ಕೂಡ ಮುಖ್ಯವಾಗಿದೆ. ಯಾಕೆಂದರೆ ಈ ಸರಣಿ ಮುಗಿದ ಬಳಿಕ ಭಾರತ ನೇರವಾಗಿ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ ಕಾರಣ ಆಟಗಾರರು ಫಾರ್ಮ್ಗೆ ಮರಳಬೇಕು. ಅತ್ತ ಆಸೀಸ್ ಕ್ಲೀನ್ ಸ್ವೀಪ್ ತಪ್ಪಿಸಲು ಹೋರಾಡ ಬೇಕಿದೆ. ಹೀಗಾಗಿ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಪಂದ್ಯ ಕುತೂಹಲ ಕೆರಳಿಸಿದೆ. ಸದ್ಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದ ಪಿಚ್ ಹೇಗಿದೆ ಎಂಬುದನ್ನು ನೋಡೋಣ.
ಈ ಸಲ ವಿಶ್ವಕಪ್ ನಮ್ದೆ: ಟೀಮ್ ಇಂಡಿಯಾ ಅಭಿಮಾನಿಗಳ ಹೀಗೊಂದು ಲೆಕ್ಕಾಚಾರ
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಪಿಚ್:
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಭಾರತದಲ್ಲಿನ ಹೆಚ್ಚಿನ ಮೇಲ್ಮೈಗಳಂತೆ, SCA ಸ್ಟೇಡಿಯಂನಲ್ಲಿನ ವಿಕೆಟ್ಗಳು ಸಹ ಬ್ಯಾಟಿಂಗ್ ಸ್ನೇಹಿ ಆಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಸ್ಕೋರ್ ಆಗುತ್ತದೆ. ಇಲ್ಲಿಯವರೆಗೆ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಬ್ಯಾಟರ್‌ಗಳಿಗೆ ಈ ಪಿಚ್ ಸ್ವರ್ಗ ಎಂದೇ ಹೇಳಬಹುದು. ಈ ಮೈದಾನವು ಇಂದೋರ್‌ಗಿಂತ ದೊಡ್ಡದಾಗಿದೆ, ಆದರೆ ಇಲ್ಲಿನ ಪಿಚ್ ಬ್ಯಾಟರ್‌ಗಳಿಗೆ ಸಂಪೂರ್ಣ ತಲೆಬಾಗುತ್ತದೆ. ಎರಡೂ ಬದಿಯಲ್ಲಿ ಬೌಂಡರಿಗಳು ಚಿಕ್ಕದಾಗಿರುವುದರಿಂದ ರನ್‌ಗಳು ಹೆಚ್ಚು ಬರುತ್ತದೆ.
ರಾಜ್ಕೋಟ್ ಹವಾಮಾನ ವರದಿ:
ಇಂದೋರ್ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಆದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇಲ್ಲ. ಬುಧವಾರ (ಸೆಪ್ಟೆಂಬರ್ 27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ದಿನದ ಆಟದ ಕೊನೆಯಲ್ಲಿ 25 C ಗೆ ಕಡಿಮೆಯಾಗುತ್ತದೆ. ಬುಧವಾರ ಮಳೆ ಬೀಳುವ ಸಾಧ್ಯತೆ ಕೇವಲ 6 ಪ್ರತಿಶತದಷ್ಟು ಮಾತ್ರ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ