AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBL 2021: ಗ್ಲೆನ್ ಮ್ಯಾಕ್ಸ್​ವೆಲ್​ ಸಿಡಿಲಬ್ಬರದ ಶತಕ: ಅಬ್ಬರದೊಂದಿಗೆ ಸೋಲುಣಿಸಿದ ಜೋಶ್ ಫಿಲಿಪೆ

BBL 2021 Glenn Maxwell: ಸ್ಪೋಟಕ ಇನಿಂಗ್ಸ್​ ಮೂಲಕ ಆರಂಭಿಕ ಆಘಾತಕ್ಕೆ ಸಿಲುಕಿದ್ದ ತಂಡವನ್ನು ಮೇಲೆತ್ತಿದರು. ಸಿಡ್ನಿ ಸಿಕ್ಸರ್ಸ್​ ಬೌಲರುಗಳ ಬೆಂಡೆತ್ತಿದ ಮ್ಯಾಕ್ಸ್​ವೆಲ್ 12 ಫೋರ್ ಹಾಗೂ 3 ಸಿಕ್ಸ್​ ಸಿಡಿಸಿದರು.

BBL 2021: ಗ್ಲೆನ್ ಮ್ಯಾಕ್ಸ್​ವೆಲ್​ ಸಿಡಿಲಬ್ಬರದ ಶತಕ: ಅಬ್ಬರದೊಂದಿಗೆ ಸೋಲುಣಿಸಿದ ಜೋಶ್ ಫಿಲಿಪೆ
glenn maxwell-josh philippe
TV9 Web
| Edited By: |

Updated on: Dec 15, 2021 | 7:19 PM

Share

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 13ನೇ ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೆಲ್ಬೋರ್ನ್​ ಸ್ಟಾರ್ಸ್​ ಹಾಗೂ ಸಿಡ್ನಿ ಸಿಕ್ಸರ್ಸ್​ ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಸಿಡ್ನಿ ತಂಡದ ನಾಯಕ ಮೊಯಿಸೆಸ್ ಹೆನ್ರಿಕ್ಸ್ ಬೌಲಿಂಗ್ ಆಯ್ದುಕೊಂಡರು. ಅತ್ತ ಇನಿಂಗ್ಸ್ ಆರಂಭಿಸಿದ ಮೆಲ್ಬೋರ್ನ್​ ತಂಡವು 6 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಈ ವೇಳೆ ಕಣಕ್ಕಿಳಿದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

ಸ್ಪೋಟಕ ಇನಿಂಗ್ಸ್​ ಮೂಲಕ ಆರಂಭಿಕ ಆಘಾತಕ್ಕೆ ಸಿಲುಕಿದ್ದ ತಂಡವನ್ನು ಮೇಲೆತ್ತಿದರು. ಸಿಡ್ನಿ ಸಿಕ್ಸರ್ಸ್​ ಬೌಲರುಗಳ ಬೆಂಡೆತ್ತಿದ ಮ್ಯಾಕ್ಸ್​ವೆಲ್ 12 ಫೋರ್ ಹಾಗೂ 3 ಸಿಕ್ಸ್​ ಸಿಡಿಸಿದರು. ಅಷ್ಟೇ ಅಲ್ಲದೆ ಕೇವಲ 57 ಎಸೆತಗಳಲ್ಲಿ 103 ರನ್ ಬಾರಿಸಿ ಅಬ್ಬರಿಸಿದರು. ಈ ಬಿರುಸಿನ ಬ್ಯಾಟಿಂಗ್ ಪರಿಣಾಮ ಮೆಲ್ಬೋರ್ನ್ ಸ್ಟಾರ್ಸ್​ ತಂಡವು ನಿಗದಿತ 20 ಓವರ್​ನಲ್ಲಿ 5 ವಿಕೆಟ್ ಕಳೆದುಕೊಂಡು 177 ರನ್​ ಕಲೆಹಾಕಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್​ ತಂಡಕ್ಕೆ ಜೋಶ್ ಫಿಲಿಪೆ ಸಿಡಿಲಬ್ಬರದ ಆರಂಭ ಒದಗಿಸಿದರು. ಆರಂಭಿಕ ಜೇಮ್ಸ್ ವಿನ್ಸ್ (9) ಬೇಗನೆ ಔಟಾದರೂ, ಫಿಲಿಪೆ ಅಬ್ಬರ ಮಾತ್ರ ಮುಂದುವರೆದಿತ್ತು. ಮತ್ತೊಂದೆಡೆ ಹೆನ್ರಿಕ್ಸ್ (29), ಜೋರ್ಡನ್ ಸಿಲ್ಕ್ (25) ಉತ್ತಮ ಸಾಥ್ ನೀಡಿದರು. ಅಂತಿಮವಾಗಿ 61 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್​ನೊಂದಿಗೆ ಜೋಶ್ ಫಿಲಿಪೆ ಅಜೇಯ 99 ರನ್​ ಬಾರಿಸಿದರು. ಈ ಮೂಲಕ 19.4 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 182 ರನ್​ಗಳಿಸುವ ಮೂಲಕ ಸಿಡ್ನಿ ಸಿಕ್ಸರ್ಸ್ ಭರ್ಜರಿ ಜಯ ಸಾಧಿಸಿತು. ಅತ್ತ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಶತಕ ವ್ಯರ್ಥವಾಯಿತು.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: Sourav Ganguly: ವಿರಾಟ್ ಕೊಹ್ಲಿ ಇಲ್ಲದಿದ್ದಾಗಲೂ ಟೀಮ್ ಇಂಡಿಯಾ ಕಪ್ ಗೆದ್ದಿದೆ!

ಇದನ್ನೂ ಓದಿ: IPL 2022: ಪಂಜಾಬ್ ಕಿಂಗ್ಸ್​ಗೆ ಕನ್ನಡಿಗನೇ ಕಿಂಗ್ ಆಗುವ ಸಾಧ್ಯತೆ..!

(BBL 2021: Glenn Maxwell magic at the MCG: Stars skipper’s superb century)

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ