ಪಾಕ್ ಆಟಗಾರನೊಂದಿಗೆ ಕಣಕ್ಕಿಳಿಯಲಿದ್ದಾರೆ ರವಿಚಂದ್ರನ್ ಅಶ್ವಿನ್
Ravichandran Ashwin: ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 221 ಪಂದ್ಯಗಳನ್ನಾಡಿರುವ ಅವರು 187 ವಿಕೆಟ್ ಕಬಳಿಸಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿದೇಶಿ ಲೀಗ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈಗಾಗಲೇ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಗೆ ಹೆಸರು ನೋಂದಾಯಿಸಿಕೊಂಡಿರುವ ಅಶ್ವಿನ್ ಇದೀಗ ಬಿಗ್ ಬ್ಯಾಷ್ ಲೀಗ್ ಆಡಲು ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಒಪ್ಪಂದದಂತೆ ರವಿಚಂದ್ರನ್ ಅಶ್ವಿನ್ ಅವರು ಮುಂಬರುವ ಬಿಬಿಎಲ್ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್ ಲೀಗ್ 2025-26 ಡಿಸೆಂಬರ್ 14 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಮೂಲಕ ರವಿಚಂದ್ರನ್ ಅಶ್ವಿನ್ ಹೊಸ ಇನಿಂಗ್ಸ್ ಆರಂಭಿಸಲಿರುವುದನ್ನು ನಿರೀಕ್ಷಿಸಬಹುದು. ಇನ್ನು ಸಿಡ್ನಿ ಥಂಡರ್ ತಂಡದಲ್ಲಿ ಪಾಕಿಸ್ತಾನದ ಆಲ್ರೌಂಡರ್ ಶಾದಾಬ್ ಖಾನ್ ಕೂಡ ಸ್ಥಾನ ಪಡೆದಿದ್ದಾರೆ.
ಹೀಗಾಗಿ ಬಿಗ್ ಬ್ಯಾಷ್ ಲೀಗ್ನಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕ್ ಆಟಗಾರ ಜೊತೆಯಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.
