BBL Final: ವಾರ್ನರ್ ಪಡೆಗೆ ಸೋಲು; ಮೊದಲ ಬಾರಿಗೆ ಬಿಗ್ ಬ್ಯಾಷ್ ಗೆದ್ದ ಹೋಬರ್ಟ್ ಹರಿಕೇನ್ಸ್

Hobart Hurricanes Win Big Bash League: ಬಿಗ್ ಬ್ಯಾಷ್ ಲೀಗ್‌ನ ಫೈನಲ್‌ನಲ್ಲಿ ಸಿಡ್ನಿ ಥಂಡರ್ ವಿರುದ್ಧ ಹೋಬಾರ್ಟ್ ಹರಿಕೇನ್ಸ್ ಅದ್ಭುತ ಜಯ ಸಾಧಿಸಿದೆ. ಮಿಚೆಲ್ ಓವೆನ್ ಅವರ ಶತಕದ ನೆರವಿನಿಂದ ಹೋಬಾರ್ಟ್ 183 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿತು. ಡೇವಿಡ್ ವಾರ್ನರ್ ನೇತೃತ್ವದ ಸಿಡ್ನಿ ಥಂಡರ್ 182 ರನ್ ಗಳಿಸಿತಾದರೂ, ಹೋಬಾರ್ಟ್ ಹರಿಕೇನ್ಸ್ ಏಕಪಕ್ಷೀಯ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿತು. 7 ವರ್ಷಗಳ ನಂತರ ಫೈನಲ್ ತಲುಪಿದ ಹೋಬಾರ್ಟ್ ತಂಡಕ್ಕೆ ಇದು ಚೊಚ್ಚಲ ಪ್ರಶಸ್ತಿಯಾಗಿದೆ.

BBL Final: ವಾರ್ನರ್ ಪಡೆಗೆ ಸೋಲು; ಮೊದಲ ಬಾರಿಗೆ ಬಿಗ್ ಬ್ಯಾಷ್ ಗೆದ್ದ ಹೋಬರ್ಟ್ ಹರಿಕೇನ್ಸ್
ಹೋಬರ್ಟ್ ಹರಿಕೇನ್ಸ್ ತಂಡ
Follow us
ಪೃಥ್ವಿಶಂಕರ
|

Updated on: Jan 27, 2025 | 5:27 PM

ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್‌ನ ಫೈನಲ್​ ಪಂದ್ಯದಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಸಿಡ್ನಿ ಥಂಡರ್ ಮತ್ತು ಹೋಬರ್ಟ್ ಹರಿಕೇನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಹೋಬರ್ಟ್ ಹರಿಕೇನ್ಸ್ ತಂಡ ಏಕಪಕ್ಷೀಯವಾಗಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಇದರೊಂದಿಗೆ 7 ವರ್ಷಗಳ ನಂತರ ಬಿಗ್ ಬ್ಯಾಷ್ ಲೀಗ್‌ನ ಫೈನಲ್ ತಲುಪಿದ್ದ ಹೋಬರ್ಟ್ ಹರಿಕೇನ್ಸ್ ತಂಡ ಚೊಚ್ಚಲ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಹೋಬರ್ಟ್ ಹರಿಕೇನ್ಸ್ ಚಾಂಪಿಯನ್

ಈ ಸೀಸನ್ ಹೋಬಾರ್ಟ್ ಹರಿಕೇನ್ಸ್‌ ತಂಡಕ್ಕೆ ಬಹಳ ಸ್ಮರಣೀಯವಾಗಿತ್ತು. ಲೀಗ್ ಹಂತದಿಂದ ನಾಕೌಟ್ ಪಂದ್ಯಗಳವರೆಗೆ ತಂಡ ಪ್ರಾಬಲ್ಯ ಮೆರೆದಿತ್ತು. ಲೀಗ್ ಹಂತದಲ್ಲಿ ಆಡಿದ 10 ಪಂದ್ಯಗಳಲ್ಲಿ 7ರಲ್ಲಿ ಗೆದ್ದು 2 ಪಂದ್ಯಗಳಲ್ಲಿ ಮಾತ್ರ ಸೋಲು ಕಂಡಿತ್ತು. ಇದರಿಂದಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿತ್ತು. ಆ ನಂತರ ನಡೆದಿದ್ದ ಕ್ವಾಲಿಫೈಯರ್ ಪಂದ್ಯದಲ್ಲಿ 12 ರನ್‌ಗಳಿಂದ ಸಿಡ್ನಿ ಸಿಕ್ಸರ್‌ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ್ದ ಹೋಬರ್ಟ್ ಹರಿಕೇನ್ಸ್ ತಂಡ ಫೈನಲ್​ ಪಂದ್ಯದಲ್ಲೂ ತನ್ನ ಫಾರ್ಮ್ ಅನ್ನು ಮುಂದುವರಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು.

182 ರನ್ ಕಲೆ ಹಾಕಿದ ಸಿಡ್ನಿ ಥಂಡರ್

ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಹೊಬರ್ಟ್ ಹರಿಕೇನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ತಂಡದ ಪರ ಆರಂಭಿಕ ಆಟಗಾರ ಜೇಸನ್ ಸಂಘ 42 ಎಸೆತಗಳಲ್ಲಿ ಗರಿಷ್ಠ 67 ರನ್ ಗಳಿಸಿದರೆ, ನಾಯಕ ಡೇವಿಡ್ ವಾರ್ನರ್ ಕೂಡ 32 ಎಸೆತಗಳಲ್ಲಿ 48 ರನ್ ಗಳಿಸುವ ಮೂಲಕ ತಮ್ಮ ತಂಡಕ್ಕೆ ಉತ್ತಮ ಆರಂಭವನ್ನು ನೀಡುವಲ್ಲಿ ಯಶಸ್ವಿಯಾದರು. ಆದರೆ ಉಳಿದ ಬ್ಯಾಟ್ಸ್‌ಮನ್‌ಗಳು ವಿಶೇಷ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ, ಇದರಿಂದಾಗಿ ಒಂದು ಹಂತದಲ್ಲಿ 200 ಕ್ಕೂ ಹೆಚ್ಚು ರನ್ ಗಳಿಸುವ ಸೂಚನೆ ನೀಡಿದ್ದ ಸಿಡ್ನಿ ಥಂಡರ್ ಅಂತಿಮವಾಗಿ 182 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ಈ ಇಬ್ಬರು ಆಟಗಾರರನ್ನು ಬಿಟ್ಟರೆ 30 ರನ್‌ಗಳ ಗಡಿ ಮುಟ್ಟಲು ಯಾರಿಂದಲೂ ಸಾಧ್ಯವಾಗಲಿಲ್ಲ.

ಮಿಚೆಲ್ ಓವನ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್

183 ರನ್‌ಗಳ ಗುರಿ ಬೆನ್ನತ್ತಿದ ಹೊಬರ್ಟ್ ಹರಿಕೇನ್ಸ್ ಸ್ಫೋಟಕ ಆರಂಭ ಪಡೆಯಿತು. ಓಪನರ್ ಮಿಚೆಲ್ ಓವನ್ ಸ್ಫೋಟಕ ಶತಕ ಸಿಡಿಸಿ ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಹೋಬರ್ಟ್ ಹರಿಕೇನ್ಸ್ ಮೊದಲ 6 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 98 ರನ್ ಗಳಿಸಿ ಪಂದ್ಯವನ್ನು ಏಕಪಕ್ಷೀಯವಾಗಿಸಿತು. ಆರಂಭದಿಂದಲೂ ಅಬ್ಬರದ ಬ್ಯಾಟಿಂಗ್ ಮಾಡಿದ ಮಿಚೆಲ್ ಓವನ್ 48 ಎಸೆತಗಳಲ್ಲಿ 257.14 ಸ್ಟ್ರೈಕ್ ರೇಟ್‌ನಲ್ಲಿ 108 ರನ್ ಕಲೆಹಾಕಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 11 ಸಿಕ್ಸರ್‌ಗಳು ಸೇರಿದ್ದವು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್​ನ ನೆರವಿನಿಂದ ಹೋಬರ್ಟ್ ಹರಿಕೇನ್ಸ್ ತಂಡ 14.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ