ನ್ಯೂಜಿಲೆಂಡ್- ಬಾಂಗ್ಲಾದೇಶ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಪಾಂಡ್ಯಗೆ ಟಿ20 ನಾಯಕತ್ವ

| Updated By: ವಿವೇಕ ಬಿರಾದಾರ

Updated on: Nov 01, 2022 | 2:41 PM

ಈ ವಿಶ್ವಕಪ್​​ ನಂತರ ಭಾರತ ತಂಡ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್​ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ತಿಳಿಸಿದ್ದಾರೆ.

ನ್ಯೂಜಿಲೆಂಡ್- ಬಾಂಗ್ಲಾದೇಶ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಪಾಂಡ್ಯಗೆ ಟಿ20 ನಾಯಕತ್ವ
Image Credit source: INSIDESPORT
Follow us on

 ಸದ್ಯ ಆಸ್ಟ್ರೇಲಿಯಾ ನೆಲದಲ್ಲಿ ಟಿ20 ವಿಶ್ವಕಪ್​ ಆಡುತ್ತಿರುಚ ರೋಹಿತ್ ಪಡೆ 2 ಗೆಲವು ಮತ್ತು 1 ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈಗ ಸೆಮಿಫೈನಲ್​ಗೆ ಟೀಂ ಇಂಡಿಯಾ ಎಂಟ್ರಿಕೊಡಬೇಕಾದರೆ ಉಳಿದಿರುವ ಎರಡು ಪಂದ್ಯಗಳನ್ನು ಗೆಲಲ್ಲೇಬೇಕಾಗಿದೆ.  ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ​ ಪ್ರವಾಸ ಕೈಗೊಳ್ಳಲಿದ್ದು, ಇದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಭಾರತ ತಂಡವು ನ್ಯೂಜಿಲೆಂಡ್​ನಲ್ಲಿ ಟಿ20 ಮತ್ತು ಏಕದಿನ ಸರಣಿ (ODI) ಆಡಲಿದೆ. ಬಾಂಗ್ಲಾದೇಶದಲ್ಲಿ ಏಕದಿನ ಸರಣಿ (ODI) ಮತ್ತು ಟೆಸ್ಟ್​ ಪಂದ್ಯಾವಳಿ ಆಡಲಿದೆ.

ನ್ಯೂಜಿಲೆಂಡ್ ಪ್ರವಾಸದಿಂದ ರೋಹಿತ್​ ಶರ್ಮಾ, ಕೆ. ಎಲ್​ ರಾಹುಲ್​ ಮತ್ತು ರನ್​ ಮಷೀನ್​ ವಿರಾಟ್​ ಕೊಹ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಆದರೆ ಇವರು ಬಾಂಗ್ಲಾದೇಶದಲ್ಲಿ ನಡೆಯುವ ಸರಣಿಗಳಲ್ಲಿ ಆಡಲಿದ್ದಾರೆ. ಸಂಜು ಸ್ಯಾಮ್ಸನ್ ಕೂಡ ನ್ಯೂಜಿಲೆಂಡ್ ಸರಣಿಯ ಆಡಲಿದ್ದು, ಬಾಂಗ್ಲಾದೇಶ ಸರಣಿಯಿಂದ ಹೊರ ಉಳಿಯಲಿದ್ದಾರೆ. ನ್ಯೂಜಿಲೆಂಡ್​ನಲ್ಲಿ ಟಿ20 ಗೆ ಹಾರ್ದಿಕ್​ ಪಾಂಡ್ಯ ತಂಡವನ್ನು ಮುನ್ನಡೆಸಿದರೇ, ಏಕದಿನ ಸರಣಿಗೆ ಶಿಖರ್​ ಧವನ್ ನಾಯಕರಾಗಿರಲಿದ್ದಾರೆ.

ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿರುವ ದೀಪಕ್ ಚಹಾರ್ ಬಾಂಗ್ಲಾದೇಶ ಪ್ರವಾಸಕ್ಕೆ ಮರಳಲಿದ್ದಾರೆ. ಆದರೆ, ಇಂಜುರಿಯಿಂದ ಟಿ20 ವಿಶ್ವಕಪ್​ಗೆ ಅಲಭ್ಯರಾಗಿರುವ ಜಸ್ಪ್ರೀತ್ ಬುಮ್ರಾಗೆ ಈ ಸರಣಿಗಳಿಂಸಲೂ ವಿಶ್ರಾಂತಿ ನೀಡಲಾಗಿದೆ. ದಿನೇಶ್ ಕಾರ್ತಿಕ್ ಅವರನ್ನು ನ್ಯೂಜಿಲೆಂಡ್‌ನ ಟಿ20 ಸರಣಿಯಿಂದ ಕೈಬಿಡಲಾಗಿದ್ದರೆ, ಶುಭಮನ್ ಗಿಲ್ ಟಿ20 ಸರಣಿಯಲ್ಲಿ ಆಡಲಿದ್ದಾರೆ.

ಉಭಯ ದೇಶಗಳ ಸರಣಿಗೆ ಟೀಂ ಇಂಡಿಯಾ

ನ್ಯೂಜಿಲೆಂಡ್ ಪ್ರವಾಸಕ್ಕೆ T20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ ( ಉಪನಾಯಕ ಮತ್ತು ವಿಕೇಟ್​​ ಕೀಪರ್​), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೇಟ್​​ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊ. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ಪ್ರವಾಸಕ್ಕೆ ಏಕದಿನ ತಂಡ: ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ ಮತ್ತು ವಿಕೇಟ್​​ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೇಟ್​​ ಕೀಪರ್), W ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ಬಾಂಗ್ಲಾದೇಶ  ಪ್ರವಾಸಕ್ಕೆ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೇಟ್​​ ಕೀಪರ್), ಇಶಾನ್ ಕಿಶನ್ (ವಿಕೇಟ್​​ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್​ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್

ಬಾಂಗ್ಲಾದೇಶ ಪ್ರವಾಸಕ್ಕೆ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ , ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ICC T20 ವಿಶ್ವಕಪ್ ನಂತರ ಟೀಮ್ ಇಂಡಿಯಾ ನ್ಯೂಜಿಲೆಂಡ್‌ಗೆ ಹೊರಡಲಿದೆ. ನವೆಂಬರ್ 18 ರಿಂದ ಟಿ20 ಸರಣಿ ಆರಂಭವಾಗಲಿದ್ದು, 13 ದಿನಗಳ ಅವಧಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಒಟ್ಟು 6 ಕ್ರಿಕೆಟ್ ಪಂದ್ಯಗಳನ್ನು ಆಡಲಿವೆ. 3 ಟಿ ಪಂದ್ಯಗಳ ಬಳಿಕ 3 ಏಕದಿನ ಪಂದ್ಯಗಳು ನಡೆಯಲಿದೆ.

Published On - 11:24 pm, Mon, 31 October 22