IND vs BAN: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಐಪಿಎಲ್ ಸ್ಟಾರ್ಸ್ಗೆ ಮಣೆ
IND vs BAN: ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಆ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ನಡೆಯಲ್ಲಿದ್ದು, ಇದೀಗ ಬಿಸಿಸಿಐ ಈ ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ.
ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಆ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ನಡೆಯಲ್ಲಿದ್ದು, ಇದೀಗ ಬಿಸಿಸಿಐ ಈ ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ಎಂದಿನಂತೆ ತಂಡದ ನಾಯಕತ್ವ ಸೂರ್ಯಕುಮಾರ್ ಯಾದವ್ ಅವರ ಕೈಯಲ್ಲಿದ್ದು, ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೆ, ಒಬ್ಬ ಬೌಲರ್ 3 ವರ್ಷಗಳ ನಂತರ ತಂಡದಕ್ಕೆ ಮರಳಿದ್ದಾರೆ. ಆದರೆ, ಎಲ್ಲಾ ಊಹಾಪೋಹಗಳು ಮತ್ತು ನಿರೀಕ್ಷೆಗಳ ನಡುವೆಯೂ ಸ್ಟಾರ್ ವಿಕೆಟ್ ಕೀಪರ್ ಇಶಾನ್ ಕಿಶನ್ ಆಯ್ಕೆಗಾರರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.
ತಂಡಕ್ಕೆ ಆಯ್ಕೆಯಾಗಿರುವ ಎರಡು ಹೊಸ ಮುಖಗಳಲ್ಲಿ ಇಬ್ಬರು ಕೂಡ ಐಪಿಎಲ್ ಸ್ಟಾರ್ಗಳೆ ಆಗಿದ್ದಾರೆ. ಅದರಲ್ಲಿ ಒಬ್ಬರು ಐಪಿಎಲ್ನಲ್ಲಿ ಲಕ್ನೋ ಪರ ಬೌಲಿಂಗ್ನಲ್ಲಿ ಬೆಂಕಿ ಉಂಡೆಗಳನ್ನು ಉಗುಳಿದ್ದ ಯುವ ವೇಗಿ ಮಯಾಂಕ್ ಯಾದವ್ ಸೇರಿದ್ದರೆ, ಇನ್ನೊಬ್ಬರು ಸನ್ರೈಸರ್ಸ್ ಹೈದರಾಬಾದ್ ಪರ ತಮ್ಮ ಆಲ್ರೌಂಡರ್ ಆಟದ ಮೂಲಕ ಗಮನ ಸೆಳೆದಿದ್ದ ನಿತೀಶ್ ಕುಮಾರ್ ರೆಡ್ಡಿ ಆಗಿದ್ದಾರೆ. ಈ ಇಬ್ಬರು ಆಟಗಾರರು ಪ್ಲೇಯಿಂಗ್ ಇಲೆವೆನ್ನಲ್ಲಿ ಆಯ್ಕೆಯಾಗುವ ಸಾಧ್ಯತೆ ಇದ್ದು, ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಆಡಲಿದ್ದಾರೆ.
ಪಂತ್ಗೆ ವಿಶ್ರಾಂತಿ
ಈ ಹಿಂದೆ ಕೇಳಿಬಂದ ಊಹಪೋಹಗಳು ನಿಜವಾಗಿದ್ದು, ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ರಿಷಬ್ ಪಂತ್ಗೆ ವಿಶ್ರಾಂತಿ ನೀಡಲಾಗಿದೆ. ಇದಕ್ಕೆ ಕಾರಣವೂ ಇದ್ದು ಈ ಸರಣಿಯ ನಂತರ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳನ್ನು ಆಡಬೇಕಿದೆ. ಹೀಗಾಗಿ ಕೆಲಸದ ಹೊರೆ ನಿರ್ವಹಣೆಗಾಗಿ ಪಂತ್ಗೆ ವಿಶ್ರಾಂತಿ ನೀಡಲಾಗಿದೆ. ಅವರ ಜಾಗದಲ್ಲಿ ಜಿತೇಶ್ ಶರ್ಮಾ ಎರಡನೇ ವಿಕೆಟ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ:ಸೂರ್ಯಕುಮಾರ್ ಯಾದವ್, (ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.
NEWS 🚨 – #TeamIndia’s squad for T20I series against Bangladesh announced.
More details here – https://t.co/7OJdTgkU5q #INDvBAN @IDFCFIRSTBank pic.twitter.com/DOyz5XGMs5
— BCCI (@BCCI) September 28, 2024
2 ತಿಂಗಳ ನಂತರ ಟಿ20 ತಂಡ ಅಖಾಡಕ್ಕೆ
ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿ ಅಕ್ಟೋಬರ್ 6 ರಿಂದ ಆರಂಭವಾಗಲಿದೆ. ಈ ಸರಣಿಯೊಂದಿಗೆ ಎರಡು ತಿಂಗಳ ನಂತರ ಟಿ20 ತಂಡ ಮತ್ತೆ ಮೈದಾನಕ್ಕೆ ಮರಳಲಿದೆ. ಇದಕ್ಕೂ ಮುನ್ನ ಜುಲೈ ಅಂತ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ ಟಿ20 ಸರಣಿಯನ್ನು ಆಡಿತ್ತು. ಆ ಸರಣಿಯಲ್ಲಿ ಆಡಿದ್ದ ಅನೇಕ ಆಟಗಾರರೂ ಈ ಸರಣಿಗೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ರಮುಖ ಆಟಗಾರರಾದ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಅಕ್ಷರ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ಮೇಲೆ ಹೇಳಿದಂತೆ ಕೆಲಸದ ಹೊರೆ ನಿರ್ವಹಣೆಗಾಗಿ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:05 pm, Sat, 28 September 24