India vs Bangladesh 3rd ODI: 3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್​ಗೆ ನಾಯಕತ್ವ

| Updated By: ಪೃಥ್ವಿಶಂಕರ

Updated on: Dec 09, 2022 | 12:55 PM

India vs Bangladesh 3rd ODI: ಮೂರನೇ ಏಕದಿನ ಪಂದ್ಯಕ್ಕೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

India vs Bangladesh 3rd ODI: 3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್​ಗೆ ನಾಯಕತ್ವ
ಟೀಂ ಇಂಡಿಯಾ
Follow us on

ಏಕದಿನ ಹಾಗೂ ಟೆಸ್ಟ್ ಸರಣಿಗಾಗಿ ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ (India vs Bangladesh) ಈಗಾಗಲೇ ಆಡಿರುವ ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವುದರೊಂದಿಗೆ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಇದೀಗ ಶನಿವಾರ ನಡೆಯಲ್ಲಿರುವ ಕೊನೆಯ ಏಕದಿನ ಪಂದ್ಯವನ್ನು ಗೆದ್ದು, ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ. ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಸೇರಿದಂತೆ ತಂಡದ ಮೂವರು ಆಟಗಾರರು ಇಂಜುರಿಗೊಂಡಿದ್ದರು. ಹೀಗಾಗಿ ಕೊನೆಯ ಏಕದಿನ ಪಂದ್ಯಕ್ಕೆ ತಂಡದಲ್ಲಿ ಬೇರೆ ಮುಖಗಳಿಗೆ ಅವಕಾಶ ಸಿಗಲಿದೆ ಎಂದು ಹೇಳಲಾಗಿತ್ತು. ಅದರಂತೆ ಈಗ ಬಿಸಿಸಿಐ (BCCI) ಮೂರನೇ ಏಕದಿನ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ್ದು, ಕುಲ್ದೀಪ್ ಯಾದವ್ ಹೊಸದಾಗಿ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ.

ಮೂವರಿಗೆ ಇಂಜುರಿ

ಎರಡನೇ ಏಕದಿನ ಪಂದ್ಯದಲ್ಲಿ ಇಂಜುರಿಗೊಂಡಿದ್ದ ನಾಯಕ ರೋಹಿತ್ ಶರ್ಮಾ ನೋವಿನ ನಡುವೆಯೂ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಕೊನೆಯ ಹಂತದಲ್ಲಿ ಸಹ ಆಟಗಾರನಿಂದ ಸರಿಯಾಗಿ ಸಿಗದ ನೆರವಿನಿಂದ ಟೀಂ ಇಂಡಿಯಾ ಸರಣಿ ಕಳೆದುಕೊಳ್ಳಬೇಕಾಯಿತು. ಹೀಗಾಗಿ ಇಂಜುರಿಯಿಂದ ಬಳಲುತ್ತಿದ್ದ ರೋಹಿತ್ ಈಗಾಗಲೇ ತಂಡ ತೊರೆದು ಮುಂಬೈಗೆ ವಾಪಸ್ಸಾಗಿದ್ದಾರೆ. ರೋಹಿತ್ ಹೊರತಾಗಿ, ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಮೊದಲ ಏಕದಿನ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿದ್ದರು. ಹೀಗಾಗಿ ಕುಪದೀಪ್​ಗೆ ಎರಡನೇಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು. ಈಗ ಅವರನ್ನು ಸಂಪೂರ್ಣ ಸರಣಿಯಿಂದಲೇ ಕೈಬಿಡಲಾಗಿದೆ.

IND vs BAN: ಜಡೇಜಾ, ಶಮಿ ಬದಲು ಯುವ ದೇಶೀ ಪ್ರತಿಭೆಗಳಿಗೆ ಮಣೆ ಹಾಕಿದ ಬಿಸಿಸಿಐ

ಚಹಾರ್ ಮತ್ತು ಕುಲದೀಪ್ ಸೇನ್ ಎನ್‌ಸಿಎಗೆ

ರೋಹಿತ್ ಮತ್ತು ಕುಲದೀಪ್ ಸೇನ್ ಹೊರತಾಗಿ, ವೇಗದ ಬೌಲರ್ ದೀಪಕ್ ಚಹಾರ್ ಕೂಡ ಎರಡನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಅವರು ಕೂಡ ಸರಣಿಯಿಂದ ಹೊರಗುಳಿದಿದ್ದು, ಕುಲದೀಪ್ ಜೊತೆ ಎನ್‌ಸಿಎಗೆ ತೆರಳಲಿದ್ದಾರೆ. ಸರಣಿಯ ಮಧ್ಯದಲ್ಲಿ ಮೂವರು ಆಟಗಾರರು ಇಂಜುರಿಗೊಂಡಿದ್ದರಿಂದ ತಂಡವನ್ನು ಬಲಪಡಿಸುವ ಸಲುವಾಗಿ ಆಯ್ಕೆ ಸಮಿತಿಯು ಕುಲದೀಪ್ ಯಾದವ್ ಅವರನ್ನು ಮೂರನೇ ಮತ್ತು ಕೊನೆಯ ಏಕದಿನ ಪಂದ್ಯಕ್ಕೆ ತಂಡಕ್ಕೆ ಆಯ್ಕೆ ಮಾಡಿದೆ. ರೋಹಿತ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:30 pm, Fri, 9 December 22