AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

IND vs ENG: ಟೀಂ ಇಂಡಿಯಾ ಮುಂದಿನ ವರ್ಷ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ತಂಡದ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಆ ಐದು ಟೆಸ್ಟ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜೂನ್ 20 ರಿಂದ ಲೀಡ್ಸ್‌ನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಜುಲೈ 31 ರಂದು ನಡೆಯಲಿದೆ.

IND vs ENG: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ಭಾರತ- ಇಂಗ್ಲೆಂಡ್
ಪೃಥ್ವಿಶಂಕರ
|

Updated on:Aug 22, 2024 | 3:45 PM

Share

ಪ್ರಸ್ತುತ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಮತ್ತೆ ಕ್ರಿಕೆಟ್ ಅಂಗಳಕ್ಕೆ ಕಾಲಿಡಲಿದೆ. ಆ ನಂತರ ಭಾರತ ತಂಡ ಹಲವು ಸರಣಿಗಳಲ್ಲಿ ನಿರತವಾಗಿದೆ. ಈಗಾಗಲೇ ಬಿಸಿಸಿಐ ಕೂಡ ಟೀಂ ಇಂಡಿಯಾ ಈ ವರ್ಷ ಆಡಲಿರುವ ಸರಣಿಗಳ ವೇಳಾಪಟ್ಟಿಯನ್ನು ಸಹ ಖಚಿತಪಡಿಸಿದೆ. ಇದೀಗ ಬಿಸಿಸಿಐ, ಟೀಂ ಇಂಡಿಯಾದ ಮುಂದಿನ ವರ್ಷದ ವೇಳಾಪಟ್ಟಿಯನ್ನೂ ಸಹ ಬಿಡುಗಡೆಗೊಳಿಸಲು ಪ್ರಾರಂಭಿಸಿದ್ದು, ಅದರಂತೆ ಟೀಂ ಇಂಡಿಯಾ ಮುಂದಿನ ವರ್ಷ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಆ ಐದು ಟೆಸ್ಟ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜೂನ್ 20 ರಿಂದ ಲೀಡ್ಸ್‌ನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಜುಲೈ 31 ರಂದು ನಡೆಯಲಿದೆ. ಇದಲ್ಲದೆ ಈ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಬರ್ಮಿಂಗ್‌ಹ್ಯಾಮ್, ಲಾರ್ಡ್ಸ್ ಮತ್ತು ಮ್ಯಾಂಚೆಸ್ಟರ್‌ ಕೂಡ ಆತಿಥ್ಯವಹಿಸಲಿವೆ. ಪುರುಷರ ತಂಡದ ಜೊತೆಗೆ ಭಾರತ ಮಹಿಳಾ ತಂಡ ಕೂಡ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದು, ಅಲ್ಲಿ ಐದು ಟಿ20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಟಿ20 ಸರಣಿಯು ಜೂನ್ 28 ರಿಂದ ಜುಲೈ 12 ರವರೆಗೆ ನಡೆಯಲಿದ್ದು, ಜುಲೈ 16, 19 ಮತ್ತು 22 ರಂದು ಏಕದಿನ ಸರಣಿಯ ಪಂದ್ಯಗಳು ನಡೆಯಲಿವೆ.

ಟೆಸ್ಟ್ ಸರಣಿ ವೇಳಾಪಟ್ಟಿ

  1. ಮೊದಲ ಟೆಸ್ಟ್, ಜೂನ್ 20-24, ಹೆಡಿಂಗ್ಲಿ
  2. ಎರಡನೇ ಟೆಸ್ಟ್, ಜುಲೈ 2-6, ಬರ್ಮಿಂಗ್ಹ್ಯಾಮ್
  3. ಮೂರನೇ ಟೆಸ್ಟ್, ಜುಲೈ 10-14, ಲಾರ್ಡ್ಸ್
  4. ನಾಲ್ಕನೇ ಟೆಸ್ಟ್, ಜುಲೈ 23-27, ಮ್ಯಾಂಚೆಸ್ಟರ್
  5. ಐದನೇ ಟೆಸ್ಟ್, ಜುಲೈ 31 – ಆಗಸ್ಟ್ 4, ಲಂಡನ್

ಭಾರತ ಮಹಿಳಾ ತಂಡದ ವೇಳಾಪಟ್ಟಿ

ಟಿ20 ಸರಣಿ

  1. ಮೊದಲನೇ ಟಿ20, ಜೂನ್ 28, ನಾಟಿಂಗ್ಹ್ಯಾಮ್
  2. ಎರಡನೇ ಟಿ20, ಜುಲೈ 1, ಬ್ರಿಸ್ಟಲ್
  3. ಮೂರನೇ ಟಿ20, ಜುಲೈ 4, ಲಂಡನ್
  4. ನಾಲ್ಕನೇ ಟಿ20, ಜುಲೈ 9, ಮ್ಯಾಂಚೆಸ್ಟರ್
  5. ಐದನೇ ಟಿ20, ಜುಲೈ 12, ಬರ್ಮಿಂಗ್ಹ್ಯಾಮ್

ಏಕದಿನ ಸರಣಿ

  1. ಮೊದಲನೇ ಏಕದಿನ, ಜುಲೈ 16, ಸೌತಾಂಪ್ಟನ್
  2. ಎರಡನೇ ಏಕದಿನ, ಜುಲೈ 19, ಲಾರ್ಡ್ಸ್
  3. ಮೂರನೇ ಏಕದಿನ, ಜುಲೈ 22, ಚೆಸ್ಟರ್-ಲೆ-ಸ್ಟ್ರೀಟ್

ಇಂಗ್ಲೆಂಡ್‌ ನೆಲದಲ್ಲಿ 17 ವರ್ಷಗಳಿಂದ ಗೆದ್ದಿಲ್ಲ

ಇಂಗ್ಲೆಂಡ್ ಪ್ರವಾಸವು ಭಾರತ ಕ್ರಿಕೆಟ್ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಕಳೆದ 17 ವರ್ಷಗಳಿಂದ ಟೀಂ ಇಂಡಿಯಾ, ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಟೀಂ ಇಂಡಿಯಾ 2007ರಲ್ಲಿ ಇಂಗ್ಲೆಂಡ್‌ನಲ್ಲಿ ಕೊನೆಯ ಟೆಸ್ಟ್ ಸರಣಿ ಜಯಿಸಿತ್ತು.ಆ ಬಳಿಕ 2021-22ರ ಇಂಗ್ಲೆಂಡ್ ಪ್ರವಾಸದಲ್ಲಿ ಗೆಲುವಿನ ಸನಿಹಕ್ಕೆ ಬಂದಿದ್ದ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು 2-2 ರಲ್ಲಿ ಡ್ರಾ ಮಾಡಿಕೊಂಡಿತ್ತು. ಇನ್ನು ಕಳೆದ ಪ್ರವಾಸದಲ್ಲಿ ಭಾರತ 2-1 ರ ಮುನ್ನಡೆ ಕಾಯ್ದುಕೊಂಡಿತ್ತಾದರೂ ಕೊನೆಯ ಟೆಸ್ಟ್‌ನಲ್ಲಿ ಸೋತು ಸರಣಿಯನ್ನು ಡ್ರಾ ಮಾಡಿಕೊಂಡಿತು. ಇದಲ್ಲದೇ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡೂ ಫೈನಲ್‌ಗಳಲ್ಲಿ ಟೀಂ ಇಂಡಿಯಾ ಸೋತಿರುವುದರಿಂದ ರೋಹಿತ್ ಮತ್ತು ಗಂಭೀರ್ ಜೋಡಿಗೆ ಈ ಪ್ರವಾಸ ಸುಲಭವಲ್ಲ ಎಂಬುದು ಸ್ಪಷ್ಟವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Thu, 22 August 24

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​