WPL 2025: ಡಬ್ಲ್ಯುಪಿಎಲ್ 3ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲೇ ಆರ್​ಸಿಬಿ ಕಣಕ್ಕೆ

WPL 2025 Schedule: ಮಹಿಳಾ ಪ್ರೀಮಿಯರ್ ಲೀಗ್​ನ ಮೂರನೇ ಸೀಸನ್ ಫೆಬ್ರವರಿ 14 ರಿಂದ ಮಾರ್ಚ್ 15 ರವರೆಗೆ ನಡೆಯಲಿದೆ. ಈ ಬಾರಿ ಲಕ್ನೋ, ಮುಂಬೈ, ಬರೋಡಾ ಮತ್ತು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯದೊಂದಿಗೆ ಟೂರ್ನಿ ಆರಂಭವಾಗಲಿದೆ. 30 ದಿನಗಳ ಈ ಟೂರ್ನಿಯಲ್ಲಿ ಆಟಗಾರ್ತಿಯರಿಗೆ ಸಾಕಷ್ಟು ವಿಶ್ರಾಂತಿ ನೀಡಲಾಗಿದೆ. ಪ್ರತಿ ದಿನ ಒಂದೇ ಒಂದು ಪಂದ್ಯ ನಡೆಯಲಿದೆ.

WPL 2025: ಡಬ್ಲ್ಯುಪಿಎಲ್ 3ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲೇ ಆರ್​ಸಿಬಿ ಕಣಕ್ಕೆ
ಮಹಿಳಾ ಪ್ರೀಮಿಯರ್ ಲೀಗ್
Follow us
ಪೃಥ್ವಿಶಂಕರ
|

Updated on:Jan 17, 2025 | 2:25 PM

ಮಹಿಳಾ ಪ್ರೀಮಿಯರ್ ಲೀಗ್‌ನ ಮೂರನೇ ಸೀಸನ್‌ಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಇದೀಗ ಈ ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದರಂತೆ ಡಬ್ಲ್ಯುಪಿಎಲ್​ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 15 ರಂದು ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಕದನಕ್ಕೆ ವಡೋದರದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಟಂಬಿ ಕ್ರೀಡಾಂಗಣ ಆತಿಥ್ಯವಹಿಸಲಿದೆ.

ಮೊದಲ ಬಾರಿಗೆ 4 ಸ್ಥಳಗಳಲ್ಲಿ ಟೂರ್ನಿ

ಈ ಬಾರಿ ಬಿಸಿಸಿಐ ಡಬ್ಲ್ಯುಪಿಎಲ್ ವ್ಯಾಪ್ತಿಯನ್ನು ವಿಸ್ತರಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಲೀಗ್‌ನ ಮೊದಲ ಸೀಸನ್ ಮುಂಬೈನ ಎರಡು ವಿಭಿನ್ನ ಮೈದಾನಗಳಲ್ಲಿ ಮಾತ್ರ ನಡೆದಿದ್ದರೆ, ಕೊನೆಯ ಸೀಸನ್​ ಬೆಂಗಳೂರು ಮತ್ತು ದೆಹಲಿಯಲ್ಲಿ ನಡೆದಿತ್ತು. ಇದೀಗ 4 ಸ್ಥಳಗಳಲ್ಲಿ ಟೂರ್ನಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಈ ಬಾರಿಯ ಲೀಗ್ ಲಕ್ನೋ, ಮುಂಬೈ, ವಡೋದರಾ ಮತ್ತು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, 30 ದಿನಗಳಲ್ಲಿ 22 ಪಂದ್ಯಗಳು ನಡೆಯಲಿವೆ.

ಬರೋಡದಿಂದ ಆರಂಭವಾಗಿ ಮುಂಬೈನಲ್ಲಿ ಅಂತ್ಯ

ಪ್ರತಿ ಬಾರಿಯಂತೆ ಈ ಬಾರಿಯೂ ಹಾಲಿ ಚಾಂಪಿಯನ್‌ಗಳ ನಡುವಿನ ಪಂದ್ಯದೊಂದಿಗೆ ಹೊಸ ಸೀಸನ್ ಆರಂಭವಾಗಲಿದೆ. ಕಳೆದ ಸೀಸನ್​ನ ವಿಜೇತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೆಬ್ರವರಿ 14 ರಂದು ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಪಂದ್ಯಾವಳಿಯ ಮೊದಲ 6 ಪಂದ್ಯಗಳು ಬರೋಡದಲ್ಲಿಯೇ ನಡೆಯಲಿದ್ದು, ನಂತರ ಫೆಬ್ರವರಿ 21 ರಿಂದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಟೂರ್ನಿಯ 8 ಪಂದ್ಯಗಳು ನಡೆಯಲಿವೆ. ಮಾರ್ಚ್ 3 ರಿಂದ ಲಕ್ನೋದಲ್ಲಿ ಪಂದ್ಯಗಳು ಪ್ರಾರಂಭವಾಗಲಿದ್ದು, ಈ ಮೈದಾನದಲ್ಲಿ 4 ಪಂದ್ಯಗಳು ನಡೆಯಲಿವೆ. ಅಂತಿಮವಾಗಿ ಮುಂಬೈನ ಐತಿಹಾಸಿಕ ಕ್ರೀಡಾಂಗಣದಲ್ಲಿ ಪಂದ್ಯಾವಳಿ ಕೊನೆಗೊಳ್ಳಲಿದೆ. ಇದೇ ಮೈದಾನದಲ್ಲೇ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ ಕೊನೆಯ 4 ಪಂದ್ಯಗಳು ನಡೆಯಲಿವೆ.

ಆಟಗಾರ್ತಿಯರಿಗೆ ಸಂಪೂರ್ಣ ವಿಶ್ರಾಂತಿ

ಈ ವರ್ಷ ಟೂರ್ನಿ ನಡೆಯುವ ದಿನಗಳನ್ನು ಹೆಚ್ಚು ಮಾಡಲಾಗಿದ್ದು, ಈ ಮೂಲಕ ಆಟಗಾರ್ತಿಯರಿಗೆ ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯಾವಕಾಶ ಸಿಗಲಿದೆ. ಕಳೆದ ಬಾರಿ ಈ ಟೂರ್ನಿ 24 ದಿನಗಳ ಕಾಲ ನಡೆದಿತ್ತು. ಆದರೆ ಈ ಬಾರಿ ಈ ಟೂರ್ನಿಯನ್ನು 30 ದಿನಗಳಿಗೆ ವಿಸ್ತರಿಸಲಾಗಿದೆ. ಪಂದ್ಯಾವಳಿಯು ಫೆಬ್ರವರಿ 14 ರಿಂದ ಪ್ರಾರಂಭವಾಗಿ ಮಾರ್ಚ್ 15 ರವರೆಗೆ ನಡೆಯಲಿದೆ. ದಿನವೊಂದಕ್ಕೆ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಲಾಗುತ್ತದೆ. ಹೀಗಾಗಿ ಈ ಬಾರಿ ಡಬಲ್ ಹೆಡರ್ ಪಂದ್ಯಗಳು ಅಂದರೆ ಒಂದು ದಿನದಲ್ಲಿ 2 ಪಂದ್ಯಗಳು ನಡೆಯುವುದಿಲ್ಲ. ಆದ್ದರಿಂದ ಈ ಅವಧಿಯಲ್ಲಿ ತಂಡಗಳು ಒಟ್ಟು 8 ದಿನಗಳ ವಿಶ್ರಾಂತಿ ದಿನಗಳನ್ನು ಪಡೆಯುತ್ತವೆ. ಅಲ್ಲದೆ, ಪ್ರತಿ ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Fri, 17 January 25

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ