AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್-19 ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್

U19 Asia Cup 2023: ಮುಂದಿನ ತಿಂಗಳು ಅಂದರೆ ಡಿಸೆಂಬರ್​ನಲ್ಲಿ ದುಬೈನಲ್ಲಿ ನಡೆಯಲ್ಲಿರುವ ಅಂಡರ್-19 ಏಷ್ಯಾಕಪ್‌ಗೆ ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಈ ಪಂದ್ಯಾವಳಿಯು ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯವು ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಅಂಡರ್-19 ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Nov 25, 2023 | 5:57 PM

Share

ಮುಂದಿನ ತಿಂಗಳು ಅಂದರೆ ಡಿಸೆಂಬರ್​ನಲ್ಲಿ ದುಬೈನಲ್ಲಿ ನಡೆಯಲ್ಲಿರುವ ಅಂಡರ್-19 ಏಷ್ಯಾಕಪ್‌ಗೆ (U19 Asia Cup 2023) ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾವನ್ನು (Team India) ಪ್ರಕಟಿಸಿದೆ. ಈ ಪಂದ್ಯಾವಳಿಯು ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯವು ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಪ್ರಕಟವಾದ ಭಾರತದ ಅಂಡರ್ 19 ತಂಡದಲ್ಲಿ 15 ಸದಸ್ಯರು ಮತ್ತು ಮೂವರು ಮೀಸಲು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲದೆ ಆಯ್ಕೆ ಸಮಿತಿ ಇನ್ನೂ ನಾಲ್ವರು ಮೀಸಲು ಆಟಗಾರರನ್ನು ಹೆಸರಿಸಿದೆ. ಆದರೆ ಈ 4 ಮೀಸಲು ಆಟಗಾರರು ತಂಡದೊಂದಿಗೆ ಹೋಗುವುದಿಲ್ಲ.

8 ತಂಡಗಳ ನಡುವೆ ಪಂದ್ಯಾವಳಿ

ಅಂಡರ್-19 ಏಷ್ಯಾ ಕಪ್ 2023 8 ತಂಡಗಳ ನಡುವೆ ನಡೆಯಲಿದೆ. 8 ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪಾಕಿಸ್ತಾನ, ಭಾರತ, ಅಫ್ಘಾನಿಸ್ತಾನ ಮತ್ತು ನೇಪಾಳ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರೆ, ಬಿ ಗುಂಪಿನಲ್ಲಿ ಶ್ರೀಲಂಕಾ, ಜಪಾನ್, ಯುಎಇ ಮತ್ತು ಬಾಂಗ್ಲಾದೇಶವಿದೆ. ಟೀಂ ಇಂಡಿಯಾ ಅಂಡರ್-19 ಏಷ್ಯಾಕಪ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು, ಈ ಟೂರ್ನಿಯಲ್ಲಿ 8 ಬಾರಿ ಪ್ರಶಸ್ತಿ ಜಯಿಸಿದೆ. ಕಳೆದ ಬಾರಿ ಅಂದರೆ 2021ರಲ್ಲಿ ನಡೆದಿದ್ದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿ ಟೀಂ ಇಂಡಿಯಾ ಟ್ರೋಫಿ ಗೆದ್ದಿತ್ತು.

U-19 Asia Cup: ಪಾಕ್ ಎದುರು ಭಾರತ ಅಂಡರ್ 19 ತಂಡಕ್ಕೆ ಸೋಲು! ಕೊನೇ ಎಸೆತದಲ್ಲಿ ಗೆದ್ದ ಬದ್ಧವೈರಿ

ಭಾರತ- ಪಾಕ್ ಮುಖಾಮುಖಿ ಯಾವಾಗ?

ಟೀಂ ಇಂಡಿಯಾ ಪ್ರಕಟವಾಗುವುದರೊಂದಿಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಮುಖಾಮುಖಿಯ ದಿನಾಂಕವೂ ನಿಗದಿಯಾಗಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಡಿಸೆಂಬರ್ 10 ರಂದು ದುಬೈನ ಐಸಿಸಿ ಅಕಾಡೆಮಿ ಓವಲ್ 1 ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೀಂ ಇಂಡಿಯಾದ ವೇಳಾಪಟ್ಟಿ

  • ಡಿಸೆಂಬರ್ 8 – ಭಾರತ vs ಅಫ್ಘಾನಿಸ್ತಾನ
  • ಡಿಸೆಂಬರ್ 10 – ಭಾರತ vs ಪಾಕಿಸ್ತಾನ
  • ಡಿಸೆಂಬರ್ 12  – ಭಾರತ vs ನೇಪಾಳ
  • ಡಿಸೆಂಬರ್ 15  – ಎರಡೂ ಸೆಮಿಫೈನಲ್ ಪಂದ್ಯಗಳು
  • ಡಿಸೆಂಬರ್ 17 – ಅಂತಿಮ ಪಂದ್ಯ

ಅಂಡರ್-19 ಏಷ್ಯಾಕಪ್‌ಗೆ ಭಾರತ ತಂಡ

ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ಧಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರಾನ್ (ನಾಯಕ), ಅರವೆಲ್ಲಿ ಅವನೀಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ್ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಟ್ರಾವೆಲಿಂಗ್ ಸ್ಟ್ಯಾಂಡ್‌ಬೈ ಆಟಗಾರರು: ಪ್ರೇಮ್ ದಿಯೋಕರ್, ಅಂಶ್ ಗೋಸಾಯಿ, ಮೊಹಮ್ಮದ್ ಅಮನ್

ಮೀಸಲು ಆಟಗಾರರು: ದಿಗ್ವಿಜಯ್ ಪಾಟೀಲ್, ಜಯಂತ್ ಗೋಯತ್, ಪಿ ವಿಘ್ನೇಶ್, ಕಿರಣ್ ಚೋರ್ಮಲೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ