ಬಿಸಿಸಿಐ ವಾರ್ಷಿಕ ಒಪ್ಪಂದ ಪ್ರಕಟ; ರಾಹುಲ್‌ಗೆ ಎ ಗ್ರೇಡ್‌, ಶ್ರೇಯಸ್-ಕಿಶನ್ ಕಿಕ್ ಔಟ್..!

BCCI: ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಆಟಗಾರರಿಗೆ ಪ್ರತಿ ವರ್ಷ 12 ತಿಂಗಳ ಒಪ್ಪಂದವನ್ನು ನೀಡುತ್ತದೆ. ಅದರ ಅಡಿಯಲ್ಲಿ ಅವರು ಆ ವರ್ಷದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲಿ ಅಥವಾ ಇಲ್ಲದಿರಲಿ ಅವರು ನಿಗದಿತ ಮೊತ್ತವನ್ನು ಪಡೆಯುತ್ತಾರೆ.

ಬಿಸಿಸಿಐ ವಾರ್ಷಿಕ ಒಪ್ಪಂದ ಪ್ರಕಟ; ರಾಹುಲ್‌ಗೆ ಎ ಗ್ರೇಡ್‌, ಶ್ರೇಯಸ್-ಕಿಶನ್ ಕಿಕ್ ಔಟ್..!
ಶ್ರೇಯಸ್ ಅಯ್ಯರ್, ಇಶಾನ್ ಕಿಶನ್
Follow us
ಪೃಥ್ವಿಶಂಕರ
|

Updated on:Feb 28, 2024 | 7:05 PM

ಪ್ರಸ್ತುತ ಭಾರತದಲ್ಲಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ (India vs England) ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯನ್ನು ಆತಿಥೇಯ ಭಾರತ 3-1 ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಏತನ್ಮಧ್ಯೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2023-24ರ ಆಟಗಾರರ ವಾರ್ಷಿಗೆ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಅದರಲ್ಲಿ ನಿರೀಕ್ಷಿಸಿದಂತೆ ಬಿಸಿಸಿಐ ಮಾತನ್ನು ಕಡೆಗಣಿಸಿದ್ದ ಶ್ರೇಯಸ್ ಅಯ್ಯರ್ (Shreyas Iyer) ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್‌ (Ishan Kishan) ಅವರನ್ನು ತನ್ನ ಒಪ್ಪಂದದಿಂದ ಹೊರಗಿಟ್ಟಿದೆ. ವಾಸ್ತವವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ ಭಾರತ ತಂಡದಲ್ಲಿದ್ದ ಇಶಾನ್ ಕಿಶನ್ ಸರಣಿ ಆರಂಭಕ್ಕೂ ಮುನ್ನ ತಮ್ಮ ಹೆಸರನ್ನು ಹಿಂಪಡೆದಿದ್ದರು. ಆ ನಂತರ ಅವರಿಗೆ ರಣಜಿ (Ranji Trophy) ಆಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಆ ಕೆಲಸವನ್ನು ಕಿಶನ್ ಮಾಡಲಿಲ್ಲ. ಇನ್ನೊಂದೆಡೆ ಇಂಗ್ಲೆಂಡ್ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದ ಶ್ರೇಯಸ್ ಅಯ್ಯರ್ ಅವರನ್ನು ಇಂಜುರಿಯಿಂದಾಗಿ ತಂಡದಿಂದ ಹೊರಗಿಡಲಾಗಿತ್ತು. ಚೇತರಿಸಿಕೊಂಡ ಬಳಿಕ ಶ್ರೇಯಸ್​ಗೂ ರಣಜಿ ಆಡುವಂತೆ ಹೇಳಲಾಗಿತ್ತು. ಆದರೆ ಅಯ್ಯರ್ ಕೂಡ ಕುಂಟು ನೆಪ ಹೇಳಿ ರಣಜಿ ಆಡುವುದನ್ನು ತಪ್ಪಿಸಿಕೊಂಡಿದ್ದರು. ಇದೀಗ ಅದರ ಭಾರವನ್ನು ಈ ಇಬ್ಬರು ಆಟಗಾರರು ಹೊರಬೇಕಾದ ಸಂದರ್ಭ ಎದುರಾಗಿದೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಆಟಗಾರರಿಗೆ ಬಿಸಿಸಿಐ ಪ್ರತಿ ವರ್ಷ 12 ತಿಂಗಳ ಒಪ್ಪಂದವನ್ನು ನೀಡುತ್ತದೆ. ಅದರ ಅಡಿಯಲ್ಲಿ ಆಯ್ಕೆಯಾದ ಆಟಗಾರರು ಆ ವರ್ಷದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲಿ ಅಥವಾ ಇಲ್ಲದಿರಲಿ ಅವರು ನಿಗದಿತ ಮೊತ್ತವನ್ನು ಪಡೆಯುತ್ತಾರೆ. ಅದರಂತೆ ಬಿಸಿಸಿಐ ಆಟಗಾರರನ್ನು A+, A, B, ಮತ್ತು C ಗ್ರೇಡ್‌ಗಳಾಗಿ ವಿಂಗಡಿಸುತ್ತದೆ. A+ ಗ್ರೇಡ್ ಪಡೆಯುವ ಆಟಗಾರ ವರ್ಷಕ್ಕೆ 7 ಕೋಟಿ ರೂಪಾಯಿಗಳನ್ನು ಪಡೆಯುತ್ತಾನೆ. ಹಾಗೆಯೇ A ಗ್ರೇಡ್​ನಲ್ಲಿರುವ ಆಟಗಾರರು 5 ಕೋಟಿ ರೂಪಾಯಿ, ಬಿ ಗ್ರೇಡ್‌ನಲ್ಲಿರುವ ಆಟಗಾರರು 3 ಕೋಟಿ ಮತ್ತು ಸಿ ದರ್ಜೆಯ ಆಟಗಾರರು 1 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ.

IND vs ENG: ಇಶಾನ್ ಕಿಶನ್​ಗೆ ಮತ್ತೊಂದು ಎಚ್ಚರಿಕೆ ನೀಡಿದ ಕೋಚ್ ದ್ರಾವಿಡ್..!

ಕೆಎಲ್ ರಾಹುಲ್​ಗೆ ಬಡ್ತಿ

ಬಿಸಿಸಿಐ ಬಿಡುಗಡೆ ಮಾಡಿರುವ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಕೆಎಲ್ ರಾಹುಲ್ ಬಡ್ತಿ ಪಡೆದಿದ್ದು, ಕಳೆದ ಬಾರಿ ಕೇಂದ್ರ ಗುತ್ತಿಗೆಯಲ್ಲಿ ಬಿ ಗ್ರೇಡ್​ನಲ್ಲಿದ್ದ ಕೆಎಲ್ ರಾಹುಲ್ ಇದೀಗ ಎ ಗ್ರೇಡ್​ನಲ್ಲಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ಕಳೆದ ಬಾರಿಯಂತೆ ಎ+ ಗ್ರೇಡ್‌ನಲ್ಲಿ ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ. ಇದರಲ್ಲಿ ನಾಯಕ ರೋಹಿತ್ ಶರ್ಮಾ ಹೊರತುಪಡಿಸಿ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ. ಎ ಗ್ರೇಡ್‌ನಲ್ಲಿ ಕೆಎಲ್ ರಾಹುಲ್ ಜೊತೆಗೆ ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಹೆಸರು ಸೇರಿದೆ.

ರಿಷಬ್ ಪಂತ್ ಬಿ ಗ್ರೇಡ್

ಕಳೆದ ಬಾರಿ ಎ ಗ್ರೇಡ್‌ನಲ್ಲಿದ್ದ, ಕಳೆದ ಒಂದು ವರ್ಷದಿಂದ ಮೈದಾನದಿಂದ ಹೊರಗುಳಿದಿದ್ದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಬಿ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಪಂತ್ ಹೊರತುಪಡಿಸಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಹೆಸರುಗಳನ್ನು ಒಳಗೊಂಡಿದೆ.

ಶ್ರೇಯಸ್ ಹೇಳಿದ್ದು ಸುಳ್ಳು ಎಂದ ಎನ್​ಸಿಎ! ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗ್ತಾರಾ ಅಯ್ಯರ್?

ವಿವಿದ ಗ್ರೇಡ್‌ಗಳಲ್ಲಿ ಸ್ಥಾನ ಪಡೆದಿರುವ ಆಟಗಾರರಿವರು

ಗ್ರೇಡ್ A+ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

ಗ್ರೇಡ್ ಎ: ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.

ಗ್ರೇಡ್ ಬಿ : ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.

ಗ್ರೇಡ್ ಸಿ:  ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Wed, 28 February 24

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ