Team India: ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ ಪ್ರಕಟ

Team India Schedule: ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್‌ಗೂ ಮುನ್ನ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ.

Team India: ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ ಪ್ರಕಟ
Team India
Follow us
| Updated By: ಝಾಹಿರ್ ಯೂಸುಫ್

Updated on:Jul 25, 2023 | 8:58 PM

ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. 2023 ರಿಂದ 2024 ರ ಮಾರ್ಚ್​ವರೆಗೆ ಭಾರತ ತಂಡವು ಒಟ್ಟು 16 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಇದರಲ್ಲಿ 5 ಟೆಸ್ಟ್, 3 ಏಕದಿನ ಮತ್ತು 8 ಟಿ20 ಪಂದ್ಯಗಳು ಒಳಗೊಂಡಿವೆ. 2024 ರ ಜನವರಿ 25 ರಂದು ಪ್ರಾರಂಭವಾಗುವ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್‌ ತಂಡವು ಭಾರತಕ್ಕೆ ಬರಲಿದೆ. ಈ ಸರಣಿಯ ಪಂದ್ಯಗಳು ಹೈದರಾಬಾದ್, ವೈಜಾಗ್, ರಾಜ್‌ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿದೆ.

ಇನ್ನು ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್‌ಗೂ ಮುನ್ನ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಪಂದ್ಯಗಳಿಗೆ ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನ ಮೈದಾನಗಳು ಆತಿಥ್ಯವಹಿಸಲಿದೆ.

ಏಕದಿನ ವಿಶ್ವಕಪ್ ನಂತರ, ಭಾರತವು ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಸಹ ಆಡಲಿದೆ. ನವೆಂಬರ್ 23 ರಂದು ವೈಜಾಗ್‌ನಲ್ಲಿ ಆರಂಭವಾಗಲಿರುವ ಈ ಸರಣಿಯು ಡಿಸೆಂಬರ್ 3 ರಂದು ಹೈದರಾಬಾದ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಇನ್ನು ಹೊಸ ವರ್ಷದ ಆರಂಭದಲ್ಲಿ ಅಫ್ಘಾನಿಸ್ತಾನ್ ತಂಡವು ತಮ್ಮ ಚೊಚ್ಚಲ ದ್ವಿಪಕ್ಷೀಯ ಟಿ20 ಸರಣಿಗಾಗಿ ಭಾರತಕ್ಕೆ ಆಗಮಿಸಲಿದೆ. ಮೂರು ಪಂದ್ಯಗಳ ಈ ಸರಣಿಯು ಮೊಹಾಲಿ ಮತ್ತು ಇಂದೋರ್‌ ಹಾಗೂ  ಬೆಂಗಳೂರಿನಲ್ಲಿ ನಡೆಯಲಿದೆ.

ಈ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ:

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ:

  1. ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  2. ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  3. ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ:

  1. ಮೊದಲ ಟಿ20 ಪಂದ್ಯ (ವೈಜಾಗ್ – ನವೆಂಬರ್ 23, 2023)
  2. ಎರಡನೇ ಟಿ20 ಪಂದ್ಯ (ತಿರುವನಂತಪುರಂ – ನವೆಂಬರ್ 26, 2023)
  3. ಮೂರನೇ ಟಿ20 ಪಂದ್ಯ (ಗುವಾಹಟಿ – ನವೆಂಬರ್ 28, 2023)
  4. ನಾಲ್ಕನೇ ಟಿ20 ಪಂದ್ಯ (ನಾಗ್ಪುರ – ಡಿಸೆಂಬರ್ 1, 2023)
  5. ಐದನೇ ಟಿ20 ಪಂದ್ಯ (ಹೈದರಾಬಾದ್ – ಡಿಸೆಂಬರ್ 03, 2023)

ಭಾರತ vs ಅಫ್ಘಾನಿಸ್ತಾನ್:

  1. ಮೊದಲ ಟಿ20 ಪಂದ್ಯ (ಮೊಹಾಲಿ – ಜನವರಿ 11, 2024)
  2. ಎರಡನೇ ಟಿ20 ಪಂದ್ಯ (ಇಂದೋರ್ – ಜನವರಿ 14, 2024)
  3. ಮೂರನೇ ಟಿ20 ಪಂದ್ಯ (ಬೆಂಗಳೂರು – ಜನವರಿ 17, 2024)

ಭಾರತ vs ಇಂಗ್ಲೆಂಡ್:

  1. ಮೊದಲ ಟೆಸ್ಟ್ (ಹೈದರಾಬಾದ್ – ಜನವರಿ 25 – ಜನವರಿ 29, 2024)
  2. ಎರಡನೇ ಟೆಸ್ಟ್ (ವೈಜಾಗ್ – ಫೆಬ್ರವರಿ 02 – ಫೆಬ್ರವರಿ 06, 2024)
  3. ಮೂರನೇ ಟೆಸ್ಟ್ (ರಾಜ್​ಕೋಟ್ – ಫೆಬ್ರವರಿ 15 – ಫೆಬ್ರವರಿ 19, 2024)
  4. ನಾಲ್ಕನೇ ಟೆಸ್ಟ್ (ರಾಂಚಿ – ಫೆಬ್ರವರಿ 23 – ಫೆಬ್ರವರಿ 27, 2024)
  5. ಐದನೇ ಟೆಸ್ಟ್ (ಧರ್ಮಶಾಲಾ – ಮಾರ್ಚ್ 07 – ಮಾರ್ಚ್ 11, 2024)

Published On - 8:15 pm, Tue, 25 July 23

ತಾಜಾ ಸುದ್ದಿ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು