India Squad: ಏಷ್ಯಾಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ

| Updated By: ಝಾಹಿರ್ ಯೂಸುಫ್

Updated on: Sep 21, 2022 | 12:24 PM

Women's Asia Cup 2022: ಅಕ್ಟೋಬರ್ 1 ರಿಂದ ಶುರುವಾಗಲಿರುವ ಏಷ್ಯಾಕಪ್​ನಲ್ಲಿ ಆತಿಥೇಯ ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಭಾರತ, ಥೈಲ್ಯಾಂಡ್ ಸೇರಿದಂತೆ ಒಟ್ಟು ಏಳು ತಂಡಗಳು ರೌಂಡ್ ರಾಬಿನ್ ಮಾದರಿಯಲ್ಲಿ ಸ್ಪರ್ಧಿಸಲಿದೆ.

India Squad: ಏಷ್ಯಾಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ
India squad
Follow us on

India squad for Women’s Asia Cup 2022: ಅಕ್ಟೋಬರ್ 1 ರಿಂದ 15 ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ ಟಿ20 (Women’s Asia Cup 2022) ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಆಗಿ ರಿಚಾ ಘೋಷ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು 15 ಸದಸ್ಯರಲ್ಲೇ ಇಬ್ಬರು ಆಟಗಾರ್ತಿಯರನ್ನು ಮೀಸಲು ಪಟ್ಟಿಗೆ ಆಯ್ಕೆ ಮಾಡಲಾಗಿದ್ದು, ಅದರಂತೆ ಸ್ಟಾಂಡ್​ ಬೈ ಆಟಗಾರ್ತಿಯರಾಗಿ ತಾನಿಯಾ ಭಾಟಿಯಾ ಮತ್ತು ಸಿಮ್ರಾನ್ ದಿಲ್ ಬಹದ್ದೂರ್ ಟೀಮ್ ಇಂಡಿಯಾ ಟಿ20 ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಅಕ್ಟೋಬರ್ 1 ರಿಂದ ಶುರುವಾಗಲಿರುವ ಏಷ್ಯಾಕಪ್​ನಲ್ಲಿ ಆತಿಥೇಯ ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಭಾರತ, ಥೈಲ್ಯಾಂಡ್ ಸೇರಿದಂತೆ ಒಟ್ಟು ಏಳು ತಂಡಗಳು ರೌಂಡ್ ರಾಬಿನ್ ಮಾದರಿಯಲ್ಲಿ ಸ್ಪರ್ಧಿಸಲಿದೆ. ಇದರಲ್ಲಿ ಅಗ್ರ-ನಾಲ್ಕು ತಂಡಗಳು ಸೆಮಿಫೈನಲ್ ಹಂತಕ್ಕೆ ಪ್ರವೇಶಿಸಲಿವೆ. ಅಕ್ಟೋಬರ್ 13 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 15 ರಂದು ಫೈನಲ್​ ಪಂದ್ಯ ಜರುಗಲಿದೆ.

ವಿಶೇಷ ಎಂದರೆ ಅಕ್ಟೋಬರ್ 7 ರಂದು ಭಾರತ ಮಹಿಳಾ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣಸಲಿದೆ. ಇತ್ತೀಚೆಗೆ ಟೀಮ್ ಇಂಡಿಯಾ ಪುರಷರ ತಂಡ ಕೂಡ ಏಷ್ಯಾಕಪ್​ನಲ್ಲಿ ಪಾಕ್ ವಿರುದ್ಧ ಸೆಣಸಿತ್ತು. ಇದೀಗ ಮಹಿಳಾ ತಂಡಗಳ ಮುಖಾಮುಖಿಗೆ ವೇದಿಕೆ ಸಿದ್ದವಾಗಿದೆ.

ಇದನ್ನೂ ಓದಿ
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಷ್ಯಾಕಪ್​ಗಾಗಿ ಭಾರತ ಮಹಿಳಾ ತಂಡ ಹೀಗಿದೆ:

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಸಬ್ಬಿನೇನಿ ಮೇಘನಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ್ ರಾಣಾ, ದಯಾಲನ್ ಹೇಮಲತಾ, ಮೇಘನಾ ಸಿಂಗ್, ರೇಣುಕಾ ವಸ್ತ್ರಕರ್, ರಾಜೇಶ್ವರಿ ಗಾಯಕವಾಡ, ರಾಧಾ ಯಾದವ್, ಕೆ.ಪಿ.ನವಗಿರೆ

ಮೀಸಲು ಆಟಗಾರರು: ತನಿಯಾ ಭಾಟಿಯಾ, ಸಿಮ್ರಾನ್ ದಿಲ್ ಬಹದ್ದೂರ್.

 

 

Published On - 12:23 pm, Wed, 21 September 22