
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ನಡುವೆ ಬಿಸಿಸಿಐ ಮುಂಬರುವ ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತ ಟಿ20 ತಂಡವನ್ನು ಪ್ರಕಟಿಸಿದೆ. ಪ್ರಸ್ತುತ ವಿಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಈ ಸರಣಿಯ ಬಳಿಕ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ. ಆ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ಬಿಸಿಸಿಐ ಆಯ್ಕೆ ಮಾಡಿರುವ ತಂಡದಲ್ಲಿ ಅಚ್ಚರಿಯ ಹೆಸರೆಂದರೆ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ಗೆ ಬರೋಬ್ಬರಿ 4 ವರ್ಷಗಳ ಬಳಿಕ ತಂಡದಲ್ಲಿ ಅವಕಾಶ ನೀಡಲಾಗಿದೆ.
ಬಿಸಿಸಿಐ ಆಯ್ಕೆ ಮಾಡಿರುವ ಈ 15 ಸದಸ್ಯರ ತಂಡವನ್ನು ಎಂದಿನಂತೆ ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ತಿಲಕ್ ವರ್ಮಾ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಕ್ಟೋಬರ್ 22 ರಿಂದ ಆರಂಭವಾಗಲಿರುವ ಈ ಸರಣಿಗೆ ಆಯ್ಕೆ ಮಂಡಳಿ ಯುವ ಆಟಗಾರರಿಗೆ ಅವಕಾಶ ನೀಡಿದೆ. ಅದರಂತೆ ವೈಭವ್ ಸೂರ್ಯವಂಶಿ ಮತ್ತು ವೇಗದ ಬೌಲರ್ ಪ್ರಿನ್ಸ್ ಯಾದವ್ ಅವರನ್ನು ಕಿವಿ ಪ್ರವಾಸಕ್ಕೆ ತಂಡದಲ್ಲಿ ಆಯ್ಕೆ ಮಾಡಿದೆ. ಆದಾಗ್ಯೂ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಆಗಿ ತಂಡದ ಭಾಗವಾಗಿದ್ದು, ಇಶಾನ್ ಕಿಶನ್ ಅವರನ್ನು ಸಹ ಆಯ್ಕೆ ಮಾಡಲಾಗಿದೆ. ಅವರೊಂದಿಗೆ, ಅಭಿಷೇಕ್ ಶರ್ಮಾ ಮತ್ತು ನಮನ್ ಧೀರ್ ಅವರಂತಹ ಆಕ್ರಮಣಕಾರಿ ಬ್ಯಾಟ್ಸ್‌ಮನ್‌ಗಳು ತಂಡದಲ್ಲಿದ್ದಾರೆ.
ಉಳಿದಂತೆ ಶಿವಂ ದುಬೆ, ಅಕ್ಷರ್ ಪಟೇಲ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಆಲ್ರೌಂಡರ್ಗಳಾಗಿ ತಂಡದಲ್ಲಿದ್ದರೆ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಲೆಗ್-ಸ್ಪಿನ್ನರ್ ರವಿ ಬಿಷ್ಣೋಯ್ ಸ್ಪಿನ್ ಬೌಲಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ನ್ಯೂಜಿಲೆಂಡ್‌ನ ಬೌನ್ಸಿ ಮತ್ತು ವೇಗದ ಪಿಚ್‌ಗಳಲ್ಲಿ, ಅನುಭವಿ ಭುವನೇಶ್ವರ್ ಕುಮಾರ್ ಜೊತೆಗೆ ಅರ್ಷದೀಪ್ ಸಿಂಗ್, ಮಾಯಾಂಕ್ ಯಾದವ್ ಮತ್ತು ಪ್ರಿನ್ಸ್ ಯಾದವ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ.
🚨 Announcement 🚨
#TeamIndia’s T20I squad and India A squads for New Zealand tour announced 📝
Bhuvneshwar Kumar makes a comeback to the T20I side 🙌
More Details ▶️ https://t.co/oJ52QSH0DO
#NZvIND https://t.co/btbXlQ0nQD
— BCCI (@BCCI) October 6, 2026
ಭಾರತದ ಟಿ20 ತಂಡ: ಶ್ರೇಯಸ್ ಅಯ್ಯರ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಶ್ದೀಪ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.
Published On - 9:16 pm, Tue, 6 October 26