India women’s squad: ಟೀಮ್ ಇಂಡಿಯಾ ಪುರುಷರ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಕೆರಿಬಿಯನ್ ದ್ವೀಪಕ್ಕೆ ತೆರಳಿದರೆ, ಇತ್ತ ಭಾರತೀಯ ಮಹಿಳಾ ತಂಡ ಬಾಂಗ್ಲಾದೇಶ್ ವಿರುದ್ಧದ ಸೀಮಿತ ಓವರ್ಗಳ ಸರಣಿಗಾಗಿ ಸಜ್ಜಾಗುತ್ತಿದೆ. ಒಟ್ಟು 6 ಪಂದ್ಯಗಳ ಈ ಸರಣಿಗಾಗಿ ಮಹಿಳಾ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಭಾರತ ತಂಡದ ಬಾಂಗ್ಲಾದೇಶ ಪ್ರವಾಸ ಜುಲೈ 9 ರಿಂದ ಆರಂಭವಾಗಲಿದ್ದು, ಜುಲೈ 22ರವರೆಗೆ ನಡೆಯಲಿದೆ. ಈ ವೇಳೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಈ ಎಲ್ಲಾ ಪಂದ್ಯಗಳು ಮೀರ್‌ಪುರದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ರಿಚಾ-ರಾಜೇಶ್ವರಿ ಔಟ್:
ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಯುವ ವಿಕೆಟ್ ಕೀಪರ್-ಬ್ಯಾಟತರ್ ರಿಚಾ ಘೋಷ್ ಮತ್ತು ಅನುಭವಿ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಸ್ಥಾನ ನೀಡಲಾಗಿಲ್ಲ. ಇಲ್ಲಿ ರಿಚಾ ಘೋಷ್ ಸ್ಥಾನದಲ್ಲಿ ಅಸ್ಸಾಂನ ಯುವ ವಿಕೆಟ್ ಕೀಪರ್ ಉಮಾ ಛೆಟ್ರಿಯನ್ನು ಆಯ್ಕೆ ಮಾಡಲಾಗಿದೆ. ಉಮಾ ಇತ್ತೀಚೆಗೆ ಉದಯೋನ್ಮುಖ ಏಷ್ಯಾ ಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಇದೀಗ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ.
ಬಾಂಗ್ಲಾದೇಶ ಪ್ರವಾಸಕ್ಕೆ ಭಾರತೀಯ ತಂಡ ಈ ಕೆಳಗಿನಂತಿದೆ:
ಟೀಮ್ ಇಂಡಿಯಾ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶೆಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ದೇವಿಕಾ ವೈದ್ಯ, ಉಮಾ ಛೆಟ್ರಿ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಎಸ್ ಮೇಘನಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರವಾಣಿ, ಮೋನಿಕಾ ಪಟೇಲ್, ರಾಶಿ ಕನೌಜಿಯಾ, ಅನುಷಾ ಬ್ಯಾರೆಡಿ, ಮಿನ್ನು ಮಣಿ.
ಇದನ್ನೂ ಓದಿ: ODI World Cup 2023: ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನಕ್ಕೆ ಗೆಲುವು ಖಚಿತ: ಸಯೀದ್ ಅಜ್ಮಲ್
ಟೀಮ್ ಇಂಡಿಯಾ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ದೇವಿಕಾ ವೈದ್ಯ, ಉಮಾ ಛೆಟ್ರಿ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಪ್ರಿಯಾ ಪುನಿಯಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರವಾಣಿ, ಮೋನಿಕಾ ಪಟೇಲ್, ರಾಶಿ ರಾಶಿ ಕನೌಜಿಯಾ, ಅನುಷಾ ಬ್ಯಾರೆಡಿ, ಸ್ನೇಹ ರಾಣಾ.