India’s squad: ಸೌತ್ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಕನ್ನಡಿಗ ನಾಯಕ

India Squad: ಐಪಿಎಲ್​ನಲ್ಲಿ 150 ಕಿ.ಮೀ ವೇಗದಲ್ಲಿ ಚೆಂಡೆಸೆದು ಮಿಂಚಿದ್ದ ಉಮ್ರಾನ್ ಮಲಿಕ್  ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಕೂಡ ಅವಕಾಶ ಪಡೆದಿದ್ದಾರೆ.

India's squad: ಸೌತ್ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಕನ್ನಡಿಗ ನಾಯಕ
Team India
Follow us
| Updated By: ಝಾಹಿರ್ ಯೂಸುಫ್

Updated on:May 22, 2022 | 8:42 PM

ಬಿಸಿಸಿಐ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಹಾಗೂ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು (Team India)  ಪ್ರಕಟಿಸಿದೆ. ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಈ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.  ಹಾಗೆಯೇ ಇತರ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಟಿ20 ವಿಶ್ವಕಪ್ ಬಳಿಕ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಆಡುತ್ತಿರುವ ದಿನೇಶ್ ಕಾರ್ತಿಕ್ ಇದೀಗ 3 ವರ್ಷಗಳ ಬಳಿಕ ಭಾರತ ತಂಡಕ್ಕೆ ಮರಳಿದ್ದಾರೆ. ಇನ್ನು ಟೆಸ್ಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರೇ ಮುಂದುವರೆಯಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಯುವಕರಿಗೆ ಅವಕಾಶ ಸಿಗಲಿದೆ ಎನ್ನಲಾಗಿತ್ತು. ಅದರಂತೆ ಐಪಿಎಲ್​ನಲ್ಲಿ 150 ಕಿ.ಮೀ ವೇಗದಲ್ಲಿ ಚೆಂಡೆಸೆದು ಮಿಂಚಿದ್ದ ಉಮ್ರಾನ್ ಮಲಿಕ್  ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಕೂಡ ಅವಕಾಶ ಪಡೆದಿದ್ದಾರೆ. ಮತ್ತೊಂದೆಡೆ, ಕಳಪೆ ಪ್ರದರ್ಶನದ ನಂತರವೂ ವೆಂಕಟೇಶ್ ಅಯ್ಯರ್ ಅವರಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: IPL 2022: ಹೇಗಿರಲಿದೆ ಪ್ಲೇಆಫ್: ಇಲ್ಲಿ 2 ತಂಡಗಳಿಗೆ ಡಬಲ್ ಚಾನ್ಸ್​..!

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಟಿ20 ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ ಕೃಷ್ಣ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:10 pm, Sun, 22 May 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು