IND vs ENG: ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿಗೆ ಕೋಕ್..!

| Updated By: ಪೃಥ್ವಿಶಂಕರ

Updated on: Jun 30, 2022 | 11:53 PM

IND vs ENG: ಮೊದಲ T20I ಗೆ ವಿಭಿನ್ನ ತಂಡವನ್ನು ಆಯ್ಕೆಗಾರರು ಆಯ್ಕೆ ಮಾಡಿದ್ದಾರೆ. ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವ ರೋಹಿತ್ ಶರ್ಮಾ ಹೊರತುಪಡಿಸಿ ಉಳಿದ ಟೆಸ್ಟ್ ಆಟಗಾರರಿಗೆ ವಿಶ್ರಾಂತಿ ನೀಡಿದ್ದಾರೆ.

IND vs ENG: ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿಗೆ ಕೋಕ್..!
ಟೀಂ ಇಂಡಿಯಾ
Follow us on

ಇಂಗ್ಲೆಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ODI ಮತ್ತು T20I ಸರಣಿಗೆ ಭಾರತ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ. ಜುಲೈ 1 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಮರು ನಿಗದಿತ ಐದನೇ ಟೆಸ್ಟ್‌ಗೆ ಭಾರತದ ಟೆಸ್ಟ್ ತಂಡವು ಪ್ರಸ್ತುತ ಸಜ್ಜಾಗಿದೆ. T20I ಸರಣಿಯು ಜುಲೈ 7 ರಂದು ಪ್ರಾರಂಭವಾಗಲಿದ್ದು, ODI ಜುಲೈ 12 ರಿಂದ ನಡೆಯಲಿದೆ. ಮೊದಲ T20I ಗೆ ವಿಭಿನ್ನ ತಂಡವನ್ನು ಆಯ್ಕೆಗಾರರು ಆಯ್ಕೆ ಮಾಡಿದ್ದಾರೆ. ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವ ರೋಹಿತ್ ಶರ್ಮಾ (Rohit Sharma) ಹೊರತುಪಡಿಸಿ ಉಳಿದ ಟೆಸ್ಟ್ ಆಟಗಾರರಿಗೆ ವಿಶ್ರಾಂತಿ ನೀಡಿದ್ದಾರೆ. ಐರ್ಲೆಂಡ್‌ನ T20I ಸರಣಿಯಲ್ಲಿ ಆಡಿದ್ದ ತಂಡವನ್ನು ಉಳಿಸಿಕೊಳ್ಳಲಾಗಿದ್ದು, ರೋಹಿತ್‌ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ಪೂರ್ಣ ಸಾಮರ್ಥ್ಯದ ತಂಡವು ಕೊನೆಯ ಎರಡು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

ಅರ್ಷದೀಪ್ ಸಿಂಗ್​ಗೆ ಅವಕಾಶ

ಏತನ್ಮಧ್ಯೆ, ಅರ್ಶ್ದೀಪ್ ಸಿಂಗ್ ಅವರಿಗೆ ಮೊದಲ ಏಕದಿನ ಪಂದ್ಯದಲ್ಲಿ ಅವಕಾಶ ಸಿಕ್ಕಿದೆ. ಆದಾಗ್ಯೂ, ಅವರು ಸರಣಿಯ ಕೊನೆಯ ಎರಡು T20I ಗಳಿಗೆ ತಂಡದಲ್ಲಿ ಸ್ಥಾನ ಪಡೆದಿಲ್ಲ. ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ತಂಡದಲ್ಲಿದ್ದರೂ ಎಡಗೈ ವೇಗಿ ಇನ್ನೂ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಉಮ್ರಾನ್ ಮಲಿಕ್ ಅವರನ್ನು ಇಂಗ್ಲೆಂಡ್ ವಿರುದ್ಧದ ಸಂಪೂರ್ಣ T20I ಸರಣಿಗೆ ಉಳಿಸಿಕೊಳ್ಳಲಾಗಿದೆ ಆದರೆ ODI ತಂಡದಲ್ಲಿ ಆಯ್ಕೆ ಮಾಡಲಾಗಿಲ್ಲ.

ಇದನ್ನೂ ಓದಿ
IND vs ENG: ಅಂತಿಮ ಟೆಸ್ಟ್​ಗೆ ಬುಮ್ರಾ ಕ್ಯಾಪ್ಟನ್! 35 ವರ್ಷಗಳ ನಂತರ ವೇಗದ ಬೌಲರ್​ಗೆ ನಾಯಕತ್ವ
IND vs ENG: ಅಂತಿಮ ಟೆಸ್ಟ್​ನಿಂದ ರೋಹಿತ್ ಶರ್ಮಾ ಔಟ್! ಬುಮ್ರಾಗೆ ನಾಯಕತ್ವ
ENG vs IND: ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಗೆದ್ದು 15 ವರ್ಷಗಳ ನಂತರ ಇತಿಹಾಸ ನಿರ್ಮಿಸುತ್ತಾ ಭಾರತ?

ಐರ್ಲೆಂಡ್ ಟಿ20ಯಲ್ಲಿ ಅವಕಾಶ ಪಡೆಯದ ರಾಹುಲ್ ತ್ರಿಪಾಠಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20ಐಗೆ ಮಾತ್ರ ಆಯ್ಕೆಯಾಗಿದ್ದಾರೆ. ಅದೇ ಸಮಯದಲ್ಲಿ, ಶಿಖರ್ ಧವನ್ ಅವರನ್ನು ಏಕದಿನ ಸರಣಿಗೆ ಆಯ್ಕೆ ಮಾಡಿರುವುದರಿಂದ ಧವನ್, ಭಾರತದ ಜರ್ಸಿಯಲ್ಲಿ ಅಖಾಡಕ್ಕೆ ಮರಳಲು ಸಿದ್ಧರಾಗಿದ್ದಾರೆ.

ಮೊದಲನೇ ಟಿ20ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್

2ನೇ ಮತ್ತು 3ನೇ ಟಿ20ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್

3 ಏಕದಿನ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್

Published On - 11:47 pm, Thu, 30 June 22