AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಟಿ20 ಪಂದ್ಯಗಳ ಸ್ಥಳ ಬದಲಾವಣೆ; ನವೀಕೃತ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

BCCI: ಎರಡು ತಿಂಗಳ ಹಿಂದೆ ಅಂದರೆ ಜೂನ್‌ನಲ್ಲಿ ಬಿಸಿಸಿಐ, ಟೀಂ ಇಂಡಿಯಾ ತವರಿನಲ್ಲಿ ಆಡುವ ಅಂತರರಾಷ್ಟ್ರೀಯ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆ ವೇಳಾಪಟ್ಟಿಯ ಪ್ರಕಾರ ಭಾರತ ಮುಂದಿನ ತಿಂಗಳಿನಲ್ಲಿ ಬಾಂಗ್ಲಾದೇಶ ವಿರುದ್ಧ ಹಾಗೂ ಮುಂದಿನ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಆಡಬೇಕಿತ್ತು. ಆದರೆ ಈ ಎರಡೂ ಸರಣಿಗಳ ವೇಳಾಪಟ್ಟಿಯಲ್ಲಿ ಇದೀಗ ಕೊಂಚ ಬದಲಾವಣೆಯಾಗಿದೆ.

3 ಟಿ20 ಪಂದ್ಯಗಳ ಸ್ಥಳ ಬದಲಾವಣೆ; ನವೀಕೃತ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Aug 13, 2024 | 10:00 PM

Share

ಸದ್ಯ ಶ್ರೀಲಂಕಾ ಪ್ರವಾಸವನ್ನು ಮುಗಿಸಿ ವಿರಾಮದಲ್ಲಿರುವ ಟೀಂ ಇಂಡಿಯಾ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್​ನಿಂದ ಮತ್ತೆ ಮೈದಾನಕ್ಕೆ ಮರಳಲಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಟೀಂ ಇಂಡಿಯಾದ ಜರ್ನಿ ಆರಂಭವಾಗಲಿದೆ. ಉಭಯ ದೇಶಗಳ ನಡುವೆ ಮೊದಲು ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲ್ಲಿದೆ. ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲ್ಲಿದೆ. ವೇಳಾಪಟ್ಟಿಯಂತೆ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಂದು ನಡೆದರೆ, ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಆರಂಭವಾಗಲಿದೆ. ಈ ನಡುವೆ ಎರಡೂ ದೇಶಗಳ ನಡೆಯುವ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆಗಳಾಗಿದ್ದು. ಆಗಿರುವ ಬದಲಾವಣೆ ಏನು ಎಂಬುದನ್ನು ಬಿಸಿಸಿಐ ತನ್ನ ಹೇಳಿಕೆಯಲ್ಲಿ ಖಚಿತಪಡಿಸಿದೆ.

ಧರ್ಮಶಾಲಾದ ಬದಲು ಗ್ವಾಲಿಯರ್‌ನಲ್ಲಿ ಪಂದ್ಯ

ಮೇಲೆ ಹೇಳಿದಂತೆ ಉಭಯ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ನಂತರ, 3 ಪಂದ್ಯಗಳ ಟಿ20 ಸರಣಿಯೂ ನಡೆಯಲಿದ್ದು, ಈ ಸರಣಿ ಅಕ್ಟೋಬರ್ 6 ರಿಂದ ಪ್ರಾರಂಭವಾಗಲಿದೆ. ಆದರೆ ಈ ಟಿ20 ಸರಣಿಗೆ ಆತಿಥ್ಯವಹಿಸುತ್ತಿರುವ ಸ್ಥಳಗಳಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಈ ಮೊದಲು ಮೊದಲ ಟಿ20 ಪಂದ್ಯ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಆದರೆ ಈಗ ಅದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಲಿದೆ. ಈ ಬದಲಾವಣೆಗೆ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯವೇ ಕಾರಣ ಎನ್ನಲಾಗಿದೆ.

ಈ ಮೂಲಕ 14 ವರ್ಷಗಳ ನಂತರ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ಆತಿಥ್ಯವಹಿಸಲು ಗ್ವಾಲಿಯರ್‌ ಸಜ್ಜಾಗಿದೆ. ಈ ಪಂದ್ಯಕ್ಕೂ ಮೊದಲು ಅಂದರೆ, 2010 ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದ್ವಿಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಪುರುಷ ಕ್ರಿಕೆಟಿಗ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.  ಆ ಬಳಿಕ ಈ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಅಂತರಾಷ್ಟ್ರೀಯ ಪಂದ್ಯ ಇದಾಗಲಿದೆ.

ಇನ್ನೇರಡು ಸ್ಥಳಗಳಲ್ಲೂ ಬದಲಾವಣೆ

ಈ ಪಂದ್ಯ ಮಾತ್ರವಲ್ಲದೆ, ಇನ್ನೆರಡು ಪಂದ್ಯಗಳ ವೇಳಾಪಟ್ಟಿಯನ್ನೂ ಬದಲಾಯಿಸಲಾಗಿದೆ. ಆದರೆ ಈ ಎರಡೂ ಪಂದ್ಯಗಳು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ20 ಸರಣಿಗೆ ಒಳಪಟ್ಟ ಪಂದ್ಯಗಳಲ್ಲ. ಬದಲಿಗೆ ಮುಂದಿನ ವರ್ಷ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲ್ಲಿರುವ ಟಿ20 ಸರಣಿಯ ಪಂದ್ಯಗಳು. ವಾಸ್ತವವಾಗಿ ಇಂಗ್ಲೆಂಡ್ ತಂಡ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲ್ಲಿದೆ. ಇದೀಗ ಈ ಸರಣಿಯ ಮೊದಲ ಮತ್ತು ಎರಡನೇ ಪಂದ್ಯಗಳ ಸ್ಥಳಗಳನ್ನು ಬದಲಾಯಿಸಲಾಗಿದೆ. ಮೊದಲ ಟಿ20 ಜನವರಿ 22 ರಂದು ಚೆನ್ನೈನಲ್ಲಿ ನಡೆಯಬೇಕಿತ್ತು ಆದರೆ ಈಗ ಈ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಲಿದೆ. ಜನವರಿ 25 ರಂದು ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಎರಡನೇ ಟಿ20 ಪಂದ್ಯ ಈಗ ಅದೇ ದಿನಾಂಕದಂದು ಚೆನ್ನೈನಲ್ಲಿ ನಡೆಯಲಿದೆ. ಗಣರಾಜ್ಯೋತ್ಸವದ ಸಿದ್ಧತೆಯನ್ನು ಗಮನದಲ್ಲಿಟ್ಟುಕೊಂಡು ಕೋಲ್ಕತ್ತಾ ಪೊಲೀಸರು ಈ ಬದಲಾವಣೆಗೆ ಒತ್ತಾಯಿಸಿದ್ದಾರೆ ಎಂದು ಬಿಸಿಸಿಐ ಕಾರಣ ನೀಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Tue, 13 August 24

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!