AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ, ಟೀಮ್​​ನಲ್ಲಿ ಯಾರಿಗೆಲ್ಲಾ ಸಿಕ್ತು ಚಾನ್ಸ್​?

ICC Women's Cricket World Cup 2025: ಬಹುನಿರೀಕ್ಷಿತ 2025ರ ಏಷ್ಯಾಕಪ್ ಟೂರ್ನಿಗೆ ಈಗಾಗಲೇ ಬಿಸಿಸಿಐ ಪುರಷರ ಭಾರತ ತಂಡವನ್ನು ಪ್ರಕಟಿಸಿದೆ. ಇದರ ಬೆನ್ನಲ್ಲೇ ಇದೀಗ 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ 30ರಿಂದ ಆರಂಭವಾಗಲಿದೆ. ಇನ್ನು ವಿಶ್ವಕಪ್​ ಗೆ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ವಿವರ ಇಲ್ಲಿದೆ.

ಮಹಿಳಾ ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ, ಟೀಮ್​​ನಲ್ಲಿ ಯಾರಿಗೆಲ್ಲಾ ಸಿಕ್ತು ಚಾನ್ಸ್​?
Team India
ರಮೇಶ್ ಬಿ. ಜವಳಗೇರಾ
|

Updated on:Aug 19, 2025 | 5:14 PM

Share

ಭಾರತದ ಅತಿಥ್ಯದಲ್ಲಿ ನಡೆಯಲಿರುವ 2025ರ ಮಹಿಳಾ ಏಕದಿನ ವಿಶ್ವಕಪ್ (ICC Women’s Cricket World Cup 2025) ಟೂರ್ನಿಗೆ ​ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ಇದೀಗ ಭಾರತ ಮಹಿಳಾ ತಂಡವನ್ನು (Team India) ಪ್ರಕಟಿಸಲಾಗಿದೆ. ಇದೇ ಸೆಪ್ಟೆಂಬರ್ 30ರಿಂದ ನಡೆಯಲಿರುವ ಮಹಿಳಾ ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು, ಭಾರತ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದೆ.

ಏಕದಿನ ವಿಶ್ವಕಪ್​ ಗೆ ಭಾರತ ತಂಡ ಇಂತಿದೆ

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್​ ಕೀಪರ್​), ಕ್ರಾಂತಿ ಗೌಡ್, ಅಮಂಜೋತ್ ಕೌರ್, ರಾಧಾ ಯಾದವ್, ಶ್ರೀ ಚರಣಿ, ಯಸ್ತಿಕಾ ಬಾಟಿಯ ಮತ್ತು ಸ್ನೇಹ ರಾಣಾ.

ಮೀಸಲು ಆಟಗಾರ್ತಿಯರು: ತೇಜಲ್​, ಪ್ರೇಮಾ ರಾವಲ್​, ಪ್ರಿಯಾ ಮಿಶ್ರ, ಉಮಾ ಛತ್ರಿ, ಮಿನುಮಣಿ ಮತ್ತು ಸಯಾಲಿ ಸದ್ಘರಿ ಮೀಸಲು ಆಟಗಾರ್ತಿಯರಾಗಿರಲಿದ್ದಾರೆ.

ಇದನ್ನೂ ಓದಿ: ODI World Cup 2025: ಭಾರತದಲ್ಲಿ ನಡೆಯಲ್ಲಿರುವ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

2025ರ ಏಷ್ಯಾಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದೆಯಾದರೂ, ಈ ಪಂದ್ಯಾವಳಿಗಳು ಯುಎಇನ ದುಬೈ ಹಾಗೂ ಅಬುದಾಬಿಯಲ್ಲಿ ನಡೆಯಲಿದೆ. ಇನ್ನು 2025ರ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಆಯೋಜನೆಗೊಳ್ಳುತ್ತಿದೆ. ಈ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ಮಹಿಳಾ ಕ್ರಿಕೆಟ್‌ ತಂಡವು ಪೂರ್ವತಯಾರಿ ರೂಪದಲ್ಲಿ ಆಸ್ಟ್ರೇಲಿಯಾ ವಿರುದ್ದ ಏಕದಿನ ಸರಣಿಯನ್ನಾಡಲಿದೆ.

ಈ ಸರಣಿಯಲ್ಲಿ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಪಾಕಿಸ್ತಾನ, ಶ್ರೀಲಂಕಾ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಸೇರಿದಂತೆ ಒಟ್ಟು 8 ತಂಡಗಳು ಸೆಣಸಾಡಲಿದ್ದು, ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Tue, 19 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ