AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ಕನ್ನಡಿಗರಿಗೆ ಚಾನ್ಸ್​

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌ ಗವಾಸ್ಕರ್‌ ಟ್ರೋಫಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಕರ್ನಾಟಕದ ವೈಶಾಖ್‌ ವಿಜಯಕುಮಾರ್‌ ಆಯ್ಕೆಯಾಗಿದ್ದಾರೆ. ಇನ್ನು ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಆಡಲು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ಕ್ರಿಕೆಟ್‌ ತಂಡವನ್ನು ಸಹ ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ಕನ್ನಡಿಗರಿಗೆ ಚಾನ್ಸ್​
ಟೀಂ ಇಂಡಿಯಾ
ರಮೇಶ್ ಬಿ. ಜವಳಗೇರಾ
|

Updated on:Oct 25, 2024 | 11:42 PM

Share

ದಕ್ಷಿಣ ಆಫ್ರಿಕಾ ( South Africa) ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾವನ್ನು (Team India) ಬಿಸಿಸಿಐ(bcci) ಪ್ರಕಟಿಸಿದೆ. ಇದರ ಜೊತೆಗೆ ಆಸ್ಟ್ರೇಲಿಯಾ(Australia )ವಿರುದ್ಧದ ಬಾರ್ಡರ್ ಬಾರ್ಡರ್‌ ಗವಾಸ್ಕರ್‌ ​ ಟ್ರೋಫಿಗೂ (Australia ) ಸಹ ಭಾರತ ತಂಡವನ್ನು ಇಂದು(ಅಕ್ಟೋಬರ್ 25) ಪ್ರಕಟಿಸಲಾಗಿದ್ದು, ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾವನ್ನು  ಮುನ್ನಡೆಸಲಿದ್ದಾರೆ. ಇನ್ನು ಆಸೀಸ್ ವಿರುದ್ಧದ ಬಾರ್ಡರ್ ಗಾವಸ್ಕರ್ ಟ್ರೋಫಿಗೆ ಭಾರತ ತಂಡವನ್ನು ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.

ಸೌತ್ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ

ನವೆಂಬರ್‌ ತಿಂಗಳಲ್ಲಿ ನಾಲ್ಕು ಪಂದ್ಯಗಳ ಟಿ20 ಸರಣಿಗಾಗಿ ಭಾರತೀಯ ಕ್ರಿಕೆಟ್‌ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ತಂಡದಲ್ಲಿ ಕರ್ನಾಟಕದ ವೈಶಾಖ್‌ ವಿಜಯಕುಮಾರ್‌ ಸ್ಥಾನ ಪಡೆದುಕೊಂಡಿದ್ದಾರೆ. ವೈಶಾಖ್‌ ವಿಜಯಕುಮಾರ್‌ಗೆ ಇದೆ ಮೊದಲ ಭಾರಿಗೆ ಭಾರತದ ತಂಡದಲ್ಲಿ ಅವಕಾಶ ಲಭಿಸಿದೆ.

ಇದನ್ನೂ ಓದಿ: WTC Final: ಟೀಮ್ ಇಂಡಿಯಾದ ಫೈನಲ್ ಲೆಕ್ಕಾಚಾರ ಉಲ್ಟಾ ಪಲ್ಟಾ

ತಂಡ ಇಂತಿದೆ: ಸೂರ್ಯ ಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಜಿತೇಶ್​ ಶರ್ಮಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ವೈಶಾಖ್‌ ವಿಜಯಕುಮಾರ್‌, ಅವೇಶ್ ಖಾನ್, ಯಶ್ ದಯಾಳ್.

ಆಸೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ

ಇನ್ನು ಇದಾದ ಬಳಿಕ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ನವೆಂಬರ್‌ನಲ್ಲಿ ಆರಂಭವಾಗಲಿದೆ. ಇದಕ್ಕೆ ಬಿಸಿಸಿಐ, 18 ಸದಸ್ಯರನ್ನು ಒಳಗೊಂಡ ಭಾರತ ತಂಡವನ್ನು ಪ್ರಕಟಿಸಿದೆ. 18 ಬಳಗದಲ್ಲಿ ಕರ್ನಾಟಕದ ಕೆಎಲ್‌ ರಾಹುಲ್‌ ಹಾಗೂ ವೇಗದ ಬೌಲರ್‌ ಪ್ರಸಿದ್ಧಕೃಷ್ಣಗೆ ಅವಕಾಶ ನೀಡಲಾಗಿದೆ.

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬೂಮ್ರಾ(ಉಪ ನಾಯಕ), ಯಶಸ್ವಿ ಜಯ್​ಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್​ ರಾಹುಲ್, ರಿಷಬ್ ಪಂತ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧಕೃಷ್ಣ, ಹರ್ಷಿತ್ ರಾಣಾ, ನಿತಿಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ನವೆಂಬರ್‌ನಲ್ಲಿ ಆರಂಭವಾಗಲಿದೆ. ಈ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಹು ನಿರೀಕ್ಷಿತ ಸರಣಿಯನ್ನು ಕುತೂಹಲದಿಂದ ಅಭಿಮಾನಿಗಳು ನೋಡುತ್ತಿದ್ದಾರೆ. ಯಾಕಂದರೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್ ದೃಷ್ಟಿಯಿಂದ ಈ ಸರಣಿ ಬಹುಮುಖ್ಯವಾಗಿದೆ.

Published On - 11:30 pm, Fri, 25 October 24

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?