ಐಪಿಎಲ್​ ಬೆನ್ನಲ್ಲೇ ಭಾರತ-ದಕ್ಷಿಣ ಆಫ್ರಿಕಾ ನಡುವೆ ಸರಣಿ

ಐಪಿಎಲ್​ ಬೆನ್ನಲ್ಲೇ ಭಾರತ-ದಕ್ಷಿಣ ಆಫ್ರಿಕಾ ನಡುವೆ ಸರಣಿ
IND vs SA

Team India: ಭಾರತ ತಂಡ ಜೂನ್‌ನಲ್ಲಿ ಐರ್ಲೆಂಡ್‌ ಪ್ರವಾಸ ಕೂಡ ಕೈಗೊಳ್ಳಬೇಕಿದೆ. ಜೂನ್ ಕೊನೆಯ ವಾರದಲ್ಲಿ ಉಭಯ ತಂಡಗಳ ನಡುವೆ ಎರಡು ಟಿ20 ಪಂದ್ಯಗಳು ನಡೆಯಲಿವೆ.

TV9kannada Web Team

| Edited By: Zahir PY

Mar 03, 2022 | 2:59 PM

ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಜೂನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಐಪಿಎಲ್ 2022 ರ ನಂತರ ಈ ಸರಣಿಯನ್ನು ಆಯೋಜಿಸಲಾಗುತ್ತಿದೆ. ಈ ಸರಣಿಯ ಪಂದ್ಯಗಳು ಕಟಕ್, ವಿಶಾಖಪಟ್ಟಣಂ, ದೆಹಲಿ, ರಾಜ್ ಕೋಟ್ ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಿಸಿಸಿಐ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಸರಣಿಯ ಮೊದಲ ಟಿ20 ಪಂದ್ಯ ಜೂನ್ 9 ರಂದು ನಡೆಯಲಿದ್ದು, ಕೊನೆಯ ಪಂದ್ಯ ಜೂನ್ 19 ರಂದು ನಡೆಯಲಿದೆ.

ಮುಂಬರುವ ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಎರಡೂ ತಂಡಗಳಿಗೆ ಈ ಸರಣಿ ಮಹತ್ವದ್ದಾಗಿದೆ. T20 ವಿಶ್ವಕಪ್ 2022 ಈ ವರ್ಷದ ಕೊನೆಯಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ರೋಹಿತ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಇತ್ತೀಚೆಗೆ ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಇದಕ್ಕೂ ಮುನ್ನ ಭಾರತ ಕಳೆದ ವರ್ಷ ತವರಿನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿತ್ತು.

ನಂಬರ್ 1 ಟೀಮ್ ಇಂಡಿಯಾ: ಸದ್ಯ ಐಸಿಸಿ ಟಿ20 ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. ಭಾರತ ತಂಡ ಸತತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆಲ್ಲುವ ಮೂಲಕ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಅಫ್ಘಾನಿಸ್ತಾನದ ದಾಖಲೆಯನ್ನು ಸರಿಗಟ್ಟಿದೆ. ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ದೊಡ್ಡ ದಾಖಲೆಯನ್ನು ದಾಖಲಿಸುವ ಅವಕಾಶವನ್ನು ಹೊಂದಿದೆ.

ಐರ್ಲೆಂಡ್ ವಿರುದ್ದ ಸರಣಿ: ಭಾರತ ತಂಡ ಜೂನ್‌ನಲ್ಲಿ ಐರ್ಲೆಂಡ್‌ ಪ್ರವಾಸ ಕೂಡ ಕೈಗೊಳ್ಳಬೇಕಿದೆ. ಜೂನ್ ಕೊನೆಯ ವಾರದಲ್ಲಿ ಉಭಯ ತಂಡಗಳ ನಡುವೆ ಎರಡು ಟಿ20 ಪಂದ್ಯಗಳು ನಡೆಯಲಿವೆ. ಸರಣಿಯ ಮೊದಲ ಟಿ20 ಪಂದ್ಯ ಜೂನ್ 26 ರಂದು ನಡೆಯಲಿದ್ದು, ಎರಡನೇ ಪಂದ್ಯ ಜೂನ್ 28 ರಂದು ನಡೆಯಲಿದೆ. ಒಟ್ಟಿನಲ್ಲಿ ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಸರಣಿಗಳನ್ನು ಆಡಲಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(BCCI announces venues for South Africa T20Is)

Follow us on

Related Stories

Most Read Stories

Click on your DTH Provider to Add TV9 Kannada