ನ್ಯೂಜಿಲೆಂಡ್, ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ತಂಡದಲ್ಲಿ ಮಹತ್ವದ ಬದಲಾವಣೆ
ನ್ಯೂಜಿಲೆಂಡ್ ವಿರುದ್ಧದ ಟಿ20, ಏಕದಿನ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆದ್ರೆ, ಕಿವೀಸ್ ವಿರುದ್ಧ ಟಿ20 ಸರಣಿಗೆ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ.
ನ್ಯೂಜಿಲೆಂಡ್ (New Zealand) ವಿರುದ್ಧ ಏಕದಿನ ಹಾಗೂ ಟಿ20 ಸರಣಿ ಮತ್ತು ಆಸ್ಟ್ರೇಲಿಯಾ(Australia) ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡ (Team India squad) ಪ್ರಕಟವಾಗಿದೆ. ಮೊದಲಿಗೆ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 3 ಏಕದಿನ ಹಾಗೂ 3 ಟಿ20 ಪಂದ್ಯ ನಡೆಯಲಿದೆ. ಕಿವೀಸ್ ವಿರುದ್ಧದ ಸರಣಿಗೆ ಬಿಸಿಸಿಐ ಪ್ರಕಟಿಸಿದ ತಂಡದಲ್ಲಿ ಕೆ.ಎಲ್.ರಾಹುಲ್ ಹಾಗೂ ಆಲ್ರೌಂಡರ್ ಅಕ್ಸರ್ ಪಟೀಲ್ ಹೆಸರು ಇಲ್ಲ. ಕಾರಣ ರಾಹುಲ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದರೆ, ಅಕ್ಸರ್ ಪಟೀಲ್ ವೈಯಕ್ತಿಕ ಕಾರಣಗಳಿಂದ ಲಭ್ಯವಿಲ್ಲ. ಹಾಗಾದ್ರೆ ಕಿವೀಸ್ ಹಾಗೂ ಆಸೀಸ್ ಸರಣಿಗೆ ಭಾರತ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಇದನ್ನೂ ಓದಿ: IND vs NZ: ಭಾರತ ವಿರುದ್ಧದ ಟಿ20 ಸರಣಿಗೆ ಕಿವೀಸ್ ತಂಡ ಪ್ರಕಟ; ಸ್ಪಿನ್ ಆಲ್ರೌಂಡರ್ಗೆ ತಂಡದ ನಾಯಕತ್ವ
India’s squad for first 2 Tests vs Australia: Rohit Sharma (C), KL Rahul (vc), Shubman Gill, C Pujara, V Kohli, S Iyer, KS Bharat (wk), Ishan Kishan (wk), R Ashwin, Axar Patel, Kuldeep Yadav, Ravindra Jadeja, Mohd. Shami, Mohd. Siraj, Umesh Yadav, Jaydev Unadkat, Suryakumar Yadav
— BCCI (@BCCI) January 13, 2023
ನ್ಯೂಜಿಲೆಂಡ್ ವಿರುದ್ಧ ಟಿ20 ತಂಡಕ್ಕೆ ಕೆಲ ಮಹತ್ವದ ಬದಲಾವಣೆ ಮಾಡಲಾಗಿದೆ. ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿ ಹಾರ್ದಿಕ್ ಪಾಂಡ್ಯಗೆ ಮತ್ತೆ ನಾಯಕತ್ವ ವಹಿಸಲಾಗಿದೆ. ಇನ್ನು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಪೃಥ್ವಿ ಶಾಗೆ ಅವಕಾಶ ಸಿಕ್ಕಿದೆ. ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾಗೆ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜುವೇಂದ್ರ ಚಹಾಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಕೇಶ್ ಕುಮಾರ್.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮ(ನಾಯಕ),ಶುಭಮನ್ ಗಿಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ) ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಶರ್ದುಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್,
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ
ನ್ಯೂಜಿಲೆಂಡ್ ಸರಣಿ ಬೆನ್ನಲ್ಲೇ ಆಸ್ಟ್ರೇಲಿಯಾ ವಿರುದ್ಧದ ತವರಿನ ಟೆಸ್ಟ್ ಸರಣಿಯ ಆರಂಭಿಕ 2 ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ಹೊರಗುಳಿದಿದ್ಧ ಕೆಎಲ್ ರಾಹುಲ್ ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೆ ಮರಳಿದ್ದಾರೆ. ಗಾಯಗೊಂಡು ಸುದೀರ್ಘ ದಿನಗಳಿಂದ ವಿಶ್ರಾಂತಿಯಲ್ಲಿರುವ ರವೀಂದ್ರ ಜಡೇಜಾ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
ಆಸೀಸ್ ವಿರುದ್ದದ ಆರಂಬಿಕ 2 ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಇಂತಿದೆ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ , ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ಇಶಾನ್ ಕಿಶನ್, ಆರ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.
Published On - 11:37 pm, Fri, 13 January 23