BCCI Secretary: ಬಿಸಿಸಿಐ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಅವಿರೋಧ ಆಯ್ಕೆ

BCCI Secretary: ಬಿಸಿಸಿಐನ ಹೊಸ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಯ್ ಶಾ ಅವರು ಐಸಿಸಿ ಅಧ್ಯಕ್ಷರಾದ ನಂತರ ಖಾಲಿಯಾಗಿದ್ದ ಈ ಹುದ್ದೆಗೆ ಸೈಕಿಯಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೊದಲು ಅವರನ್ನು ಹಂಗಾಮಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿತ್ತು.

BCCI Secretary: ಬಿಸಿಸಿಐ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಅವಿರೋಧ ಆಯ್ಕೆ
ಬಿಸಿಸಿಐ
Follow us
ಪೃಥ್ವಿಶಂಕರ
|

Updated on: Jan 12, 2025 | 2:57 PM

ಜಯ್​ ಶಾ ಅವರು ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಖಾಲಿಯಾಗಿದ್ದ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಇದೀಗ ದೇವಜಿತ್ ಸೈಕಿಯಾ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12 ರಂದು ಭಾನುವಾರ ನಡೆದ ವಿಶೇಷ ಸಾಮಾನ್ಯ ಸಭೆಯ (ಎಸ್‌ಜಿಎಂ) ನಂತರ ಬಿಸಿಸಿಐ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿತು. ಮಂಡಳಿಯ ಸಂವಿಧಾನದ ಪ್ರಕಾರ, ಈ ಖಾಲಿ ಹುದ್ದೆಯನ್ನು ಭರ್ತಿ ಮಾಡಲು 45 ದಿನಗಳ ಕಾಲಾವಕಾಶವಿದ್ದು, ಇದಕ್ಕಾಗಿ ಚುನಾವಣೆ ನಡೆಸಲಾಯಿತು. ಆದರೆ ಈ ಹುದ್ದೆಗೆ ಸೈಕಿಯಾ ಅವರನ್ನು ಹೊರತುಪಡಿಸಿ ಮತ್ತ್ಯಾರು ನಾಮಪತ್ರ ಸಲ್ಲಿಸದ ಕಾರಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ವಾಸ್ತವವಾಗಿ ಜಯ್​ ಶಾ ಅವರ ನಿರ್ಗಮನದ ಬಳಿಕ ಈ ಹುದ್ದೆಗೆ ಸೈಕಿಯಾ ಅವರನ್ನೇ ಹಂಗಾಮಿ ಕಾರ್ಯದರ್ಶಿಯನ್ನಾಗಿ ಮಾಡಲಾಗಿತ್ತು. ಮತ್ತೊಂದೆಡೆ, ಪ್ರಭತೇಜ್ ಭಾಟಿಯಾ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 2024 ರಲ್ಲಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ವಹಿಸಿಕೊಂಡ ನಂತರ ಸೈಕಿಯಾ ಮಧ್ಯಂತರದಲ್ಲಿ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಡಳಿಯ ಸಂವಿಧಾನದ ಪ್ರಕಾರ ಯಾವುದೇ ಹುದ್ದೆ ಖಾಲಿಯಾದರೆ 45 ದಿನಗಳೊಳಗೆ ಭರ್ತಿ ಮಾಡಿ ಇದಕ್ಕಾಗಿ ಚುನಾವಣೆ ನಡೆಸಬೇಕು. ಆ ಪ್ರಕಾರ ಕಾರ್ಯದರ್ಶಿ ಹುದ್ದೆಗೆ ಸೈಕಿಯಾ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಜನವರಿ 12 ರಂದು ಅವರನ್ನು ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ದೇವಜಿತ್ ಸೈಕಿಯಾ ಯಾರು?

ಸುಮಾರು 56 ವರ್ಷ ವಯಸ್ಸಿನ ದೇವಜಿತ್ ಸೈಕಿಯಾ ಅವರು ಏಪ್ರಿಲ್ 1969 ರಲ್ಲಿ ಅಸ್ಸಾಂನ ಗುವಾಹಟಿಯಲ್ಲಿ ಜನಿಸಿದರು. ಸೈಕಿಯಾ ಬೆಳೆದದ್ದು ಗುವಾಹಟಿಯಲ್ಲಿ. ಸೈಕಿಯಾ ಪ್ರಥಮ ದರ್ಜೆ ಕ್ರಿಕೆಟಿಗರಾಗಿದ್ದು, ಅವರು 1990-91ರ ಸೀಸನ್​ನಲ್ಲಿ ಅಸ್ಸಾಂ ಪರ ರಣಜಿ ಟ್ರೋಫಿಯಲ್ಲಿ 4 ಪಂದ್ಯಗಳನ್ನು ಆಡಿದ್ದರು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದ ಅವರು, ಅಸ್ಸಾಂ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಗುವಾಹಟಿ ಕ್ರೀಡಾ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅವರು ಅಸ್ಸಾಂನ ಅಡ್ವೊಕೇಟ್ ಜನರಲ್ ಕೂಡ ಆಗಿದ್ದಾರೆ.

4 ರಣಜಿ ಪಂದ್ಯಗಳು

ದೇವಜಿತ್ ಸೈಕಿಯಾ ಅವರು 1984 ರಲ್ಲಿ ಜೂನಿಯರ್ ಮಟ್ಟದಲ್ಲಿ ಬಿಸಿಸಿಐನ ಅತ್ಯಂತ ಪ್ರಮುಖ ಪಂದ್ಯಾವಳಿಯಾದ ಸಿಕೆ ನಾಯುಡು ಟ್ರೋಫಿ ಮೂಲಕ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಗುರುತಿಸಿಕೊಂಡರು. ಇದರ ನಂತರ, ಅವರು ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಅಸ್ಸಾಂ ಅಂಡರ್-15 ತಂಡದ ಪರ ಕಣಕ್ಕಿಳಿದು ತಮ್ಮ ಚೊಚ್ಚಲ ಪಂದ್ಯದಲ್ಲಿ ಅಜೇಯ 55 ರನ್ ಕಲೆಹಾಕಿದರು. ನಂತರ 1987 ರಲ್ಲಿ ನಡೆದ ಅಂಡರ್-17 ವಿಜಯ್ ಹಜಾರೆ ಟ್ರೋಫಿಯಲ್ಲಿ ಒಡಿಶಾ ವಿರುದ್ಧ ಅದ್ಭುತ ಶತಕ ಗಳಿಸುವ ಮೂಲಕ ಹಿರಿಯ ಪೂರ್ವ ವಲಯ ತಂಡದಲ್ಲಿ ಸ್ಥಾನ ಪಡೆದರು. ಆ ಬಳಿಕ 1989 ರಲ್ಲಿ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದ ಅವರು 4 ಪಂದ್ಯಗಳನ್ನು ಆಡಿದ್ದಾರೆ

ಆದಾಗ್ಯೂ, ಅವರು ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ಕೇವಲ 21 ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್ ಅನ್ನು ತೊರೆದರು. ತಮ್ಮ ಕಾನೂನು ಅಧ್ಯಯನವನ್ನು ಪೂರ್ಣಗೊಳಿಸಿದ ಸೈಕಿಯಾ 1997 ರಲ್ಲಿ ಗೌಹಾಟಿ ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡಲು ಪ್ರಾರಂಭಿಸಿದರು. 2021 ರಲ್ಲಿ, ಸೈಕಿಯಾ ಅಸ್ಸಾಂನ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡರು ಮತ್ತು ಈ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಬಳ ಓಟವನ್ನು ಬೆರುಗಣ್ಣಿನಿಂದ ನೋಡಿದ ನಟಿ ಶಾನ್ವಿ
ಕಂಬಳ ಓಟವನ್ನು ಬೆರುಗಣ್ಣಿನಿಂದ ನೋಡಿದ ನಟಿ ಶಾನ್ವಿ
ಕಲಬುರಗಿಯ ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ
ಕಲಬುರಗಿಯ ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ
Video: ಕಾಶಿ ವಿಶ್ವನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಲಾರೆನ್ ಪೊವೆಲ್
Video: ಕಾಶಿ ವಿಶ್ವನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಲಾರೆನ್ ಪೊವೆಲ್
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್