Gautam Gambhir: ಗೌತಮ್ ಗಂಭೀರ್​ಗೆ ಮುಖ್ಯ ಕೋಚ್ ಪಟ್ಟ ಕಟ್ಟಲು ಬಿಸಿಸಿಐ ಒಲವು

Gautam Gambhir: ಪ್ರಸ್ತುತ ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಮಾರ್ಗದರ್ಶಕರಾಗಿರುವ ಗಂಭೀರ್ ಅವರನ್ನು ಮುಖ್ಯ ಕೋಚ್ ಹುದ್ದೆಗೇರುವಂತೆ ಬಿಸಿಸಿಐ ಮನವಿ ಮಾಡಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಭಾಗವಾಗಿರುವ ಗಂಭೀರ್, ಬಿಸಿಸಿಐ ಮನವಿಯನ್ನು ಪುರಸ್ಕರಿಸುತ್ತಾರಾ ಅಥವಾ ತಿರಸ್ಕರಿಸುತ್ತಾರಾ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

Gautam Gambhir: ಗೌತಮ್ ಗಂಭೀರ್​ಗೆ ಮುಖ್ಯ ಕೋಚ್ ಪಟ್ಟ ಕಟ್ಟಲು ಬಿಸಿಸಿಐ ಒಲವು
ಗೌತಮ್ ಗಂಭೀರ್
Follow us
ಪೃಥ್ವಿಶಂಕರ
|

Updated on: May 17, 2024 | 8:30 PM

2024ರ ಟಿ20 ವಿಶ್ವಕಪ್ (T20 World Cup 2024) ಬಳಿಕ ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid) ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಹೀಗಾಗಿ ಬಿಸಿಸಿಐ ಕೂಡ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅಲ್ಲದೆ ರಾಹುಲ್ ದ್ರಾವಿಡ್​ಗೆ ಮತ್ತೊಮ್ಮೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ದ್ರಾವಿಡ್ ಈ ಹುದ್ದೆಯಲ್ಲಿ ಮುಂದುವರೆಯಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಪ್ರಸ್ತುತ ಎನ್​ಸಿಎ ಅಧ್ಯಕ್ಷರಾಗಿರುವ ವಿವಿಎಸ್ ಲಕ್ಷ್ಣಣ್ (VVS Laxman) ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಟೀಂ ಇಂಡಿಯಾಗೆ ವಿದೇಶಿ ಕೋಚ್ ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿತ್ತು. ಆದರೀಗ ಕೇಳಿ ಬರುತ್ತಿರುವ ಸುದ್ದಿಯ ಪ್ರಕಾರ ಭಾರತದ ಮಾಜಿ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ (Gautam Gambhir) ಅವರು ಮುಖ್ಯ ಕೋಚ್ ಹುದ್ದೆಗೇರಬಹುದು ಎಂದು ಹೇಳಲಾಗುತ್ತಿದೆ.

ಬಿಸಿಸಿಐ ಮನವಿ ಮಾಡಿದೆ

ESPNcricinfo ವರದಿಯ ಪ್ರಕಾರ, ಪ್ರಸ್ತುತ ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಮಾರ್ಗದರ್ಶಕರಾಗಿರುವ ಗಂಭೀರ್ ಅವರನ್ನು ಮುಖ್ಯ ಕೋಚ್ ಹುದ್ದೆಗೇರುವಂತೆ ಬಿಸಿಸಿಐ ಮನವಿ ಮಾಡಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಭಾಗವಾಗಿರುವ ಗಂಭೀರ್, ಬಿಸಿಸಿಐ ಮನವಿಯನ್ನು ಪುರಸ್ಕರಿಸುತ್ತಾರಾ ಅಥವಾ ತಿರಸ್ಕರಿಸುತ್ತಾರಾ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಒಂದು ವೇಳೆ ಗಂಭೀರ್ ಈ ಮನವಿಗೆ ಒಪ್ಪಿದರೆ ಅವರು ಕೆಕೆಆರ್ ತಂಡವನ್ನು ತೊರೆಯಬೇಕಾಗುತ್ತದೆ. ಏಕೆಂದರೆ ಬಿಸಿಸಿಐ ಒಪ್ಪಂದಕ್ಕೆ ಒಳಪಡುವವರು ಇತರ ಲೀಗ್​ಗಳಲ್ಲಿ ಕೆಲಸ ಮಾಡುವಂತಿಲ್ಲ.

T20 World Cup 2024: ಒಲ್ಲದ ಮನಸ್ಸಿನಲ್ಲಿ ಟಿ20 ವಿಶ್ವಕಪ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಆಯ್ಕೆ..!

ಹೆಚ್ಚಿನ ಕೋಚಿಂಗ್ ಅನುಭವವಿಲ್ಲ

ವಾಸ್ತವವಾಗಿ ಐಪಿಎಲ್​ನಲ್ಲಿ ಸಾಕಷ್ಟು ಯಶಸ್ಸು ಗಳಿಸಿರುವ ಗೌತಮ್ ಗಂಭೀರ್‌ಗೆ ಅಂತರಾಷ್ಟ್ರೀಯ ಮತ್ತು ದೇಶೀಯ ಮಟ್ಟದಲ್ಲಿ ತರಬೇತಿ ನೀಡಿದ ಅನುಭವವಿಲ್ಲ. ಅವರು ಐಪಿಎಲ್ ಫ್ರಾಂಚೈಸಿಯಲ್ಲಿ ಕೋಚಿಂಗ್ ಸಿಬ್ಬಂದಿಯ ಉಸ್ತುವಾರಿ ವಹಿಸಿದ್ದಾರೆ. ಅವರು ಐಪಿಎಲ್ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ನ ಮಾರ್ಗದರ್ಶಕರಾಗಿದ್ದರು. ಪ್ರಸ್ತುತ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾರ್ಗದರ್ಶಕರಾಗಿರುವ ಗಂಭೀರ್ ಅಡಿಯಲ್ಲಿ ಕೆಕೆಆರ್‌ ತಂಡದ ಪ್ರದರ್ಶನ ಅತ್ಯುತ್ತಮವಾಗಿದೆ. ಆಡಿರುವ 13 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಗೆದ್ದಿರುವ ತಂಡ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ 19 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ವಿಶ್ವಕಪ್ ಹೀರೋ ಗಂಭೀರ್

ಗಂಭೀರ್, 2007 ರ ಟಿ20 ವಿಶ್ವಕಪ್ ಮತ್ತು 2011 ಏಕದಿನ ವಿಶ್ವಕಪ್ ವಿಜೇತ ಭಾರತೀಯ ತಂಡದ ಭಾಗವಾಗಿದ್ದರು. 2011ರ ವಿಶ್ವಕಪ್‌ನ ಫೈನಲ್‌ನಲ್ಲಿ ಅವರು 122 ಎಸೆತಗಳಲ್ಲಿ 97 ರನ್‌ಗಳ ಮ್ಯಾಚ್‌ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದರು. ಇದಲ್ಲದೆ ಗೌತಮ್ ಗಂಭೀರ್ ಐಪಿಎಲ್​ನಲ್ಲೂ ತಮ್ಮ ಸಾಮಥ್ಯ್ರ ತೊರಿದ್ದು, 2011 ರಿಂದ 2017 ರವರೆಗೆ 7 ಐಪಿಎಲ್ ಸೀಸನ್‌ಗಳಿಗೆ ಕೆಕೆಆರ್ ತಂಡದ ನಾಯಕತ್ವ ವಹಿಸಿದ್ದರು. ಈ 7 ಸೀಸನ್​​ಗಳಲ್ಲಿ 5 ಬಾರಿ ತಂಡವನ್ನು ಪ್ಲೇ ಆಫ್‌ಗೆ ಕೊಂಡೊಯ್ದಿದ್ದರು. ಅಲ್ಲದೆ ಅವರ ನಾಯಕತ್ವದಲ್ಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐಪಿಎಲ್ 2012 ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ