IPL 2026: ಈ ದಿನದಿಂದ 19ನೇ ಆವೃತ್ತಿಯ ಐಪಿಎಲ್ ಆರಂಭ; ಬಿಸಿಸಿಐ ಅಧಿಕೃತ ಮಾಹಿತಿ

BCCI Confirms IPL 2026 Start Date: 2026ರ ಐಪಿಎಲ್ ಮಾರ್ಚ್ 28ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಟಿ20 ವಿಶ್ವಕಪ್ ಫೈನಲ್ ನಡುವೆಯೇ ಸ್ಟಾರ್ ಸ್ಪೋರ್ಟ್ಸ್ ಈ ಮಾಹಿತಿ ಬಹಿರಂಗಪಡಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ, ಫೈನಲ್ ಹಾಗೂ ಆರ್‌ಸಿಬಿ ಹೋಮ್ ಪಂದ್ಯಗಳು ನಡೆಯುವ ಸಾಧ್ಯತೆಯಿದೆ. ವಿಧಾನಸಭಾ ಚುನಾವಣೆಗಳಿಂದಾಗಿ, ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

IPL 2026: ಈ ದಿನದಿಂದ 19ನೇ ಆವೃತ್ತಿಯ ಐಪಿಎಲ್ ಆರಂಭ; ಬಿಸಿಸಿಐ ಅಧಿಕೃತ ಮಾಹಿತಿ
Ipl 2026

Updated on: Mar 08, 2026 | 7:37 PM

2026 ರ ಟಿ20 ವಿಶ್ವಕಪ್ ಫೈನಲ್ ನಡುವೆ ಬಿಸಿಸಿಐ, ಕ್ರಿಕೆಟ್ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿಶ್ವ ಕ್ರಿಕೆಟ್​ನ ಅತ್ಯಂತ ಯಶಸ್ವಿ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿ ಇದೇ ಮಾಚ್​ 28 ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದ ನಡುವೆ ಐಪಿಎಲ್​ನ ಅಧಿಕೃತ ಪ್ರಸಾರಕರಾಗಿರುವ ಸ್ಟಾರ್ ಸ್ಪೋರ್ಟ್ಸ್ ತನ್ನ ಸೋಶಿಯಲ್ ಮೀಡಯಾ ಖಾತೆಯಲ್ಲಿ ಐಪಿಎಲ್ ಆರಂಭದ ದಿನಾಂಕವನ್ನು ಬಹಿರಂಗಪಡಿಸಿದೆ.

ಪೂರ್ಣ ವೇಳಾಪಟ್ಟಿ ಬಾಕಿ ಇದೆ

ಆದಾಗ್ಯೂ 2026 ರ ಐಪಿಎಲ್​ನ ಪೂರ್ಣ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಆದರೆ ಈ ಆವೃತ್ತಿಯ ಆರಂಭಿಕ ಪಂದ್ಯ ಯಾವಾಗ ನಡೆಯಲಿದೆ ಎಂಬುದು ಸ್ಪಷ್ಟವಾಗಿದೆ. ಕೆಲವು ದಿನಗಳಿಂದ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಐಪಿಎಲ್ 2026 ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಯಿದೆ. ಮೊದಲ ಪಂದ್ಯವು ಕಳೆದ ಆವೃತ್ತಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರನ್ನರ್ ಅಪ್ ಪಂಜಾಬ್ ಕಿಂಗ್ಸ್ ನಡುವೆ ನಡೆಯುವ ಸಾಧ್ಯತೆಯಿದೆ ಎಂದು ವರದಿಗಳಿವೆ.

ಅದೇ ರೀತಿ, ಐಪಿಎಲ್ 2026 ರ ಫೈನಲ್ ಪಂದ್ಯವೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಗಳಿವೆ. ಹಾಗೆಯೇ ಈ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಐದು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಇದರ ಜೊತೆಗೆ, ಒಂದು ಪ್ಲೇಆಫ್ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯುವ ಸಾಧ್ಯತೆಯಿದೆ. ಆದಾಗ್ಯೂ, ಬಿಸಿಸಿಐ ಶೀಘ್ರದಲ್ಲೇ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಅದರಲ್ಲಿ ಪೂರ್ಣ ಚಿತ್ರಣ ಸಿಗಲಿದೆ.

2  ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಬಿಡುಗಡೆ..?

ಈ ಬಾರಿ, ಐಪಿಎಲ್ 2026 ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಘೋಷಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಈಗಾಗಲೇ ಹರಿದಾಡುತ್ತಿದೆ. ಮೊದಲ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಈಗಾಗಲೇ ಅನುಮೋದಿಸಿದೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ವೇಳಾಪಟ್ಟಿಯನ್ನು ಘೋಷಿಸುವಲ್ಲಿ ಸ್ವಲ್ಪ ವಿಳಂಬವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us